Andolana originals

ಸುರಂಗ ಕಾಲುವೆ ಮೇಲೆ ಸಿಡಿಮದ್ದು ಬಳಸಿ ಕಾಮಗಾರಿ; ರೈತರ ಆತಂಕ

ಹೇಮಾವತಿ ಕಾಲುವೆಗೆ ಅಪಾಯ ಸಾಧ್ಯತೆ: ಕಾಮಗಾರಿ ಸ್ಥಗಿತಕೆ ರೈತರ ಒತ್ತಾಯ

ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದ ಬಳಿ ಸುಮಾರು ೨ ಕಿ.ಮೀ. ದೂರದವರೆಗೆ ಸುರಂಗವನ್ನು ಕೊರೆದು ಹೇಮಾವತಿ ಕಾಲುವೆಯನ್ನು ನಿರ್ಮಾಣ ಮಾಡಲಾಗಿದೆ.

ಈ ಕಾಲುವೆಯ ಮೂಲಕ ಸಾವಿರಾರು ಹೆಕ್ಟೇರ್ ಭೂಮಿಗೆ ನೀರು ಹರಿಸಲಾಗುತ್ತದೆ. ಆದರೆ, ಸುರಂಗದ ಮೇಲ್ಭಾಗದಲ್ಲಿ ಏತ ನೀರಾವರಿ ಯೋಜನೆಗೆ ಪೈಪ್‌ಲೈನ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಗುತ್ತಿಗೆದಾರರು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಕಾಮಗಾರಿ ನಡೆಸುತ್ತಿದ್ದು, ಸುರಂಗ ಮಾರ್ಗದ ಕಾಲುವೆಗೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಈ ಭಾಗದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಶೀಳನೆರೆ ಹೋಬಳಿಗೆ ಹೇಮಾವತಿ ನದಿ ನೀರನ್ನು ಏತ ನೀರಾವರಿ ಮೂಲಕ ಪೂರೈಕೆ ಮಾಡಲು ಸುಮಾರು ೧೬೫ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಆದರೆ, ಈ ಕಾಮಗಾರಿ ನಡೆಸುತ್ತಿರುವ ಮಾರ್ಗದಲ್ಲಿ ಚಟ್ಟಂಗೆರೆ ಸುರಂಗ ಮಾರ್ಗದ ಕಾಲುವೆ ಇರುವ ಕಾರಣ ಹೇಮಾವತಿನೀರಾವರಿ ಇಲಾಖೆಯ ಅಧಿಕಾರಿಗಳಿಂದ ಅನುಮತಿ ಪಡೆದುಕೊಂಡು ಸುರಂಗ ಸಂರಕ್ಷಣಾ ಪರಿಣತ ಇಂಜಿನಿಯರ್ ಅನ್ನು ಸ್ಥಳದಲ್ಲಿ ನಿಯೋಜನೆ ಮಾಡಿಕೊಂಡು ಕಾಮಗಾರಿ ನಡೆಸಬೇಕಿತ್ತು.

ಆದರೆ, ಏತ ನೀರಾವರಿ ಗುತ್ತಿಗೆದಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಸುರಂಗಮಾರ್ಗದಲ್ಲಿ ಬೃಹತ್ ಹಿಟಾಚಿ ಬಳಸಿ, ಬಂಡೆಗಳನ್ನು ಕೊರೆದು, ಬ್ಲಾಸ್ಟ್ ಮಾಡುವ ಮೂಲಕ ಕಲ್ಲುಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ಸುರಂಗ ಮಾರ್ಗದ ಕಾಲುವೆಗೆ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ಹಾಗಾಗಿ ಕೂಡಲೇ ಅಗತ್ಯ ಸುರಂಗ ತಜ್ಞ ಇಂಜಿನಿಯರನ್ನು ಸ್ಥಳದಲ್ಲಿ ನಿಯೋಜಿಸಿಕೊಂಡು ತಜ್ಞರ ಉಪಸ್ಥಿತಿಯಲ್ಲಿ ಕಾಮಗಾರಿ ನಡೆಸಬೇಕು. ಈ ಮೂಲಕ ಹೇಮಾವತಿ ಕಾಲುವೆಯನ್ನು ಸಂರಕ್ಷಣೆ ಮಾಡಬೇಕು. ಇಲ್ಲದಿದ್ದರೆ ಸುರಂಗ ಮಾರ್ಗದ ಕಾಲುವೆಗೆ ಅಪಾಯ ಎದುರಾದರೆ ಇದಕ್ಕೆ ಯಾರು ಹೊಣೆಗಾರರಾಗುತ್ತಾರೆ ಎಂದು ರೈತರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಕೂಡಲೇ ಹೇಮಾವತಿ ಜಲಾಶಯ ಯೋಜನೆಯ ಪಾಂಡವಪುರ(ಚಿನಕುರಳಿ)ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳದೆ, ಸುರಂಗ ಮಾರ್ಗದಲ್ಲಿ ಬಂಡೆಗಳನ್ನು ಸಿಡಿಮದ್ದು ಬಳಸಿ ಹಾಗೂ ಬೃಹತ್ ಹಿಟಾಚಿ ಬಳಿಸಿ ಬಂಡೆಗಳನ್ನು ಕೊರೆಯುತ್ತಿರುವ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಚಟ್ಟಂಗೆರೆ ಸುರಂಗ ಮಾರ್ಗವು ಸಂರಕ್ಷಿತ ಪ್ರದೇಶವಾಗಿದೆ. ಹಾಗಾಗಿ ತಾಲ್ಲೂಕು ಆಡಳಿತವು ಕೂಡಲೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಮಗಾರಿನಡೆಸುವಂತೆ ಆದೇಶ ನೀಡಬೇಕು ಎಂದು ಚಟ್ಟಂಗೆರೆ ಸುತ್ತಮುತ್ತಲ ಗ್ರಾಮದ ರೈತರು ತಾಲ್ಲೂಕು ತಹಸಿಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ.

