ಶಾಂತಿ ಕದಡುವ ಸಂದೇಶ ಹಂಚಿಕೊಂಡರೆ ಸ್ವಯಂ ಪ್ರೇರಿತ ಪ್ರಕರಣ ದಾಖಲು
ಮಡಿಕೇರಿ: ಕಟ್ಟೆಮಾಡು ಶ್ರೀ ಮಹಾಮೃತ್ಯುಂ ಜಯ ದೇವಾಲಯದ ವಸ್ತ್ರಸಂಹಿತೆ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು, ಸುಮೋಟೋ(ಸ್ವಯಂ ಪ್ರೇರಿತ ) ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದಲ್ಲಿ ಸಂಘರ್ಷ ಏರ್ಪಟ್ಟ ಬೆನ್ನಲ್ಲೇ ಸಾಮಾಜಿಕ ಜಾಲ ತಾಣಗಳಲ್ಲಿಯೂ ಎರಡು ಜನಾಂಗಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಶಾಂತಿ ಕದಡುವ ಸಂದೇಶಗಳು ಹರಿದಾಡುತ್ತಿವೆ. ಒಂದು ಸಮು ದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಕೆರಳಿಸುವಂತಹ ಸಂದೇಶಗಳು ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿವೆ .
ಈ ನಡುವೆ ಕೆಲವು ಸುಳ್ಳು ಸಂದೇಶಗಳು ಕೂಡ ಹರಿದಾಡಿವೆ. ಯಾವುದೋ ವಿಚಾರಕ್ಕೆ ಇನ್ಯಾವುದೋ ವಿಚಾರವನ್ನು ಸಂಬಂಽಸಿ ಹೇಳಿಕೆ ಗಳನ್ನು ಕೂಡ ನೀಡಲಾಗಿದೆ. ಇನ್ನು ಕೆಲವರು ತಮಗೆ ಬಂದ ಸಂದೇಶಗಳನ್ನು ಗ್ರೂಪ್‌ಗಳಿಗೆ ಫಾರ್ವರ್ಡ್ ಮಾಡುವ ಕೆಲಸವನ್ನೂ ಮಾಡಿದ್ದಾರೆ. ಆಡಿಯೋ, ವಿಡಿಯೋಗಳನ್ನು ಕೂಡ ಹರಿಯಬಿಡಲಾಗಿದೆ. ಕೊಡಗು ಸೂಕ್ಷ ಜಿಲ್ಲೆಯಾಗಿದ್ದರೂ ಎಲ್ಲಾ ಜನಾಂಗದವರು ಪರಸ್ಪರ ಶಾಂತಿ ಸಹಬಾಳ್ವೆಯ ಜೀವನ ಸಾಗಿಸುತ್ತಿದ್ದಾರೆ. ಆದರೆ, ಕೆಲವರಿಂದ ಶಾಂತಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ. ಇದರ ಬಹುಪಾಲು ಕೆಲಸ ಸಾಮಾಜಿಕ ಜಾಲ ತಾಣಗಳಲ್ಲಿ ನಡೆಯುತ್ತಿದೆ. ಒಂದು ವಿಚಾರದ ಸಂಪೂರ್ಣ ಸತ್ಯಾಸತ್ಯತೆ ಅರಿಯದೆ ಕೋಮು ಸಂಘರ್ಷ ಸೃಷ್ಟಿಸುವ ಸಂದೇಶ ತೇಲಿಬಿಡಲಾಗುತ್ತಿದೆ.
ಈಗಾಗಲೇ ಎರಡೂ ಸಮುದಾಯಗಳ ಮುಖಂಡ ರೊಂದಿಗೆ ನಡೆದ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿದೆ. ಶಾಂತಿ ಕದಡಲು ಯತ್ನಿ ಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖಂಡರು ಕೂಡ ಕೋರಿದ್ದಾರೆ. ಯಾರೂ ಕೂಡ ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಆಯಾ ಸಮುದಾಯದ ಪ್ರಮುಖರು ಹಾಗೂ ಹಿರಿಯರು ಕರೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮನವಿ ಮಾಡಿದ್ದಾರೆ.
ಸದ್ಯ ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ವಿನಾಕಾರಣ ಶಾಂತಿ ಕದಡಲು ಯತ್ನಿಸುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೇಲಿಬಿಟ್ಟಲ್ಲಿ ಸುಮೋಟೋ ಕೇಸ್ ದಾಖಲಿಸಿ ಕ್ರಮಕೈಗೊಳ್ಳಲಾಗುತ್ತಿದೆ. ೬೨ ವರ್ಷದ ಮಹಿಳೆ ಸೇರಿದಂತೆ ಮೂವರನ್ನು ಈ ಸಂಬಂಧ ಬಂಽಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮತ್ತೆ ಇಂತಹ ಘಟನೆ ಮುಂದುವರಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.
ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂ ಜಯ ದೇವಾಲಯದಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ಉಂಟಾದ ಗೊಂದಲದ ಬಳಿಕ ಎರಡು ಸಮುದಾಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅವಹೇಳನ ಮಾಡುತ್ತಿರುವುದು ಕಂಡು ಬಂದಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಕೊಂಡು ಕಾನೂನು ಕ್ರಮ ಕೈಗೊಳ್ಳಲಿದೆ. ಯಾವುದೇ ಸಮುದಾಯಗಳನ್ನು ಗುರಿಯಾಗಿ ಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. -ಕೆ. ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…