Excessive Rainfall Causes Rot Disease in Coffee Crop
ಕೃಷಿಕರಲ್ಲಿ ಹೆಚ್ಚಾದ ಆತಂಕ; ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ
ಲಕ್ಷ್ಮಿಕಾಂತ್ ಕೊಮಾರಪ್ಪ
ಸೋಮವಾರಪೇಟೆ: ಪಶ್ಚಿಮ ಘಟ್ಟದ ಬೆಟ್ಟಶ್ರೇಣಿ ವ್ಯಾಪ್ತಿಯ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಈ ವರ್ಷ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕಾಫಿಗೆ ಕೊಳೆರೋಗ ಕಾಣಿಸಿಕೊಂಡಿದೆ. ತೀವ್ರ ತೇವಾಂಶ ಹಾಗೂ ಗಾಳಿಯ ಅಬ್ಬರವು ಬೆಳೆಗಾರರ ಬದುಕನ್ನು ದಿಕ್ಕಿಲ್ಲದತ್ತ ಎಳೆಯುತ್ತಿದೆ. ಅವಧಿಗೂ ಮುನ್ನವೇ ಮಳೆಗಾಲ ಪ್ರಾರಂಭವಾಗಿದ್ದರಿಂದ ಕಾಫಿ ತೋಟಗಳಿಗೆ ಔಷಧ ಸಿಂಪಡಣೆಗೆ ತೊಂದರೆಯಾಗಿತ್ತು.
ಈ ಬಾರಿ ಕಾಫಿ ಗಿಡಕ್ಕೆ ಉತ್ತಮ ಹೂಮಳೆ ಸಿಕ್ಕಿದ ಕಾರಣ ಅರೇಬಿಕಾ ಕಾಫಿ ಬೆಳೆಗಾರರು ಉತ್ತಮವಾದ ಬೆಳೆ ಬರುವ ನಿರೀಕ್ಷೆಯಲ್ಲಿದ್ದರು. ಆದರೆ, ಈಗ ಭಾರೀ ಮಳೆ ಹೊಡೆತಕ್ಕೆ ಕಾಫಿ ಗಿಡಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ವಿಪರೀತ ಶೀತ ಗಾಳಿಯಿಂದ ಕಾಫಿ ಗಿಡದಲ್ಲಿ ಕಾಯಿಗಳು ಉದುರುತ್ತಿವೆ. ಹೋಬಳಿ ವ್ಯಾಪ್ತಿಯ ರೈತರು ಪ್ರತಿ ವರ್ಷವೂ ಇದೇ ಪರಿಸ್ಥಿತಿ ಎದುರಿಸುವಂತಾಗಿದೆ.
ಮೇ ಅಂತ್ಯದಲ್ಲಿ ಭಾರೀ ಮಳೆಯಾಗಿ ನಂತರ ನಾಲ್ಕೈದು ದಿನಗಳ ಕಾಲ ಬಿಸಿಲು ಬಂದಿತ್ತು. ನಂತರ ಜೂನ್ ಮೊದಲನೇ ವಾರದಿಂದಲೇ ಮಳೆ ಆರಂಭಗೊಂಡಿದ್ದು, ಇದೀಗ ಧಾರಾಕಾರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾಫಿ ಗಿಡಗಳಿಗೆ ಸ್ಪ್ರೇ ಮಾಡಲು ಬಹುತೇಕ ಮಂದಿಗೆ ಸಾಧ್ಯವಾಗಿರಲಿಲ್ಲ. ಇದರೊಂದಿಗೆ ತೋಟದಲ್ಲಿ ಚಿಗುರು, ಗಿಡಕಪಾತು ಮಾಡಲೂ ಆಗಿರಲಿಲ್ಲ. ಪ್ರಾರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಳೆರೋಗ ಅತೀ ಶೀಘ್ರವಾಗಿ ವ್ಯಾಪಿಸಿದೆ.