” ಚಟ್ಟಂಗೆರೆ ಸುರಂಗ ಮಾರ್ಗದ ಮುಖ್ಯ ನಾಲೆಯು ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲ ಹಾಗೂ ಮಂಡ್ಯ ತಾಲ್ಲೂಕುಗಳ ಸುಮಾರು ೩೦ ಸಾವಿರ ಎಕರೆ ಭೂ ಪ್ರದೇಶಕ್ಕೆ ನೀರು ಹರಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಸುರಂಗ ಮಾರ್ಗದ ನಾಲೆಗೆ ಅಪಾಯ ಸಂಭವಿಸುವಂತಹ ಸ್ಥಿತಿಯಲ್ಲಿ ಪೈಪ್‌ಲೈನ್ಅ ಳವಡಿಸುವ ಕಾಮಗಾರಿಯನ್ನು ಗುತ್ತಿಗೆದಾರರು ಮಾಡುತ್ತಿದ್ದಾರೆ. ಇದರಿಂದ ನಮ್ಮ ಚಟ್ಟಂಗೆರೆ ಸುರಂಗದ ಮುಖ್ಯ ನಾಲೆಯು ಕಂಪನಗೊಳ್ಳುತ್ತಿದ್ದು ಯಾವುದೇ ಕ್ಷಣದಲ್ಲೂ ನಾಲೆ ಕುಸಿಯುವ ಅಪಾಯ ಇದೆ. ಹಾಗಾಗಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿ, ಸುರಂಗ ತಜ್ಞರ ಉಪಸ್ಥಿತಿಯಲ್ಲಿ ಕಾಮಗಾರಿ ನಡೆಸಿ ಸುರಂಗ ಮಾರ್ಗದ ಮುಖ್ಯ ನಾಲೆಗೆ ಆಗುವ ಅಪಾಯವನ್ನು ತಪ್ಪಿಸಬೇಕು.”

-ಚಟ್ಟಂಗೆರೆ ನಾಗೇಶ್, ವಕೀಲರು, ಕೆ.ಆರ್.ಪೇಟೆ.

” ಕಂಫ್ರೆಷರ್‌ನಿಂದ ಕುಳಿ ಹಾಕಿ ಕಲ್ಲು ಬಂಡೆಗಳನ್ನು ಪುಡಿ ಮಾಡುತ್ತಿರುವುದರಿಂದ ಕೆಳ ಭಾಗದಲ್ಲಿರುವ ಚಟ್ಟಂಗೆರೆ ಸುರಂಗ ನಾಲೆಯು ಕಂಪನಕ್ಕೆ ಒಳಗಾಗಿ ಮುಖ್ಯ ನಾಲೆಗೆ ಅಪಾಯ ಎದುರಾಗುವ ಕಾರಣ ಈ ಕಾಮಗಾರಿಯನ್ನು ಸ್ಥಗಿತಗೊಳಿಸಲು ಆದೇಶ ನೀಡಲಾಗಿದೆ. ಸುರಂಗ ತಜ್ಞರ ತಾಂತ್ರಿಕ ವರದಿ ಪಡೆದು ಕಾಮಗಾರಿಯನ್ನು ಆರಂಭಿಸಲು ಸೂಚನೆ ನೀಡಲಾಗಿದೆ.”

-ಶ್ರೀನಾಥ್, ಕಾರ್ಯಪಾಲಕ ಇಂಜಿನಿಯರ್, ಹೇಮಾವತಿ ಎಡದಂಡ ನಾಲೆ ವಿಭಾಗ ಪಾಂಡವಪುರ

 

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

5 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

6 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

6 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

6 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

7 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

11 hours ago