ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ ಕಾರಣಮವಾಗುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಿರಿಯರು ಒಂದು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಿದರೆ, ಇಸ್ಪೀಟ್ ಆಡಿದರೆ ೧ ಲಕ್ಷ ರೂ. ದಂಡ ಹಾಗೂ ಮದ್ಯ ಮಾರಾಟ, ಜೂಜು ಆಡುವವರ ಕುರಿತು ಮಾಹಿತಿ ನೀಡಿದರೆ ೫೦ ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಡಂಗೂರ ಸಾರಿಸಲಾಗಿದೆ.
ಬನ್ನಿತಾಳಪುರ ಗ್ರಾಮದ ಮುಖಂಡರು, ಕುಲಸ್ಥರು, ಯಜಮಾನರು ಸಭೆ ಸೇರಿ ಈ ನಿರ್ಣಯ ತೆಗೆದುಕೊಂಡಿದ್ದಾರೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಿ ಗ್ರಾಮದಲ್ಲಿ ಟಾಂಟಾಂ ಮಾಡಿಸಿದ್ದಾರೆ.
ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಈ ಗ್ರಾಮದಲ್ಲಿ ಕೂಲಿ ಮತ್ತಿತರ ಕೆಲಸ ಮಾಡಿ ಕಷ್ಟ ಪಟ್ಟು ಒಂದಷ್ಟು ಹಣ ಸಂಪಾದಿಸುವಮ ಜನರು ಜೂಜು, ಕುಡಿತದತ್ತ ಮುಖ ಮಾಡಿದರೆ ಅವರನ್ನು ನಂಬಿಕೊಂಡು ಇರುವ ಪತ್ನಿ, ಮಕ್ಕಳು, ತಂದೆ ತಾಯಿ ಬೀದಿಗೆ ಬೀಳುತ್ತಾರೆ ಎಂಬ ಕಾರಣದಿಂದ ನಿರ್ಣಯ ಕೈಗೊಳ್ಳಲಾಗಿದೆ.
” ಗ್ರಾಮದ ಒಳಗೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವಂತಿಲ್ಲ, ಜೂಜಾಡು ವಂತಿಲ್ಲ ಎಂದು ವರ್ಷದ ಹಿಂದೆ ಸಾರಲಾಗಿತ್ತು. ಆದರೆ, ಅದು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿರಲಿಲ್ಲ. ಯುವಕರು, ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದರು. ಈ ಬಗ್ಗೆ ಮಹಿಳೆಯರು ಅಳಲು ತೋಡಿಕೊಂಡಿದ್ದರು. ಹೀಗಾಗಿ ಗ್ರಾಮದ ಯಜಮಾನರು, ಮುಖಂಡರು ಸೇರಿ ಈ ತೀರ್ಮಾನ ಕೈಗೊಂಡಿದ್ದು, ಇದರಿಂದ ಗ್ರಾಮದ ಯುವಕರು ದಾರಿ ತಪ್ಪುವುದು ಕಡಿಮೆಯಾಗಿದೆ. ”
-ಕುಮಾರಸ್ವಾಮಿ, ಗ್ರಾಮದ ಮುಖಂಡರು
” ಹಬ್ಬದ ನೆಪದಲ್ಲಿ ಜೂಜಾಟ, ಕುಡಿತ ಹೆಚ್ಚಾಗಿತ್ತು. ಗ್ರಾಮದಲ್ಲಿ ಯುವಕರು, ಸಣ್ಣ ವಯಸ್ಸಿನವರು ಕುಡಿತಕ್ಕೆ ದಾಸರಾಗಿ ದಾರಿ ತಪ್ಪಿದ್ದರು. ಇವರನ್ನು ನಂಬಿಕೊಂಡಿದ್ದ ಕುಟುಂಬಸ್ಥರು ಆರ್ಥಿಕ ತೊಂದರೆಯಿಂದ ಜೀವನ ನಿರ್ವಹಿಸಲು ಕಷ್ಟಪಡುತ್ತಿದ್ದು ಅನೇಕರು ಮದ್ಯವ್ಯಸನಿಗಳಾಗಿ ಚಿಕ್ಕ ವಯಸ್ಸಿನಲ್ಲೇ ಸಾವಿಗೀಡಾಗುತಿದ್ದರು. ಮಕ್ಕಳು ತಬ್ಬಲಿಗಳಾಗಮ ಬಾರದು, ಗ್ರಾಮಕ್ಕೆ ಕೆಟ್ಟ ಹೆಸರು ಬರಬಾರದು ಎಂದು ತೀರ್ಮಾನಿಸಿ, ಈ ಕ್ರಮ ಕೈಗೊಳ್ಳಲಾಗಿದೆ.”
-ಶಿವಯ್ಯಶೆಟ್ಟಿ, ಗ್ರಾಮದ ಯಜಮಾನ
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…