Mysore
22
clear sky

Social Media

ಮಂಗಳವಾರ, 31 ಮಾರ್ಚ್ 2026
Light
Dark

ಓದುಗರ ಪತ್ರ: ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಯಾಗಲಿ

ಓದುಗರ ಪತ್ರ

ಪಾರಂಪರಿಕ ನಗರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ನಿತ್ಯ ಭೇಟಿ ನೀಡುವ ಭಕ್ತರು, ದೇಶ ಹಾಗೂ ವಿದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯ ಆಷಾಢ ಮಾಸದಲ್ಲಂತೂ ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಧಾರ್ಮಿಕ ಕ್ಷೇತ್ರಗಳಿಗೆ ಜನರು ಬಂದಾಗ ವಸ್ತ್ರ ಸಂಹಿತೆ ಪಾಲಿಸಬೇಕು.

ಧಾರ್ಮಿಕ ಕ್ಷೇತ್ರಗಳಿಗೆ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಹೇಳಿದ್ದಾರೆ. ಹಾಗಾಗಿ ಚಾಮುಂಡಿ ಬೆಟ್ಟದ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಶ್ರದ್ಧೆಯಿಂದ ಬರುವ ಇತರರಿಗೆ ಆಗುವ ಕಿರಿ ಕಿರಿಯೂ ತಪ್ಪುತ್ತದೆ. ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧಿಸಬೇಕು.

ಇತ್ತೀಚೆಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೆಯೋ ಚಾಮುಂಡೇಶ್ವರಿ ದೇವಿಯ ಮೂಲ ವಿಗ್ರಹದ ವೀಡಿಯೊ ಮಾಡುತ್ತಿದ್ದಾರೆ, ಇದು ಸರಿಯೇ ಎಂದು ಅವರು ಹೇಳಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

-ಸಿದ್ದಲಿಂಗೇಗೌಡ. ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು

Tags:
error: Content is protected !!