ಮೈಸೂರಿನ ವಿವೇಕಾನಂದನಗರ ಸರ್ಕಲ್‌ನಲ್ಲಿ ಸ್ಕೂಟರ್ ಮತ್ತು ಕೆ.ಎಸ್. ಆರ್.ಟಿ.ಸಿ. ಬಸ್ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿವೇಕಾನಂದ ನಗರದ ಸರ್ಕಲ್ ನ ಬಳಿ ರಸ್ತೆಯ ಮಧ್ಯೆ ಭಾಗದಲ್ಲೇ ತರಕಾರಿ ಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರಿಗಳು ತರಕಾರಿಗಳನ್ನು ಮಾರುತ್ತಾರೆ. ವ್ಯಾಪಾರಿಗಳು ಫುಟ್‌ಪಾತ್ ಅತಿಕ್ರಮಿಸಿಕೊಂಡಿರುವುದೇ ಈ ಅಪಘಾತಕ್ಕೆ ಕಾರಣವಾಗಿದೆ.
ಪೊಲೀಸರು ಹಾಗೂ ಮೈಸೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ರಸ್ತೆ ಒತ್ತುವರಿ ಮಾಡಿಕೊಂಡಿರುವ ವ್ಯಾಪಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





