ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ ಅಧಿಕಾರ ಬೇಕೆಂಬ ಹಠದಲ್ಲಿ ಹಿಡಿಯ ಕಾಂಗ್ರೆಸ್ ಪಕ್ಷ ವಾಮ ಮಾರ್ಗ ಅನುಸರಿಸಿರು ವುದು ಖಂಡನೀಯ ಎಂದರು.
ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಸಂಗ್ರಹಿಸಿರುವ ಹಣದ ಬಳಕೆ ಮಾಡಿ ಅಧಿಕಾರ ಹಿಡಿದಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು, ಶಾಸಕರ ಕೈವಾಡವಿದೆ. ಅಲ್ಲದೆ ನಮ್ಮ ಪಕ್ಷದಲ್ಲೇ ನಮ್ಮನ್ನು ತುಳಿ ಯುವ ಕೆಲಸ ನಡೆಯುತ್ತಿದೆ ಎಂದು ಬೇಸರಿಸಿದರು. ಮತ ದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್ ನಲ್ಲಿ ಇದ್ದರೆಂದು ತಿಳಿದು ಬಂದಿತ್ತು.
ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದರು. ಆ ನಾಲ್ವರು ಸದಸ್ಯರು ಯಾವುದೇ ರೀತಿಯ ಸಂಪರ್ಕಕ್ಕೆ ಸಿಗಲಿಲ್ಲ. ಜಾ.ದಳದ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಒಪ್ಪಿದ್ದೆವು. ಆದರೂ ಜಾ.ದಳದ ಮೂವರು ಸದಸ್ಯರು ಕಡೇ ಕ್ಷಣದಲ್ಲಿ ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರು. ಇವರೆಲ್ಲರೂ ಯಾವ ಆಮಿಷಕ್ಕೆ ಬಲಿಯಾಗಿದ್ದಾರೋ ಗೊತ್ತಿಲ್ಲ. ಬಹುಶಃ ಹಣದ ಆಮಿಷಕ್ಕೆ ಬಲಿಯಾಗಿರಬಹುದು ಎಂದರು.
ಪಕ್ಷದಿಂದ ಉಚ್ಚಾಟನೆ: ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆ ಸಂಬಂಧ ಬಿಜೆಪಿಯ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಲಾಗಿತ್ತು. ಆದರೂ ಪಕ್ಷದ ವಿಪ್ ಉಲ್ಲಂಘಿಸಿ ನಾಲ್ವರು ಬಿಜೆಪಿ ಸದಸ್ಯರು ಮತದಾನಕ್ಕೆ ಗೈರು ಹಾಜರಾಗಿದ್ದಾರೆ. ಹಾಗಾಗಿ ವಿಪ್ ಉಲ್ಲಂಘಿಸಿರುವ ಬಿಜೆಪಿ ನಗರಸಭೆ ಸದಸ್ಯರಾದ ಗಿರೀಶ್ ಕುಮಾರ್, ಗಾಯತ್ರಿ, ವಿಜಯಲಕ್ಷ್ಮಿ, ಮೀನಾಕ್ಷಿ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿದ್ದು, ನಾಲ್ವರ ವಿರುದ್ಧವೂ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.
ಮುಖಂಡರಾದ ಚಿಕ್ಕರಂಗನಾಯಕ, ಎಸ್.ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ…
ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೈಸೂರಿನ…
ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ…
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದೆ. ನಟಿ ರಾಗಿಣಿ ದ್ವಿವೇದಿ ವಿರುದ್ಧ ಯಾವುದೇ ಸಾಕ್ಷ್ಯ…
ಪ್ರಯಾಗ್ ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್ ತೆರೆಯಲು ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ. ಇದರ ಜೊತೆಗೆ ನಂದಿನಿ…
ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಪುಣೆ ತಂಡ ಐದು ವಿಭಾಗದಲ್ಲಿ ನಾಲ್ಕು ಪ್ರಶಸ್ತಿಗಳನ್ನು…