Andolana originals

ಚರಂಡಿಯಲ್ಲಿ ತುಂಬಿ ತುಳುಕುತ್ತಿರುವ ಕಸ; ಇದು ಸ್ವಚ್ಛನಗರಿ ಮೈಸೂರಿನ ದುಸ್ಥಿತಿ

ಮೈಸೂರು: ರಾಜ್ಯದಾದ್ಯಂತ ಡೆಂಗ್ಯು ಅಬ್ಬರಿಸುತ್ತಿದ್ದರೆ ಇತ್ತ ಮೈಸೂರಿನಲ್ಲಿ ಚರಂಡಿಗಳಲ್ಲಿ ಕಸ ತುಂಬಿ ಕೊಳೆತು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನು ವಂತೆ ನಿಶ್ಚಿಂತೆಯಿಂದಿದ್ದಾರೆ. ದೂರು ನೀಡಲು ಬಂದವ ರಿಗೇ ಜೋರು: ನಗರದ ಹಳೆಯ ಆರ್‌ಎಂಸಿ ಹಿಂಭಾಗದ ಮೇದರ್ ಬ್ಲಾಕ್‌ನ ಸಮೀಪದಲ್ಲೇ ಇರುವ ದೊಡ್ಡ ಮೋರಿ ತುಂಬಿ ಕಳೆದ ೧೫ ದಿನಗಳಿಂದ ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದೆ. ಚರಂಡಿ ಉದ್ದಕ್ಕೂ ಪೇಪರ್, ಪ್ಲಾಸ್ಟಿಕ್ ಕಸ ತುಂಬಿ ಕೊಂಡು ದುರ್ವಾಸನೆ ಬೀರುತ್ತಿದೆ.

ಇಡೀ ಚರಂಡಿಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಯಾಗುತ್ತಿದ್ದು, ಸುತ್ತಲಿನ ನಿವಾಸಿಗಳು ಡೆಂಗ್ಯು ಮೊದಲಾದ ರೋಗಗಳು ಹರಡಬಹುದೆಂಬ ಭಯದಲ್ಲಿದ್ದಾರೆ. ಜನರು ಗಾಬರಿಗೊಂಡು ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಮಹಾನಗರ ಪಾಲಿಕೆ ವಲಯ ಕಚೇರಿ-೬ಕ್ಕೆ ದೂರು ನೀಡಲು ಹೋದರೆ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ದೂರು ಕೊಡಲು ಬಂದವರನ್ನು ಕಚೇರಿಯಿಂದ ಹೊರ ಹಾಕಿದ್ದಾರೆ. ರಸ್ತೆಗೂ ಹರಿದ ಕೊಳಚೆ ನೀರು: ದೊಡ್ಡ ಮೋರಿಯಲ್ಲಿ ಮುಂದೆ ಇರುವ ಸೇತುವೆಯ ಸಮೀಪ ಕೊಳಚೆ ನೀರು ಸರಿಯಾಗಿ ಹರಿಯದೇ ಕಟ್ಟಿಕೊಂಡಿದೆ. ಕೆಲವೊಮ್ಮೆ ಮೋರಿ ನೀರು ಕೋಡಿ ಬಿದ್ದಂತೆ ರಸ್ತೆಯ ಮೇಲೆ ಹರಿಯುತ್ತದೆ. ಮಳೆ ಬಂದರೆ ಈ ನೀರು ಮನೆಯೊಳಗೂ ನುಗ್ಗುತ್ತದೆ. ದುರ್ವಾಸನೆಯನ್ನು ಸಹಿಸಿಕೊಂಡೇ ಜನರು ಬದುಕಬೇಕಾಗಿದೆ. ನಗರ ಪಾಲಿಕೆ ಅಧಿಕಾರಿಗಳು ಮನೆ ಮನೆ ಕಸ ವಿಲೇವಾರಿ ಮಾಡಿದರೆ ಸ್ವಚ್ಛತೆ ಕೆಲಸ ಮುಗಿಯಿತು, ಮೈಸೂರು ಸ್ವಚ್ಛ ನಗರಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ನಗರದಲ್ಲಿ ಕೆಲವು ಮುಖ್ಯ ರಸ್ತೆಗಳನ್ನು ಹೊರತು ಪಡಿಸಿದರೆ ಬಡಾವಣೆಗಳಲ್ಲಿ ಸಂಗ್ರಹವಾಗುವ ಕಸವನ್ನು ಸ್ವಚ್ಛ ಮಾಡುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ. ನಗರ ಪಾಲಿಕೆ ಸದ್ಯರಾಗಿದ್ದವರ ಅಽಕಾರಾವಽ ಮುಗಿದಿದ್ದು, ಅಧಿಕಾರಿಗಳೇ ಉಸ್ತುವಾರಿಯಾಗಿದ್ದಾರೆ. ಜನರು ಅಽಕಾರಿಗಳಿಗೆ ದೂರು ನೀಡಿದರೂ ತಮಗೆ ಸಂಬಂಧವಿಲ್ಲ ಎನ್ನುವಂತೆ ಸಂಬಂಧಪಟ್ಟವರು ವರ್ತಿಸು ತ್ತಿರುವುದರಿಂದ ಜನರು ಆಕ್ರೋಶಗೊಂಡಿದ್ದಾರೆ.

ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ: ಡಾ. ವೆಂಕಟೇಶ್ ರಾಜ್ಯದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮೈಸೂರು ನಗರದಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದು ಮಹಾನಗರ ಪಾಲಿಕೆ ಆರೋಗ್ಯಾಽಕಾರಿ ಡಾ. ವೆಂಕಟೇಶ್ ಹೇಳಿದ್ದಾರೆ . ನೈಟ್ ರೌಂಡ್ಸ್ ಮಾಡಿ ಸಾರ್ವಜನಿಕರು ರಸ್ತೆಯಲ್ಲಿ ಕಸ ಬಿಸಾಡದಂತೆ ನಿಗಾ ವಹಿಸಿದ್ದೇವೆ. ಮನೆ ಮನೆ ಕಸ ಸಂಗ್ರಹಣೆ ಮಾಡುತ್ತಿದ್ದೇವೆ. ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ಮಾತನಾಡಿ ಯುಜಿಡಿಗಳಲ್ಲಿ ಕಸ ಸಂಗ್ರಹವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪಾರ್ಕ್‌ಗಳಲ್ಲಿ ಫಾಗಿಂಗ್ ಮಾಡುತ್ತಿದ್ದೇವೆ. ಮನೆಯ ಸುತ್ತ ಮುತ್ತಲೂ ನೀರು ನಿಲ್ಲದ ಹಾಗೆ ಕ್ರಮ ಕೈಗೊಳ್ಳುವಂತೆ ಶಾಲೆಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ದೊಡ್ಡ ಮೋರಿ ಭರ್ತಿಯಾಗಿ ೧೫ ದಿನಗಳಾಗಿದೆ. ಇಲ್ಲಿಗೆ ಸಮೀಪದ ಹಣ್ಣಿನ ಮಾರುಕಟ್ಟೆಯಲ್ಲಿ ನಿತ್ಯ ಕಸವನ್ನು ಸಂಗ್ರಹಿಸಲಾಗುವುದಿಲ್ಲ. ಚರಂಡಿ ತುಂಬಿ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಮಳೆ ಹೆಚ್ಚಾದರೆ ಮನೆಗಳಿಗೂ ಚರಂಡಿ ನೀರು ನುಗ್ಗುತ್ತದೆ. ಪಾಲಿಕೆಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. – ಸುರೇಶ್, ಸ್ಥಳೀಯರು

ಕೂಡಲೇ ಸ್ವಚ್ಛ ಮಾಡಲು ಕ್ರಮ: ಸಿಂಧು
ಮೇದರ ಬ್ಲಾಕ್‌ ವಲಯ ಕಚೇರಿ -4 ಮತ್ತು 6ರ ನಡುವೆ ಬರುವ ಭಾಗವಾಗಿದ್ದು, ಯಾರ ನಿರ್ವಹಣೆಗೆ ಬರುತ್ತದೆ ಎಂಬುದನ್ನು ತಿಳಿದು ಚರಂಡಿಯನ್ನು ಕೂಡಲೇ ಸ್ವಚ್ಛಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುತ್ತೇನೆ – ಸಿಂಧು, ಕಾರ್ಯಪಾಲಕ ಅಭಿಯಂತರರು, ಮಹಾನಗರ ಪಾಲಿಕೆ

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

2 hours ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

2 hours ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

3 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

4 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

13 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

13 hours ago