ಅಭಿವೃದ್ಧಿಕೆಲಸಗಳು, ನಾಯಕತ್ವ ಗುಣ, ನಡವಳಿಕೆಯಿಂದ ಎಲ್ಲರ ಮನಗೆದ್ದಿದ್ದ ನಾಯಕ
ಮಂಜು ಕೋಟೆ
ಎಚ್.ಡಿ.ಕೋಟೆ: ಜನಪ್ರತಿನಿಧಿಯಾಗಿ ಮತ್ತು ರಾಜಕಾರಣಿಯಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದರೆ ಜನ ಸಾಮಾನ್ಯರು ಅಂಥವರನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ ಎಂಬುದಕ್ಕೆ ಮಾಜಿ ಸಂಸದ ಆರ್. ಧ್ರುವನಾರಾಯಣ ಸಾಕ್ಷಿಯಾಗಿ ದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು ತಮ್ಮ ಅಸ್ತಿತ್ವ ಮತ್ತು ಹೆಸರನ್ನು ಉಳಿಸಿಕೊಳ್ಳುವುದೇ ಕಷ್ಟಕರವಾಗಿರುವ ಸಂದರ್ಭದಲ್ಲಿ ಎರಡು ವರ್ಷಗಳ ಹಿಂದೆ ಅಕಾಲಿಕವಾಗಿ ನಿಧನರಾಗಿದ್ದ ಆರ್.ಧ್ರುವ ನಾರಾಯಣ ಅವರು ಈಗಲೂ ಹಿಂದುಳಿದ ತಾಲ್ಲೂಕಿನ ಜನರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.
ಜಿಲ್ಲೆಯಲ್ಲಿ ಹಿಂದುಳಿದ ಕ್ಷೇತ್ರವಾದ ಕೋಟೆ ಅಭಿವೃದ್ಧಿಗೆ ಸಂಸದರಾಗಿ ಕ್ರಿಯಾಶೀಲ ಕೆಲಸ ಮಾಡಿದವರು ಧ್ರುವನಾರಾಯಣ ಎಂಬ ಮಾತು ಜನ ಜನಿತವಾಗಿದೆ.
ಹತ್ತು ವರ್ಷಗಳ ಕಾಲ ಸಂಸದರಾಗಿ ಕೆಲಸ ನಿರ್ವಹಿಸಿದ ಸಂದರ್ಭದಲ್ಲಿ ಧ್ರುವನಾರಾಯಣ ಅವರು ಚಾ.ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೋಟೆ ಕ್ಷೇತ್ರದ ಬಗ್ಗೆ ಹೆಚ್ಚು ಗಮನಹರಿಸಿ ಹೊಸ ಯೋಜನೆಗಳಾದ ಏಕಲವ್ಯ ಶಾಲೆ, ಆದರ್ಶ ಶಾಲೆ, ಹೆರಿಗೆ ಮತ್ತು ತಾಯಿ ಮಕ್ಕಳ ಆಸ್ಪತ್ರೆ, ತಂಬಾಕು ಮಂಡಳಿಯ ಮತ್ತೊಂದು ಘಟಕ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅರಣ್ಯ ಪ್ರದೇಶದಲ್ಲಿ ರೈಲ್ವೆ ಕಂಬಿ ನಿರ್ಮಾಣ, ಗಿರಿಜನರ ಸಾವಿರಾರು ಕುಟುಂಬಗಳಿಗೆ ಮನೆ ನಿರ್ಮಾಣ, ಪ್ರಮುಖ ರಸ್ತೆಗಳ ನಿರ್ಮಾಣ ಸೇರಿದಂತೆ ಅನೇಕ ಕೆಲಸ ಕಾರ್ಯಗಳಿಗೆ ಒತ್ತು ನೀಡಿ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದರು. ತಿಂಗಳಲ್ಲಿ ೪-೫ ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ ಕೆಲಸ ನಿರ್ವಹಿಸಿದ್ದರು.
