ಜೂನ್-ಜುಲೈನಲ್ಲಿ ಚುನಾವಣೆ ಸಾಧ್ಯತೆ ಮೇ ಅಂತ್ಯಕ್ಕೆ ಮೀಸಲಾತಿ ಪ್ರಕಟ
ಕೆ. ಬಿ. ರಮೇಶನಾಯಕ
ಮೈಸೂರು: ಕಳೆದ ನಾಲ್ಕು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಶೀಘ್ರದಲ್ಲಿಯೇ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಚುನಾವಣಾ ಅಖಾಡಕ್ಕಿಳಿ ಯಲು ತಯಾರಿ ಮಾಡಿ ಕೊಂಡಿರುವ ಆಕಾಂಕ್ಷಿಗಳಲ್ಲಿ ಹೊಸ ಉತ್ಸಾಹ ಗರಿಗೆದರಿದೆ.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೌಖಿಕವಾಗಿ ಮುಚ್ಚಳಿಕೆ ನೀಡಿದ್ದಲ್ಲದೆ, ಚುನಾವಣೆ ವಿಳಂಬ ಕುರಿತು ಹೈಕೋಟ್ ನಲ್ಲಿ ಸಲ್ಲಿಕೆ ಯಾದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಂದರ್ಭ ಸರ್ಕಾರ ಈ ಭರವಸೆಯನ್ನು ನೀಡಿದೆ. ಮೀಸಲಾತಿ ಯನ್ನು ೧೨ ವಾರಗಳಲ್ಲಿ ಪ್ರಕಟಿಸಲಾಗುವುದು ಎಂದು ೨೦೨೩ರ ಡಿಸೆಂಬರ್ ೧೯ರಲ್ಲಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಭರವಸೆ ನೀಡಿತ್ತು. ಆದರೆ, ಭರವಸೆ ಪ್ರಕಾರ ರಾಜ್ಯ ಸರ್ಕಾರ ನಡೆದುಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯ ಚುನಾ ವಣಾ ಆಯೋಗ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.
ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಎರಡನೇ ಬಾರಿ ನೀಡಿರುವ ಭರವಸೆಯ ಪ್ರಕಾರ ಮೇ ಅಂತ್ಯಕ್ಕೆ ಮೀಸಲಾತಿ ಪ್ರಕಟ ಮಾಡಿದರೆ ಜೂನ್ ಅಥವಾ ಜುಲೈನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ಚುನಾ ವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧತೆ ಮಾಡಿಕೊಂಡಿದ್ದು, ಮೀಸಲಾತಿ ಖಾತ್ರಿಯಾದರೆ ತಮ್ಮ ಅಖಾಡವನ್ನು ಅಂತಿಮಗೊಳಿಸಿಕೊಳ್ಳುತ್ತಾರೆ.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪಽಸಿ ಗೆಲುವು ಸಾಽಸಿ ನಂತರ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣ ವನ್ನು ಪ್ರವೇಶಿಸಿರುವ ಹಲವಾರು ನಾಯಕರು ಇದ್ದಾರೆ. ಹೀಗಾಗಿ ಜಿಲ್ಲಾ ಪಂಚಾಯಿತಿ ಚುನಾವಣೆ ರಾಜಕೀಯವಾಗಿ ಅತ್ಯಂತ ಮಹತ್ವ ಪಡೆದಿದೆ.
ಮತ್ತೆ ಚಟುವಟಿಕೆ ಬಿರುಸು: ಕಳೆದ ಬಾರಿ ಜಿಲ್ಲಾ ಪಂಚಾಯಿತಿಗೆ ೨೦೧೬ರಲ್ಲಿ ಚುನಾವಣೆ ನಡೆದಿತ್ತು. ೪೯ ಸದಸ್ಯ ಬಲದ ಮೈಸೂರು ಜಿಪಂನಲ್ಲಿ ಕಾಂಗ್ರೆಸ್ ೨೨, ಜಾತ್ಯತೀತ ಜನತಾದಳ ೧೮, ಬಿಜೆಪಿಯ ೮ ಹಾಗೂ ಪಕ್ಷೇತರರು ಒಬ್ಬರು ಆಯ್ಕೆಯಾಗಿದ್ದರು. ಕಾಂಗ್ರೆಸ್ ದೊಡ್ಡ ಪಕ್ಷವಾದರೂ ಸ್ವತಂತ್ರವಾಗಿ ಅಧಿಕಾರಕ್ಕೇರು ವಷ್ಟು ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಅಧಿಕಾರದಿಂದ ದೂರ ಉಳಿಯಬೇಕಾಯಿತು.
ಜಾ. ದಳ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಅಧ್ಯಕ್ಷರಾಗಿ ಜಾ. ದಳದ ನಯೀಮಾ ಸುಲ್ತಾನ, ಉಪಾಧ್ಯಕ್ಷರಾಗಿ ಬಿಜೆಪಿಯ ನಟರಾಜ್ ಆಯ್ಕೆಯಾಗಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳ ಅವಧಿ ೫ ವರ್ಷವಾದರೂ ಪಕ್ಷದಲ್ಲಿ ಅಽಕಾರ ಹಂಚಿಕೆಯ ಒಳ ಒಪ್ಪಂದದ ಪ್ರಕಾರ ನಯೀಮಾ ಸುಲ್ತಾನ ಹಾಗೂ ನಟರಾಜ್ ರಾಜೀನಾಮೆ ಸಲ್ಲಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಮೈತ್ರಿಯಿಂದ ದೂರ ಉಳಿದ ಜಾ. ದಳದ ಪ್ರಮುಖರು ಕಾಂಗ್ರೆಸ್ ನೊಂದಿಗೆ ಮೈತ್ರಿ ಬೆಳೆಸಿದರು. ಎರಡನೇ ಅವಧಿಯಲ್ಲಿ ಅಧ್ಯಕ್ಷರಾಗಿ ಜಾ. ದಳದ ಪರಿಮಳಾ ಶ್ಯಾಂ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಗೌರಮ್ಮ ಸೋಮಶೇಖರ್ ಆಯ್ಕೆಯಾಗಿದ್ದರು.
ಮತ್ತೆ ಮೈತ್ರಿ ಏರ್ಪಡುವುದೇ? : ಈ ಬಾರಿಯ ಲೋಕಸಭಾ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಜಾ. ದಳವು-ಎನ್ ಡಿಎ ಮೈತ್ರಿಕೂಟವನ್ನು ಸೇರಿಕೊಂಡಿದೆ. ಹೀಗಾಗಿ ಲೋಕಸಭಾ ಚುನಾವಣೆಯ ನಂತರ ಎದುರಾದ ವಿಧಾನಪರಿಷತ್ ಚುನಾವಣೆಯನ್ನು ಉಭಯ ಪಕ್ಷಗಳು ಮೈತ್ರಿ ಮೂಲಕ ಎದುರಿಸಿದ್ದವು. ಅಲ್ಲದೇ ರಾಜ್ಯದಲ್ಲಿ ಸಂಚಲನ ಮೂಡಿಸಿದ ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜಾ. ದಳ ಬೆಂಗಳೂರಿನಿಂದ ಮೈಸೂರಿನವರಿಗೆ ಪಾದಯಾತ್ರೆ ನಡೆಸಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದವು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು ಉಭಯ ಪಕ್ಷಗಳ ನಾಯಕರು ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ. ಹಾಗಾಗಿ ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಏರ್ಪಟ್ಟರೆ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ನಡೆಯುತ್ತಿವೆ.
