ಓದುಗರ ಪತ್ರ
ದಕ್ಷಿಣ ಭಾರತದ ಜನಪ್ರಿಯ ಅಭಿನೇತ್ರಿ ಹಾಗೂ ಚತುರ್ಭಾಷಾ ತಾರೆ ಪದ್ಮಭೂಷಣ ಡಾ.ಬಿ. ಸರೋಜಾದೇವಿ ಅವರ ಅಗಲಿಕೆ ಸಿನಿಮಾ ರಂಗಕ್ಕೆ ಮಾತ್ರವಲ್ಲ ಇಡೀ ಕನ್ನಡ ನಾಡಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ.
ರಾಜ್ಯ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೇತೃತ್ವದಲ್ಲಿ ಕೊಡಮಾಡುವ ‘ಶ್ರೇಷ್ಠ ಅತ್ಯುತ್ತಮ ನಟಿ’ ವಾರ್ಷಿಕ ಪ್ರಶಸ್ತಿಗೆ ಡಾ.ಬಿ. ಸರೋಜಾದೇವಿ ಶ್ರೇಷ್ಠ ಅತ್ಯುತ್ತಮ ನಟಿ ಪ್ರಶಸ್ತಿ ಎಂದು ನಾಮಕಾರಣ ಮಾಡಿ ನೀಡುವುದು ಹೆಚ್ಚು ಸೂಕ್ತವಾದೀತು. ಹಾಗೆಯೇ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸುವ ಕನಸನ್ನು ಹೊತ್ತಿರುವ ಯುವತಿಯರು ಸೂಕ್ತ ಮಾಹಿತಿ, ತರಬೇತಿ, ಮಾರ್ಗದರ್ಶನದ ಕೊರತೆಯಿಂದ ಪ್ರತಿಭೆಯಿದ್ದರೂ ಅವಕಾಶ ವಂಚಿತರಾಗುತ್ತಿದ್ದಾರೆ. ರಾಜ್ಯ ಸರ್ಕಾರ ‘ಡಾ.ಬಿ.ಸರೋಜಾದೇವಿ ಅಭಿನಯ ತರಬೇತಿ ಕೇಂದ್ರ’ವನ್ನು ಸ್ಥಾಪಿಸಿ ಕಲೆಯಲ್ಲಿ ಆಸಕ್ತಿ ಇರುವ ಯುವತಿಯರಿಗೆ ತರಬೇತಿ ನೀಡಲಿ. ಈ ಮೂಲಕ ಬಿ. ಸರೋಜಾದೇವಿ ಅವರ ಹೆಸರನ್ನು ಶಾಶ್ವತವಾಗಿ ಉಳಿಸಬಹುದು. ಈ ಕುರಿತು ಸರ್ಕಾರ ಗಂಭೀರವಾದ ಚಿಂತನೆ ನಡೆಸಲಿ.
– ಟಿ. ಸತೀಶ್ ಜವರೇಗೌಡ, ಮಂಡ್ಯ
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…