ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)
ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು
ಮೈಸೂರು ತನ್ನದೇ ಆದ ಸುಂದರವಾದ ಇತಿಹಾಸ, ಸ್ವಚ್ಛತೆ ಮತ್ತು ಹಸಿರಿನಿಂದಾಗಿ ಜಗತ್ಪ್ರಸಿದ್ಧವಾಗಿದೆ. ಮೈಸೂರು ಮಹಾರಾಜರು ಅದರಲ್ಲಿಯೂ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಗರವನ್ನು ಯೋಜನಾಬದ್ಧವಾಗಿ ಕಟ್ಟಿದರು. ಈಗಲೂ ಮೈಸೂರು ದೇಶದ ಅತ್ಯಂತ ಸ್ವಚ್ಛ ನಗರಗಳಲ್ಲಿ ಒಂದಾಗಿರುವುದು ಹೆಮ್ಮೆಯ ಸಂಗತಿ.
ಇಂತಹ ಮೈಸೂರಿನ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ನಗರದ ಸೌಂದರ್ಯ ಹಾಳಾಗುವುದಲ್ಲದೆ, ಪರಿಸರ ಮಾಲಿನ್ಯ ಮತ್ತು ಸಾಂಕ್ರಾಮಿಕ ರೋಗಗಳೂ ಹರಡುತ್ತವೆ. ಸ್ವಚ್ಛತೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ. ಆದರೆ, ಬಹಳಷ್ಟು ಜನರು ನಿತ್ಯದ ಕಸವನ್ನು ರಸ್ತೆ ಬದಿ, ಪಾರ್ಕ್‌ಗಳು ಮತ್ತು ಹೊರ ವರ್ತುಲ ರಸ್ತೆಗಳಲ್ಲಿ ಬಿಸಾಡುತ್ತಿರುವುದು ಮೈಸೂರಿನ ನೈರ್ಮಲ್ಯಕ್ಕೆ ಕಂಟಕವಾಗಿದೆ.
ವಿದ್ಯಾವಂತರು ಅಥವಾ ಉನ್ನತ ಪದವಿ ಪಡೆದ ಬಹಳಷ್ಟು ಮಂದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಮನೋಭಾವ ಕಂಡುಬರುತ್ತಿದೆ. ಪರಿಸರ ಪ್ರಜ್ಞೆ ಮತ್ತು ಸಾಮಾಜಿಕ ಜವಾಬ್ದಾರಿಯ ಕೊರತೆಯೇ ಅವರ ಈ ಮನೋಭಾವಕ್ಕೆ ಮೂಲ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದಾಗ ಸಿಗುವ ಶಿಕ್ಷೆ ಅಥವಾ ದಂಡದ ಬಗ್ಗೆ ಅನೇಕ ವಿದ್ಯಾವಂತರಿಗೆ ಭಯ ಇಲ್ಲ ಅನಿಸುತ್ತದೆ ಅಥವಾ ನಾನು ಓದಿದ್ದೇನೆ, ಆದರೆ ನನ್ನ ಸ್ವಚ್ಛತೆಯ ಕೆಲಸವನ್ನು ಪಾಲಿಕೆ ಅಥವಾ ಸ್ವಚ್ಛತಾ ಸಿಬ್ಬಂದಿ ಮಾಡುತ್ತಾರೆ ಎಂಬ ಮನೋಭಾವದಿಂದ ಈ ರೀತಿ ಮಾಡುತ್ತಿದ್ದಾರೆ ಅನಿಸುತ್ತದೆ. ಹಾಗಾಗಿ ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿಯನ್ನೂ ಕಡ್ಡಾಯವಾಗಿ ಮೂಡಿಸುವುದು ಸೂಕ್ತ.
ಸ್ವಚ್ಛ ಭಾರತ ಮತ್ತು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕನೂ ಸ್ವಯಂಪ್ರೇರಿತನಾಗಿ ಜವಾಬ್ದಾರಿಯುತವಾಗಿ ವರ್ತಿಸುವುದು ಅತ್ಯಗತ್ಯ. ಸ್ವಚ್ಛತೆಯೇ ನೈಜ ಆರೋಗ್ಯ ಮತ್ತು ಪ್ರಗತಿಯ ಸಂಕೇತವಾಗಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿದದ ಹೊರತು ಇದಕ್ಕೆ ಶಾಶ್ವತ ಪರಿಹಾರ ಸಿಗುವುದಿಲ್ಲ.
” ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಅಥವಾ ಖಾಲಿ ನಿವೇಶನಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು ಶಿಕ್ಷಾರ್ಹ ಅಪರಾಧವಾಗಿದೆ. ನಿಯಮ ಉಲ್ಲಂಸಿ ಕಸ ಹಾಕುವವರಿಗೆ ಪಾಲಿಕೆಯು ೫೦೦ ರೂ.ಗಳಿಂದ ೧ ಸಾವಿರ ರೂ. ವರೆಗೆ ದಂಡ ವಿಧಿಸುತ್ತದೆ”
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…