Andolana originals

ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ

 ಎಂ.ನಾರಾಯಣ

ತಿ.ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ೪-೫ ತಿಂಗಳುಗಳಿಂದ ಜನರಿಗೆ ಸಮಸ್ಯೆ 

ತಿ.ನರಸೀಪುರ: ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿ ೪-೫ ತಿಂಗಳಿಂದ ಜನತೆ ಪರಿತಪಿಸುತ್ತಿದ್ದಾರೆ.

ಸೋಸಲೆ ಹೋಬಳಿಯ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಾಗಿ ಪ್ರತಿನಿತ್ಯ ಕುಡಿಯುವ ನೀರಿನ ಸಮಸ್ಯೆ ಉದ್ಭವಗೊಂಡು ಹಲವು ಬಾರಿ ಕಚೇರಿಗೆ ಹೋಗಿ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಜೆಇ ಅಮೀನ್ ಅವರಿಗೆ ಮನವಿ ಮಾಡಿದ್ದರೂ ಸಮಸ್ಯೆ ಬಗೆಹರಿದಿಲ್ಲ.

ಈ ಉಪವಿದ್ಯುತ್ ಕೇಂದ್ರದಿಂದ ಹಲವು ಗ್ರಾಮಗಳಿಗೆ ವಿದ್ಯುತ್ ಸರಬರಾಜಾಗುತ್ತಿದ್ದು, ಆ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ಆದರೆ ಉಪಕೇಂದ್ರದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಇದರಿಂದ ಕುಡಿ ಯುವ ನೀರಿನ ಟ್ಯಾಂಕ್‌ನ ಮೋಟಾರ್‌ಗೆ ವಿದ್ಯುತ್ ಸಂಪರ್ಕವಿಲ್ಲದೆ ಟ್ಯಾಂಕ್ ಪೂರ್ಣ ವಾಗಿ ಲೋಡ್ ಆಗುವುದಿಲ್ಲ. ಆದ್ದರಿಂದ ಸಮರ್ಪಕ ವಾಗಿ ಕುಡಿಯುವ ನೀರು ಆರಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದನಹುಂಡಿ ಸೋಮಣ್ಣ ‘ಆಂದೋಲನ’ದೊಂದಿಗೆ ಮಾತನಾಡಿ, ಜೆಇ ಅಮೀನ್‌ರವರಿಗೆ ದೂರವಾಣಿ ಕರೆ ಮಾಡಿದರೂ ಸ್ವೀಕರಿಸುವುದಿಲ್ಲ. ದುರಸ್ತಿ ಕಾರಣ ಹೇಳಿ ಯಾವುದೇ ಗ್ರಾಮದಲ್ಲಿ ಸಣ್ಣ ವಿದ್ಯುತ್ ಸಮಸ್ಯೆಯಾದರೂ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ಪೂರ್ಣ ಆಗುವವರೆಗೂ ಗಂಟೆಗಟ್ಟಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದರಿಂದಪ್ರತಿನಿತ್ಯ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದರು.

ಇದರಿಂದ ರಾತ್ರಿ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದ್ದು, ಈ ಬಗ್ಗೆ ತಿ.ನರಸೀಪುರದ ಕಾರ್ಯಪಾಲಕ ಅಭಿಯಂತರ ವೀರೇಶ್ ರವರಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ವಿದ್ಯುತ್ ಸಮಸ್ಯೆ ಮಾತ್ರ ಬಗೆಯುತ್ತಿಲ್ಲ. ಉತ್ತಮ ಮಳೆಯಾಗಿ ಬೋರ್‌ವೆಲ್‌ಗಳಲ್ಲಿ ನೀರು ಇದ್ದರೂ ನಮಗೆ ಕುಡಿಯುವ ನೀರಿನ ಸಮಸ್ಯೆ ಮಾತ್ರ ಬಗೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದರೆ ಪಟ್ಟಣದ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

” ‘ದೂರುಗಳಿಗೆ ಸ್ಪಂದನೆಯಿಲ್ಲ’: ಈ ಭಾಗದ  ವಿದ್ಯುತ್ ಸಮಸ್ಯೆ ಅರಿತು ಪ್ರತ್ಯೇಕ ಉಪ ವಿದ್ಯುತ್ ಕೇಂದ್ರವನ್ನು ತೆರೆಯಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಇಂಜಿನಿಯರ್ ವರ್ಗಾವಣೆಯಾಗಿ ಹೋದ ನಂತರ ನೂತನವಾಗಿ ಬಂದಿರುವ ಜೆಇ ಅಮೀನ್‌ರವರು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುತ್ತಿಲ್ಲ. ಕಚೇರಿ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ.”

-ಸೋಮಣ್ಣ, ಗ್ರಾಪಂ ಮಾಜಿ ಸದಸ್ಯ

” ವಿದ್ಯುತ್ ಲೈನ್ ಕೆಲಸ ಮಾಡುವಾಗ ವಿದ್ಯುತ್ ಸ್ಥಗಿತಗೊಳಿಸುತ್ತಾರೆ. ಜೆಇ ಹೊಸಬರಾಗಿದ್ದರಿಂದ ಅವರಿಗೆ ಹೆಚ್ಚಿನ ಮಾಹಿತಿ ಇಲ್ಲದ ಕಾರಣ ಸಮಸ್ಯೆಯಾಗುತ್ತಿದೆ. ಗ್ರಾಮಸ್ಥರು ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಯಾವುದೇ ದುರಸ್ತಿ ಕಾರ್ಯ ಮಾಡಬೇಕಾದರೂ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ತೆಗೆಯಲಾಗುತ್ತಿದೆ. ಆದ್ದರಿಂದ ಸಮಸ್ಯೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತ್ಯೇಕ ಲೈನ್ ವ್ಯವಸ್ಥೆ ಕಲ್ಪಿಸಿ ವಿದ್ಯುತ್ ಸಮಸ್ಯೆ ಬಗೆಹರಿಸಲಾಗುವುದು.”

-ವೀರೇಶ್, ಇಇ, ತಿ.ನರಸೀಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

3 hours ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

3 hours ago

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…

3 hours ago

ಓದುಗರ ಪತ್ರ: ‘ಉದಯರವಿ’ಯನ್ನು ಸ್ಮಾರಕವನ್ನಾಗಿ ರೂಪಿಸಿ

ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…

3 hours ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಸಮರ್ಥ ಕಾಯ್ದೆ ಪಾಲನಾ ವ್ಯವಸ್ಥೆ ಮುಖ್ಯ

ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…

3 hours ago

ಕಾಫಿ ಬೆಳೆಗಾರರ ನಿದ್ದೆಗೆಡಿಸಿದ ದರ ಕುಸಿತ

ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…

3 hours ago