ಸಂಸದರೊಬ್ಬರು ತಮ್ಮ ಅಧಿಕಾರ ಅವಧಿಯಲ್ಲಿ ಇಷ್ಟೊಂದು ಕೆಲಸ ಮಾಡಬಹುದೆಂಬುದನ್ನು ತೋರಿಸಿಕೊಟ್ಟಿದ್ದರು. ಧ್ರುವನಾರಾಯಣ ಅವರು ಪ್ರಥಮ ಬಾರಿ ಸಂಸದರಾದ ಸಂದರ್ಭದಲ್ಲಿ ಅದೇ ಪಕ್ಷದ ಶಾಸಕರಾಗಿದ್ದ ಬೀಚನಹಳ್ಳಿ ಚಿಕ್ಕಣ್ಣ, ಎರಡನೇ ಬಾರಿ ಸಂಸದರಾದ ಸಂದರ್ಭದಲ್ಲಿ ಜಾ.ದಳ ಶಾಸಕರಾಗಿದ್ದ ಚಿಕ್ಕಮಾದು ಅವರ ಜೊತೆಯಲ್ಲಿ ಉತ್ತಮ ಒಡನಾಟವಿರಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೂಲಕ ವಿಶೇಷ ಅನುದಾನ ತರುವ ನಿಟ್ಟಿನಲ್ಲಿ ಸಾಥ್ ನೀಡಿದ್ದರಿಂದ ಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಗ್ರಾಮಗಳ ವ್ಯಾಪ್ತಿಯ ಪ್ರತಿಯೊಂದು ರಸ್ತೆಯೂ ಸಿಮೆಂಟ್ ರಸ್ತೆ ಗಳಾಗಿ ನಿರ್ಮಾಣಗೊಂಡಿದ್ದವು.
ಹೀಗಾಗಿ ಕ್ಷೇತ್ರದಲ್ಲಿ ಅಜಾತಶತ್ರು ಎನಿಸಿಕೊಂಡು, ಪಕ್ಷಾತೀತವಾಗಿ ಎಲ್ಲಾ ಮುಖಂಡರು, ಕಾರ್ಯಕರ್ತರು, ಜನಸಾಮಾನ್ಯರು ಇಷ್ಟಪಡುವ ನಾಯಕರಾಗಿದ್ದರು.ಪಕ್ಷದ ಸಂಘಟನೆ ಜತೆಗೆ ಕಾರ್ಯಕರ್ತರು, ಮುಖಂಡರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದರು. ಗುಂಪುಗಾರಿಕೆ ಗಳಿಗೆ ಅವಕಾಶ ನೀಡದೆ ಕಾಂಗ್ರೆಸ್ ಪಕ್ಷವನ್ನು ತಾಲ್ಲೂಕಿನಲ್ಲಿ ಬಲಿಷ್ಠ ಮಾಡುವ ಜೊತೆಗೆ ಹೊಸ ಯುವ ನಾಯಕ ಅನಿಲ್ ಚಿಕ್ಕಮಾದು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅನಿಲ್ ಶಾಸಕರಾಗಲು ಕಾರಣರಾಗಿದ್ದರು.
” ಧ್ರುವನಾರಾಯಣ ಅವರು ಅಗಲಿ ಮಾ.೧೧ಕ್ಕೆ ೨ ವರ್ಷಗಳು ಕಳೆದರೂ ತಮ್ಮ ಅಭಿವೃದ್ಧಿ ಕೆಲಸಗಳು, ನಡವಳಿಕೆ, ನಾಯಕತ್ವ ಗುಣಗಳಿಂದ ಇಂದಿಗೂ ಸ್ಮರಣೀಯರಾಗಿದ್ದಾರೆ. ಈ ಮೂಲಕ ಇಂದಿನ ಜನಪ್ರತಿನಿಽಗಳುಮತ್ತು ಮುಖಂಡರುಗಳಿಗೆ ಅನುಕರಣೀಯರಾಗಿದ್ದಾರೆ.”
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…