Andolana originals

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ

ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ ಕ್ಷೇತ್ರಗಳಲ್ಲೂ ಕೊಡಗು ಜಿಲ್ಲೆಗೆ ತನ್ನದೇ ಆದ ಹೆಸರಿದೆ. ಕೊಡಗಿನ ಖ್ಯಾತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ ಮಂಡೇಪಂಡ ಪಿ.ಸುಜಾ ಕುಶಾಲಪ್ಪ ಹೇಳಿದರು.

ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ವಿ. ಬಾಡಗದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಭಾನುವಾರ ನಡೆದ ೪ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-೨೦೨೫ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದ ಕ್ರೀಡಾ ಇತಿಹಾಸದಿಂದ ಕೊಡಗು ಜಿಲ್ಲೆಯ ಕ್ರೀಡಾ ಸಾಧನೆಯನ್ನು ಹೊರತುಪಡಿ ಸಲು ಎಂದಿಗೂ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು. ವಿ.ಬಾಡಗ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದ ಅಭಿವೃದ್ಧಿಗಾಗಿ ತಮ್ಮ ಸರ್ಕಾರಿ ನಿಧಿಯಿಂದ ೩ ಲಕ್ಷ ರೂ. ಅನುದಾನ ನೀಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ದ.ಕೊಡಗಿನ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬ ತಂಡಗಳಿಗಾಗಿ ಐದು ದಿನಗಳ ಕಾಲ ನಡೆಯಲಿರುವ ಈ ಪಂದ್ಯಾವಳಿಯನ್ನು ಮೈದಾನದಲ್ಲಿ ಚೆಂಡು ತಳ್ಳುವ ಮೂಲಕ ವಿಧ್ಯುಕ್ತವಾಗಿಉದ್ಘಾಟಿಸಿ ಮಾತನಾಡಿದ ಭಾರತ ಹಾಕಿ ತಂಡದ ಮಾಜಿ ಆಟಗಾರರಾದ ಬಾಳೆಯಡ ಕಾಳಯ್ಯ ಸುಬ್ರಹ್ಮಣಿ, ದೇಶಸೇವೆ, ಕೃಷಿ ಮತ್ತು ಕ್ರೀಡೆಯನ್ನು ಹಿಂದಿನಿಂದಲೂ ತಮ್ಮ ರಕ್ತಗತವಾಗಿ ಮೈಗೂಡಿಸಿ ಕೊಂಡಿರುವ ಕೊಡವರು, ಈ ಮೂರು ಕ್ಷೇತ್ರಗಳ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅದರಲ್ಲೂ ದೇಶಸೇವೆ ಮತ್ತು ಕ್ರೀಡೆಯ ಅಭಿವೃದ್ಧಿಯಲ್ಲಿ ಕೊಡಗು ಜಿಲ್ಲೆ ನಿರ್ವಹಿಸಿದ ಪಾತ್ರವನ್ನು ರಾಜ್ಯದ ಬೇರೆ ಯಾವುದೇ ಜಿಲ್ಲೆ ನಿರ್ವಹಿಸಿಲ್ಲ. ಇದನ್ನು ಸರ್ಕಾರ ಪ್ರತ್ಯೇಕವಾಗಿ ಗುರುತಿಸುವಂತಾಗಬೇಕು ಎಂದರು.

ಹಾಕಿ ಕೂರ್ಗ್ ಅಧ್ಯಕ್ಷ ಪಳಂಗಂಡ ಲವ ಕುಮಾರ್ ಮಾತನಾಡಿ, ಶಾಲಾ ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ಉತ್ತೇಜಿಸುವ ಕೆಲಸ ಕೊಡಗಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲ. ಅದರಲ್ಲೂ ವಿಶೇಷವಾಗಿ ಹಾಕಿ ಕ್ರೀಡೆಯಲ್ಲಿ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಬೇಕು. ವಿದ್ಯಾರ್ಥಿಗಳನ್ನು ಪ್ರಾಥಮಿಕ ಹಂತದಿಂದಲೇ ಕ್ರೀಡಾ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗುವಂತೆ ಮಾಡಿದಲ್ಲಿ ಶ್ರೇಷ್ಠ ಕ್ರೀಡಾಪಟು ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿದ್ದ ವಿ.ಬಾಡಗ ಜಿಎಂಪಿ ಶಾಲಾ ಮುಖ್ಯ ಶಿಕ್ಷಕಿ ಕೆ.ಸಿ.ಗೀತಾಂಜಲಿ ಮಾತನಾಡಿದರು.

ಹೈಪ್ಲೈಯರ್ಸ್ ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷರಾದ ಮಳವಂಡ ಗಿರೀಶ್ ಮುದ್ದಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಕೊಲ್ಲಿರ ಬೋಪಣ್ಣ, ಪ್ರಮುಖರಾದ ಕಂಜಿತಂಡ ಗಿಣಿ ಮೊಣ್ಣಪ್ಪ, ಪಂದ್ಯಾವಳಿಯ ನಿರ್ದೇಶಕರಾದ ಕುಪ್ಪಂಡ ದಿಲನ್ ಬೋಪಣ್ಣ ಉಪಸ್ಥಿತರಿದ್ದರು. ಉಳುವಂಗಡ ಲೋಹಿತ್ ಭೀಮಯ್ಯ ಪ್ರಾರ್ಥಿಸಿದರು. ಹೈಪ್ಲೈಯರ್ಸ್ ಸಂಸ್ಥೆಯ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ ಮಾತನಾಡಿದರು. ಹಿರಿಯ ವೀಕ್ಷಕ ವಿವರಣೆಗಾರರಾದ ಮಾಳೇಟಿರ ಶ್ರೀನಿವಾಸ್ ಕಾರ್ಯಕ್ರಮ ನಿರ್ವಹಿಸಿದರು.

ಪೆವಿಲಿಯನ್ ನಿರ್ಮಿಸಲು ಕ್ರಮ: ಎ.ಎಸ್.ಪೊನ್ನಣ್ಣ ಪಂದ್ಯಾವಳಿಯ ಪ್ರಥಮಾರ್ಧದ ಸಮಯದಲ್ಲಿ ಮೈದಾನಕ್ಕೆ ಬಂದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಆಟಗಾರರಿಗೆ ಶುಭ ಹಾರೈಸಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ಕ್ರೀಡಾಕೂಟಗಳು ಜರುಗುತ್ತಿರುವುದು ಕ್ರೀಡೆಗೆ ದೊರೆಯುವ ಉತ್ತೇಜನವಾಗಿದೆ. ಇದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರಲ್ಲದೆ, ವಿ. ಬಾಡಗದ ಜಿಎಂಪಿ ಶಾಲಾ ಮೈದಾನಕ್ಕೆ ಪೆವಿಲಿಯನ್ ನಿರ್ಮಿಸಲು ಬೇಡಿಕೆ ಬಂದಿದೆ. ಅದರಿಂದ ಈ ಕುರಿತು ಅಗತ್ಯ ಪ್ರಸ್ತಾವನೆ ಸಲ್ಲಿಸಿದರೆ, ಮುಂದಿನ ವರ್ಷದೊಳಗಾಗಿ ಮೈದಾನಕ್ಕೆ ಪೆವಿಲಿಯನ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

4 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

5 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

9 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

10 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

11 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

12 hours ago