ಕಡಿಮೆಯಾದ ಕ್ಷೇತ್ರಗಳು
ಕಳೆದ ಬಾರಿ ಜಿಲ್ಲಾ ಪಂಚಾಯಿತಿ ೪೯ ಸದಸ್ಯರನ್ನು ಹೊಂದಿತ್ತು. ೨೦೨೧ರಲ್ಲಿ ಕರ್ನಾಟಕ ಪಂಚಾಯತ್ ರಾಜ್ ಸೀಮಾ ಆಯೋಗ ಹೊಸ ನಾಲ್ಕು ಕ್ಷೇತ್ರಗಳನ್ನು ಸೇರಿಸಿ ಕ್ಷೇತ್ರಗಳ ಸಂಖ್ಯೆಯನ್ನು ೫೩ಕ್ಕೆ ಏರಿಕೆ ಮಾಡಿತ್ತು. ನಂತರ ೨೦೨೩ರಲ್ಲಿ ೫೩ ಕ್ಷೇತ್ರಗಳಿಂದ ೪೬ಕ್ಕೆ ಇಳಿಕೆ ಮಾಡಿ ಆಯೋಗ ಅಧಿಸೂಚನೆ ಹೊರಡಿಸಿತ್ತು. ಇದೀಗ ಮೀಸಲಾತಿ ಪ್ರಕಟವಾಗುವುದು ಮಾತ್ರ ಬಾಕಿ ಇದೆ. ಶಾಸಕರು, ಸಚಿವರು ಮತ್ತು ಪ್ರಭಾವಿ ಮುಖಂಡರ ಸಲಹೆಯನ್ನು ಪರಿಗಣಿಸಿ ಮೀಸಲಾತಿಯನ್ನು ನಿಗದಿ ಮಾಡುವ ಸಾಧ್ಯತೆ ಇದೆ.
ಅಭಿವೃದ್ಧಿ ಕುಂಠಿತ
ಜನಪ್ರತಿನಿಧಿಗಳು ಇಲ್ಲದೇ ೪ ವರ್ಷಗಳಿಂದ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಕಾರ್ಯಗಳು ಕಾಣಲಿಲ್ಲ. ಅಧಿಕಾರಿಗಳ ದರ್ಬಾರ್‌ನಲ್ಲಿ ಆಡಳಿತ ನಡೆಯುತ್ತಿದೆ. ಜಿಪಂ ಜನಪ್ರತಿನಿಽಗಳು ಇದ್ದಾಗ ಪ್ರತಿ ತಿಂಗಳು ಸಾಮಾನ್ಯ ಸಭೆ, ಮೂರು ತಿಂಗಳಿಗೊಮ್ಮೆ ತ್ರೈಮಾಸಿಕ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿಯನ್ನು ಅವಲೋಕನ ಮಾಡಲಾಗುತ್ತಿತ್ತು. ಆದರೆ, ಜನಪ್ರತಿನಿಽಗಳು ಇಲ್ಲದ ಹಿನ್ನೆಲೆಯಲ್ಲಿ ಈ ಕಾರ್ಯ ನಡೆಯುತ್ತಿಲ್ಲ. ಚುನಾಯಿತ ಪ್ರತಿನಿಽಗಳಿದ್ದರೆ ಸರ್ಕಾರದ ಮೇಲೆ ಪ್ರಭಾವ ಬೀರಿ ಹೆಚ್ಚಿನ ಅನುದಾನ ತರಲು ಪ್ರಯತ್ನ ನಡೆಸುತ್ತಿದ್ದರು. ಗ್ರಾಮ ಮಟ್ಟದಲ್ಲಿ ಹಲವಾರು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸಲು ಜನಪ್ರತಿನಿಧಿಗಳ ಆವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಕೊನೆಗೂ ಚುನಾವಣೆ ನಡೆಸಲು ಮನಸ್ಸು ಮಾಡಿರುವುದು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಾಗಿದೆ.
ಬೆಂಗಳೂರು: ಬಿಗ್‌ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…
ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್ ತನ್ನ ಆದೇಶ…
ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು…