Andolana originals

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ

ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ

ಮಡಿಕೇರಿ: ಮಂಜಿನ ನಗರಿಯ ಪ್ರಸಿದ್ಧ ಪ್ರವಾಸಿತಾಣ ರಾಜಾಸೀಟ್‌ನಲ್ಲಿ ಜ.೨೪ರಿಂದ ೩ ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಕೊಡಗಿನ ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಲಾಕೃತಿಗಳು ಕಣ್ಮನ ಸೆಳೆಯಲಿವೆ.

ಗಣರಾಜ್ಯೋತ್ಸವದ ಪ್ರಯುಕ್ತ ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಇತರೇ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಜ.೨೪ರಿಂದ ೨೬ರವರೆಗೆ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾ ಸೀಟ್ ಉದ್ಯಾನವನದಲ್ಲಿ ಸುಮಾರು ೮ ಸಾವಿರ ಕುಂದಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‌ಗಳಲ್ಲಿ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್,ಡೇಲಿಯಾ ಮುಂತಾದ ೨೦ ಸಾವಿರ ವಿವಿಧ ಜಾತಿಯ ಹೂವುಗಳನ್ನು ಬೆಳೆಸಲಾಗಿದೆ.

ಕೊಡಗಿನ ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿ ಈ ಬಾರಿ ಕಣ್ಮನ ಸೆಳೆಯಲಿದೆ. ೩೩ ಅಡಿ ಎತ್ತರ,೧೮ ಅಡಿ ಉದ್ದ, ೨೩ ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳನ್ನು ಬಳಸಿ ಈ ಕಲಾಕೃತಿಯನ್ನು ನಿರ್ಮಾಣ ಮಾಡಲಾಗಿದೆ. ಜೊತೆಗೆ ಭಾರತ ಏಕೀಕರಣದ ಸಂಕೇತವಾಗಿ ಕನ್ನಡ ಅಕ್ಷರಗಳ ೨.೫ ಅಡಿ ಮತ್ತು ೨.೦ ಅಡಿ ಎತ್ತರದಲ್ಲಿ ನಾಲ್ಕು ಕಲಾಕೃತಿಗಳು ಮತ್ತು ೪.೫ ಅಡಿ ಮತ್ತು ೪.೦ ಅಡಿ ಎತ್ತರದಲ್ಲಿ ೨ ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲು ಯೋಜಿಸಲಾಗಿದೆ.

ಇದರೊಂದಿಗೆ ಸಂಗೀತ ಪರಿಕರಗಳಾದ ೨ ತಬಲಾ ಕಲಾಕೃತಿಯನ್ನು ೨.೫ ಅಡಿ ಎತ್ತರ ಮತ್ತು ೩ ಅಡಿ ಎತ್ತರದಲ್ಲಿ, ೫ ಅಡಿ ಎತ್ತರ, ೪ ಅಡಿ ಅಗಲ ಮತ್ತು ೩ ಅಡಿ ಉದ್ದದ ಪಿಯಾನೊ ಕಲಾಕೃತಿ, ೬ ಅಡಿ ಎತ್ತರ, ೩ ಅಡಿ ಅಗಲದ ಹರ್ಪ್ ಕಲಾಕೃತಿಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಜೊತೆಗೆ ಗಣರಾಜ್ಯೋತ್ಸವದ ಅಂಗವಾಗಿ ಅಮರ್ ಜವಾನ್ ಕಲಾಕೃತಿಯನ್ನು ೮ ಅಡಿ ಎತ್ತರದಲ್ಲಿ ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೊತೆಗೆ ಹಾರುವ ಹಕ್ಕಿ, ಮೀನು, ಬಟರ್‌ಫ್ಲೈ, ಹಾರ್ಟ್ ಶೇಪ್, ಕರಡಿ ಕಲಾಕೃತಿ ರೂಪಿಸಲೂ ನಿರ್ಧರಿಸಲಾಗಿದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್, ಬ್ಲೂವೇ, ಮಿಕ್ಕಿ ಮೌಸ್, ಡೊರೇಮ್ಯಾನ್ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ನಿರ್ಮಿಸಲು ಉದ್ದೇಶಿಸಲಾಗಿದೆ.

ದೇಶದ ವಿವಿಧ ಕ್ಷೇತ್ರಗಳ ಗಣ್ಯರ ಕಲಾಕೃತಿಗಳನ್ನು ಹಣ್ಣು, ತರಕಾರಿಗಳಿಂದ ನಿರ್ಮಿಸಿ ಪ್ರದರ್ಶಿಸಲಾಗುತ್ತದೆ. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನ ಹೂವಿನ ಜೋಡಣೆಯ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತಿದೆ. ಒಟ್ಟಾರೆ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು ೮ ರಿಂದ ೧೦ ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳನ್ನು ಬಳಸಿ ನಿರ್ಮಾಣ ಮಾಡಲು ಇಲಾಖೆ ನಿರ್ಧರಿಸಿದೆ.

೬೦ ಮಳಿಗೆಗಳಲ್ಲಿ ಪ್ರದರ್ಶನ ಕೇಂದ್ರ..!: 

ಫಲಪುಷ್ಪ ಪ್ರದರ್ಶನ ಅಂಗವಾಗಿ ಗಾಂಽ ಮೈದಾನದಲ್ಲಿ ೬೦ ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ. ಇವುಗಳಲ್ಲಿ ೧೦ ಮಳಿಗೆಗಳನ್ನು ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, ಹಾಪ್‌ಕಾಮ್ಸ್, ಕೈಗಾರಿಕೆ, ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದಿರಿಸಲಾಗಿದೆ. ೫೦ ಮಳಿಗೆಗಳಲ್ಲಿ ನರ್ಸರಿ ಗಿಡಗಳ ಮಾರಾಟ,ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ರೈತರು ಬೆಳೆದಿರುವಂತಹ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರ ಬೆಳೆಗಳ ಪ್ರದರ್ಶನ ಏರ್ಪಡಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶನಗಳಿಗೆ ಬಹುಮಾನ ನೀಡಲಾಗುವುದು. ಆಸಕ್ತರು ಜ.೨೩ರಿಂದಲೇ ತೋಟಗಾರಿಕೆ ಇಲಾಖೆಗೆ ಪ್ರದರ್ಶಿಕೆಗಳನ್ನು ತಂದು ಹೆಸರನ್ನು ನೋಂದಾಯಿಸಿಕೊಳ್ಳಲು ಮನವಿ ಮಾಡಲಾಗಿದೆ.

ವಿವಿಧ ಸ್ಪರ್ಧೆಗಳ ಆಯೋಜನೆ..!: 

ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರು ಮತ್ತು ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುತ್ತದೆ. ಆಸಕ್ತರು ಜ.೨೪ರ ಬೆಳಿಗ್ಗೆ ೮ ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ ಮೊ.ಸಂ. ೯೪೪೮೬೧೩೩೫೫ ಅನ್ನು ಸಂಪರ್ಕಿಸಿ ನೋಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ.

” ತೋಟಗಾರಿಕೆ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಜ.೨೪ರಿಂದ ೨೬ರವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಜ.೨೪ರಂದು ಮಧ್ಯಾಹ್ನ ೩ ಗಂಟೆಗೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಶಾಲೆಯ ಸಮವಸ್ತ್ರದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಲಾಗುತ್ತದೆ.”

-ಎಸ್.ಜೆ.ಸೋಮಶೇಖರ್, ಕೊಡಗು ಜಿಲ್ಲಾಧಿಕಾರಿ

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

15 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

15 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

15 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

15 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

16 hours ago