ಹೇಮಂತ್‌ಕುಮಾರ್
ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ ಎದುರಾಗಬಹುದಾದ ಗ್ರಾಮಗಳ ಕುರಿತು ಗಮನ ಹರಿಸಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಬೇಸಿಗೆಗೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.
ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಜಿಲ್ಲೆಯ ೨೮೯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂಬ ವರದಿಯಿದ್ದು, ಗುರುತಿಸಲಾಗಿರುವ ೨೫೬ ಕೊಳವೆ ಬಾವಿಗಳ ಪೈಕಿ ೧೬೭ರಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿದೆ. ಈಗಾಗಲೇ ೧೧ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ೩೩ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಉದ್ದೇಶಿಸಲಾಗಿದೆ. ಸದ್ಯ ಕೆ. ಆರ್.ಪೇಟೆಯ ೨ ಹಾಗೂ ನಾಗಮಂಗಲದ ೧ ಗ್ರಾಮ ಸೇರಿ ೩ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ಬಿದರಹಳ್ಳಿ, ಮಾಳಗೂರು, ರಾಯಸಮುದ್ರ, ಈಚಲುಗುಡ್ಡೆ ಕಾವಲು, ತೊಳಸಿಗೇಟ್, ಐಚನಹಳ್ಳಿ, ಮಳವಳ್ಳಿ ತಾಲ್ಲೂಕಿನ ಬಾಳೆಹೊನ್ನಿಗ, ಮಂಡ್ಯ ತಾಲ್ಲೂಕಿನ ಮೊಳೆಕೊಪ್ಪಲು, ತಗ್ಗಹಳ್ಳಿ, ಟಿ.ಮಲ್ಲಿಗೆರೆ, ನಾಗಮಂಗಲ ತಾಲ್ಲೂಕಿನ ಬೇಗಮಂಗಲ ಈ ಎಲ್ಲ ಗ್ರಾಮಗಳಿಗೆ ಈಗಾಗಲೇ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ, ನಾಗಮಂಗಲ ತಾಲ್ಲೂಕಿನ ಅಂಚೆಭೂವನಹಳ್ಳಿ, ಕೆ.ಆರ್.ಪೇಟೆ ತಾಲ್ಲೂಕಿನ ಮುರುಗನಕೊಪ್ಪಲು ಹಾಗೂ ಅರೆಬೊಪ್ಪನಹಳ್ಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಇಲಾಖೆಯು ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರನ್ನು ಒದಗಿಸಲು ೭ ಕೋಟಿ ರೂ.ವೆಚ್ಚದಲ್ಲಿ ೨೨೨ ಬೋರ್ ವೆಲ್‌ಗಳನ್ನು ಕೊರೆಸಿ, ಪಂಪಿಂಗ್ ಮೆಷಿನ್ ಹಾಗೂ ಪೈಪ್‌ಲೈನ್ ಅಳವಡಿಸಲು ಮುಂದಾಗಿದೆ. ಜಿಲ್ಲೆಯಲ್ಲಿ ಕಳೆದ ಏಪ್ರಿಲ್ವರೆಗೆ ೧,೦೬೧ ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದು, ಅದರಲ್ಲಿ ಸುಮಾರು ೩೦೦ ಕೊಳವೆಬಾವಿಗಳು ವಿಫಲಗೊಂಡಿರುವುದು ಬೆಳಕಿಗೆ ಬಂದಿದೆ.ವಿಫಲಗೊಂಡವುಗಳಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನಲ್ಲೇ ಹೆಚ್ಚು ಎಂದರೆ ೧೭೦ ಕೊಳವೆ ಬಾವಿಗಳಲ್ಲಿ ಅತ್ಯಂತ ಕಡಿಮೆ ನೀರು ಬಂದಿದೆ.
ಮದ್ದೂರು ತಾಲ್ಲೂಕಿನಲ್ಲಿ ೩೯, ಮಳವಳ್ಳಿ ತಾಲ್ಲೂಕಿನಲ್ಲಿ ೫೭, ಮಂಡ್ಯ ತಾಲ್ಲೂಕಿನಲ್ಲಿ ೫೯, ನಾಗಮಂಗಲ ತಾಲ್ಲೂಕಿನಲ್ಲಿ ೩೮, ಪಾಂಡವಪುರ ತಾಲ್ಲೂಕಿನಲ್ಲಿ ೧೦ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ೨೬ ಸೇರಿದಂತೆ ೩೦೦ ಕೊಳವೆ ಬಾವಿಗಳು ಬಹುತೇಕ ವಿಫಲಗೊಂಡಿವೆ. ಜಿಲ್ಲೆಯಲ್ಲಿ ಒಟ್ಟು ೬೭೭ ಶುದ್ಧಕುಡಿಯುವ ನೀರಿನ ಘಟಕಗಳಿದ್ದು, ಇದರಲ್ಲಿ ೬೫೩ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ೨೪ ಘಟಕಗಳು ಹಾಳಾಗಿದ್ದು, ೫೫೩ ಘಟಕಗಳ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದು, ೪೧೧ ಘಟಕಗಳನ್ನು ಆಯಾ ಗ್ರಾಪಂಗಳಿಗೆ ಹಸ್ತಾಂತರಿಸಲಾಗಿದೆ. ಇನ್ನೂ ೪೫ ಘಟಕಗಳನ್ನು ಸ್ಥಳಾಂತರಗೊಳಿಸಬೇಕಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ತಿಳಿಸಿದೆ.
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ:
ಮಳೆ ಕೊರತೆ ಹಿನ್ನೆಲೆಯಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುನ್ನೆಚ್ಚರಿಕೆಯಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪ್ರಮೋದ್ ಅವರು ಹೇಳಿದ್ದಾರೆ. ಈಗಾಗಲೇ ಸಮಸ್ಯೆ ಎದುರಾಗಬಹುದಾದ ೨೮೯ ಗ್ರಾಮಗಳನ್ನು ಗುರುತಿಸಲಾಗಿದ್ದು, ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದಂತೆ ಟ್ಯಾಂಕರ್ ಮೂಲಕ ಮೂರು ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿತ್ತು. ಈಗ ಎರಡು ಗ್ರಾಮಗಳಲ್ಲಿ ಸಮಸ್ಯೆ ಬಗೆಹರಿಸಲಾಗಿದ್ದು, ಶ್ರೀರಂಗಪಟ್ಟಣ ತಾಲ್ಲೂಕಿನ ಕೋಡಿಶೆಟ್ಟಿಪುರಕ್ಕೆ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ೨೦೨೭ರ ಅಂತ್ಯದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಪೂರ್ಣಗೊಳ್ಳಲಿದ್ದು, ಎಲ್ಲ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಿದ್ದೇವೆ. ಸಾರ್ವಜನಿಕರು ನೀರು ವ್ಯರ್ಥವಾಗದಂತೆ ಜಾಗ್ರತೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ದಾಸೇಗೌಡ ಸರಗೂರು ಅಸಮರ್ಪಕ ವ್ಯವಸ್ಥೆಯಿಂದ ನೀರು ಪೋಲು;ನಿರ್ವಹಣೆಯಿಲ್ಲದ ಶೌಚಾಲಯ, ಕಸದ ರಾಶಿ ತಾಂಡವ ಸರಗೂರು: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ…