Andolana originals

ಇಂಜಿನಿಯರಿಂಗ್ ಕಾಲೇಜು ಫಲಿತಾಂಶ ಪ್ರಕಟ

‘ಆಂದೋಲನ’ ವರದಿಗೆ ಎಚ್ಚೆತ್ತುಕೊಂಡ ವಿವಿ ಆಡಳಿತ ಮಂಡಳಿ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ೨೦೨೪-೨೫ನೇ ಶೈಕ್ಷಣಿಕ ಸಾಲಿನ ೨, ೪ ಹಾಗೂ ೬ನೇ ಸೆಮಿಸ್ಟರ್ಗಳ ಫಲಿತಾಂಶ ಬುಧವಾರ ಬಿಡುಗಡೆಯಾಗಿದೆ.

‘ಆಂದೋಲನ’ ದಿನ ಪತ್ರಿಕೆ ನ.೧೨ರಂದು ‘ಪರೀಕ್ಷೆ ಮುಗಿದು ನಾಲ್ಕು ತಿಂಗಳು; ಫಲಿತಾಂಶ ಗೋಜಲು’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿ ಪ್ರಕಟಗೊಂಡ ಕೂಡಲೇ ಎಚ್ಚೆತ್ತುಕೊಂಡು ವಿವಿಯ ಆಡಳಿತ ಮಂಡಳಿ ರೆಗ್ಯುಲರ್ ಮತ್ತು ಬಾಕಿ ವಿಷಯಗಳ ಫಲಿತಾಂಶ ಬಿಡುಗಡೆ ಮಾಡಿದೆ.

ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ಗೋವಿಂದೇ ಗೌಡ ಅವರು ಫಲಿತಾಂಶ ಪ್ರಕಟಣೆಯ ಸುತ್ತೋಲೆ ಹೊರಡಿಸಿದ್ದು, ಕಾಲೇಜಿನ ಸೂಚನಾ ಫಲಕದಲ್ಲಿ ಫಲಿತಾಂಶ ಪಟ್ಟಿ ಪ್ರಕಟಿಸಿದ್ದಾರೆ.

ಮುಗಿಯದ ಡೇಟಾ ಎಂಟ್ರಿ ಸಮಸ್ಯೆ: ನಾಲ್ಕು ತಿಂಗಳ ಬಳಿಕ ಫಲಿತಾಂಶ ಬಿಡುಗಡೆಗೊಂಡಿರುವುದು ಸಂತಸವೇ. ಆದರೆ, ಆನ್ ಲೈನ್‌ನಲ್ಲಿ ಫಲಿತಾಂಶ ಬಿಡುಗಡೆಯಾಗದಿರುವುದು ಡೇಟಾ ಎಂಟ್ರಿ ಸಮಸ್ಯೆಗೆ ಹಿಡಿದ ಕನ್ನಡಿಯಾಗಿದೆ.

ಫಲಿತಾಂಶ ಆನ್ ಲೈನ್‌ನಲ್ಲಿ ಬಿಡುಗಡೆಗೊಂಡಿದ್ದರೆ ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು. ಆದರೆ, ಈಗ ಮತ್ತೆ ಅಂಕಪಟ್ಟಿಗಾಗಿ ಕಾಯಬೇಕಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೀಘ್ರದಲ್ಲಿ ಆನ್‌ಲೈನ್‌ನಲ್ಲಿ ಫಲಿತಾಂಶ ಬಿಡುಗಡೆ ಮಾಡಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.

” ತಾಂತ್ರಿಕ ಸಮಸ್ಯೆಯಿಂದ ಫಲಿತಾಂಶವನ್ನು ಆನ್ ಲೈನ್‌ನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಕೂಡಲೇ ಸಮಸ್ಯೆ ಬಗೆಹರಿಸಲಾಗುವುದು. ಅಂಕಪಟ್ಟಿ ಅತ್ಯಂತ ಅವಶ್ಯವಾಗಿರುವ ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿಯನ್ನು ಸಂಪರ್ಕಿಸಿದರೆ ತಾತ್ಕಾಲಿಕ ಅಂಕಪಟ್ಟಿ ನೀಡಲಾಗುವುದು.”

-ಎಂ.ಎಸ್.ಗೋವಿಂದೇಗೌಡ, ಪ್ರಾಂಶುಪಾಲ, ಮೈಸೂರು ವಿವಿ ಸ್ಕೂಲ್ ಆಫ್‌ ಇಂಜಿನಿಯರಿಂಗ್

ಆಂದೋಲನ ಡೆಸ್ಕ್

Recent Posts

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

3 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

4 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

9 hours ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

9 hours ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

9 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

9 hours ago