ಪುಷ್ಪಗಿರಿ ಬೆಟ್ಟ ಶ್ರೇಣಿಯ ಗ್ರಾಮಗಳಾದ ಬೆಟ್ಟದಳ್ಳಿ, ಪುಷ್ಪಗಿರಿ, ಹಂಚಿನಳ್ಳಿ, ಕುಮಾರಳ್ಳಿ, ಹೆಗ್ಗಡಮನೆ, ಶಾಂತಳ್ಳಿ, ಕೂತಿ, ತೊಳೂರುಶೆಟ್ಟಳ್ಳಿ, ಚಿಕ್ಕ ತೋಳೂರು, ಕುಡಿಗಾಣ, ಬೀದಳ್ಳಿ, ಕೊತ್ನಳ್ಳಿ, ತಡ್ಡಿಕೊಪ್ಪ, ಹರಗ, ಬೆಟ್ಟದಕೊಪ್ಪ, ನಾಡ್ನಳ್ಳಿ, ಕುಂದಳ್ಳಿ, ಬೀಕಳ್ಳಿ, ಬೆಂಕಳ್ಳಿ ಗ್ರಾಮಗಳಲ್ಲಿ ಅವಧಿಗೂ ಪೂರ್ವ, ವಾಡಿಕೆಗಿಂತಲೂ ಅತೀ ಹೆಚ್ಚು ಮಳೆಯಾದ ಪರಿಣಾಮ ಕಾಫಿ ತೋಟದಲ್ಲಿ ಕೊಳೆರೋಗ ಹೆಚ್ಚಾಗಿ ಕಾಣಿಸಿಕೊಂಡಿದೆ. ಬೆಟ್ಟಶ್ರೇಣಿಯ ಪ್ರದೇಶವಾಗಿರುವ ಶಾಂತಳ್ಳಿ ವ್ಯಾಪ್ತಿಯಲ್ಲಿ ಕಾಫಿ ಹಾಗೂ ಏಲಕ್ಕಿ ಬೆಳೆಗಳನ್ನು ಬೆಳೆಯುತ್ತಿದ್ದು, ಏಲಕ್ಕಿ ಬೆಳೆಗೂ ಕೊಳೆರೋಗ ಬಾಧಿಸಿದೆ. ಅತಿವೃಷ್ಟಿಯಿಂದ ಶಾಂತಳ್ಳಿ ಹೋಬಳಿಯ ಕೃಷಿಕರಿಗೆ ಕಾಫಿ ಬೆಳೆ ನಷ್ಟದ ಆತಂಕ ಮೂಡಿಸಿದೆ. ಕೊಳೆ ರೋಗದಿಂದ ಕಾಫಿ ಬೆಳೆ ಉದುರುವಹಂತಕ್ಕೆ ಬಂದಿದ್ದು, ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಬೆಳೆಗಾರರು ಒತ್ತಾಯಿಸಿದ್ದಾರೆ.
” ಪ್ರತಿ ವರ್ಷವೂ ಭಾರೀ ಮಳೆಯಿಂದ ಕಾಫಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದೇವೆ. ಶಾಂತಳ್ಳಿ ಭಾಗದಲ್ಲಿ ಅತಿಯಾದ ಮಳೆ, ಗಾಳಿ ಮತ್ತು ಶೀತದ ಗಾಳಿ ಬೀಸುವುದರಿಂದ ಕಾಫಿ ಗಿಡಗಳಲ್ಲಿರುವ ಕಾಯಿ ಉದುರುತ್ತಿವೆ. ಸರ್ಕಾರ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.”
-ಮೋಹಿತ್ ಗೌಡ, ಕಾಫಿ ಬೆಳೆಗಾರರು, ಚಿಕ್ಕತೋಳೂರು ಗ್ರಾಮ
” ಒಂದೊಮ್ಮೆ ಮಳೆ ಬಿಡುವು ನೀಡಿದರೆ ಉಳಿಕೆ ಕೆಲಸಗಳನ್ನು ಮಾಡಿಕೊಂಡು ಕೊಳೆರೋಗವನ್ನು ಹತೋಟಿಗೆ ತರಬಹುದು. ಮಳೆ ಹೀಗೇ ಮುಂದುವರಿದರೆಕಾಯಿಕಟ್ಟಿರುವ ಕಾಫಿಯೂ ನೆಲಕಚ್ಚಿ ಭಾರೀ ನಷ್ಟ ಅನುಭವಿಸಬೇಕಾಗುತ್ತದೆ.”
-ಬಿ.ಎನ್.ಸುಚಿತ್, ಕಾಫಿ ಕೃಷಿಕರು, ಅಬ್ಬಿಮಠ ಬಾಚಹಳ್ಳಿ
” ಮೇ ಅಂತ್ಯದಲ್ಲಿಯೇ ಭಾರೀ ಮಳೆಯಾಗಿದ್ದು, ಜೂನ್‌ನಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಸ್ಪ್ರೇ ಇನ್ನಿತರ ಕೆಲಸ ಕಾರ್ಯಗಳು ಬಾಕಿಯಾಗಿರುವುದರಿಂದ ಕೊಳೆರೋಗ ಹೆಚ್ಚು ಹರಡಲು ಕಾರಣವಾಗುತ್ತಿದೆ.”
–ವಿಮಲ ಪಳಂಗಪ್ಪ, ಕೃಷಿಕರು, ಚಾಮೆರಾಮನೆ
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…