Andolana originals

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ೨ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪಟ್ಟಣ ಪಂಚಾಯಿತಿಯವರು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ವಾಡ್ನಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲು ಉದ್ದೇಶಿಸಲಾಗಿತ್ತು. ಪ್ರಾರಂಭದಲ್ಲಿ ಪಟ್ಟಣ ಪಂಚಾಯಿತಿ ಖಾಸಗಿ ಬಸ್ ನಿಲ್ದಾಣದ ಸಮೀಪ ಶಾಸಕರ ಅನುದಾನದಲ್ಲಿ ೯ ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಯಿತು. ಪಟ್ಟಣಕ್ಕೆ ಬರುವ ಸಾರ್ವಜನಿಕರು, ಅಂಗಡಿ ಮಾಲೀಕರು, ಕೂಲಿ ಕಾರ್ಮಿಕರು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಂಡಿದ್ದರು. ಕೆಲವು ದಿನಗಳ ನಂತರ ಯಂತ್ರಗಳೆಲ್ಲ ಕೆಟ್ಟು ಹೋಗಿದ್ದವು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ನಂತರ ದುರಸ್ತಿ ಮಾಡಲಾಗಿದ್ದು, ಪಟ್ಟಣದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

ಕಳೆದ ಅವಧಿಯಲ್ಲಿ ಶಾಸಕರಾಗಿದ್ದ ಆರ್.ನರೇಂದ್ರ ಅವರು ೬ನೇ ವಾರ್ಡ್ ಮತ್ತು ೯ನೇ ವಾರ್ಡಿನ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ತಲಾ ೧೨ ಲಕ್ಷ ರೂ. ವೆಚ್ಚದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿಸಿ ಚಾಲನೆ ನೀಡಿದ್ದರು. ಕೆಲವು ದಿನಗಳ ನಂತರ ಸಮರ್ಪಕ ನಿರ್ವಹಣೆ ಮಾಡದೇ ಕೆಟ್ಟುಹೋಗಿವೆ.

ಇದಲ್ಲದೆ ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲಿನ ಗಾಜುಗಳನ್ನು ಯಾರೋ ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಆದರೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸಿಲ್ಲ, ಇದರಿಂದ ೨೪ ಲಕ್ಷ ರೂ. ಸಾರ್ವಜನಿಕರ ಹಣ ವ್ಯರ್ಥವಾಗಿದೆ.

ನಲ್ಲಿ ಹಾಗೂ ಕಾಯಿನ್ ಬಾಕ್ಸ್ ನಾಪತ್ತೆ: ೯ನೇ ವಾರ್ಡಿನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ತುಂಬಿಸಿಕೊಳ್ಳಲು ಅಳವಡಿಸಲಾಗಿದ್ದ ಪೈಪ್ ಹಾಗೂ ೫ ರೂ. ನಾಣ್ಯ ಹಾಕಲು ಇಡಲಾಗಿದ್ದ ಕಾಯಿನ್ ಬಾಕ್ಸ್ ಕೂಡ ನಾಪತ್ತೆಯಾಗಿದೆ. ಸರ್ಕಾರದ ಆಸ್ತಿಯನ್ನು ಸಂರಕ್ಷಣೆ ಮಾಡಬೇಕಾದ ಹನೂರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಉಪಯೋಗಕ್ಕೆ ಬಾರ ದಂತಾಗಿದೆ. ಇದೀಗ ಬೇಸಿಗೆ ಪ್ರಾರಂಭವಾಗಿರುವುದರಿಂದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನ ಅಗತ್ಯವಿದೆ. ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಮಾಡಿಸಬೇಕಿದೆ.

” ಹನೂರಿನ ೯ನೇ ವಾರ್ಡಿನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ಗುಣಮಟ್ಟದಿಂದ ಕೂಡಿತ್ತು. ಇದು ಕೆಲವು ತಾಂತ್ರಿಕ ದೋಷಗಳಿಂದ ಕೆಟ್ಟಿದ್ದು, ನಂತರ ಇದನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ. ಬೇಸಿಗೆಕಾಲದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆ ಇದೆ. ಪಟ್ಟಣ ಪಂಚಾಯಿತಿಯವರು ಇದನ್ನು ದುರಸ್ತಿ ಮಾಡಿದರೆ ಈ ಭಾಗದ ನಿವಾಸಿಗಳಿಗೆ ಅನುಕೂಲವಾಗಲಿದೆ.”

-ನಾಗೇಂದ್ರ, ೯ನೇ ವಾರ್ಡಿನ ನಿವಾಸಿ

” ಹನೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಟ್ಟಣ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ನೀಡುವಂತೆ ಅಭಿಯಂತರರಿಗೆ ಸೂಚನೆ ನೀಡಿದ್ದು, ಇನ್ನೂ ಮಾಹಿತಿ ನೀಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದರೆ ಶೀಘ್ರದಲ್ಲಿಯೇ ದುರಸ್ತಿ ಮಾಡಿಸಲಾಗುವುದು.”

-ರೇಖಾ, ಮುಖ್ಯಾಧಿಕಾರಿ, ಹನೂರು ಪಪಂ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಿವು ಹೆಚ್ಚಿಸುವ ಚೆನ್ನಬಸವಣ್ಣ ಅವರ ಲೇಖನ

ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…

21 mins ago

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

24 mins ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

27 mins ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

31 mins ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

39 mins ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

52 mins ago