ಮಂಡ್ಯ: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಯಾದ ಒಂದೂವರೆ ವರ್ಷದಲ್ಲೇ ರಸ್ತೆ ಕುಸಿತವಾಗಿದ್ದು, ತಡೆಗೋಡೆ ವಾಲಿರುವ ಘಟನೆ ತಾಲ್ಲೂಕಿನ ಹೊಸ ಬೂದನೂರು-ಹಳೇಬೂದನೂರು ಗ್ರಾಮಗಳ ಬಳಿ ನಡೆದಿದೆ.
ಸುಮಾರು ೧೦ ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ. ತಾಲ್ಲೂಕಿನ ಹೊಸ ಬೂದನೂರು-ಹಳೇ ಬೂದನೂರು ಬಳಿ ಕಳಪೆ ಕಾಮಗಾರಿ ಯಿಂದಾಗಿ ರಸ್ತೆ ಕುಸಿದು ಹಾಗೂ ತಡೆಗೋಡೆ ವಾಲಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಜೀವ ಭಯ ಹುಟ್ಟಿಸುತ್ತಿದೆ. ತಡೆಗೋಡೆ ವಾಲಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಽಕಾರ ತೇಪೆ ಹಾಕುವ ಕೆಲಸಕ್ಕೆ ಮುಂದಾಗಿದೆ. ೨೦೨೩ರ ಮಾರ್ಚ್ ೧೨ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆಗೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಗುತ್ತಿಗೆದಾರ ಕಂಪೆನಿ ಡಿಬಿಎಲ್ ೪ ಕಿ. ಮೀ. ಉದ್ದದ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆಸಿದೆ ಎಂದು ಎರಡೂ ಗ್ರಾಮಗಳ ಗ್ರಾಮಸ್ಥರು ದೂರಿದ್ದಾರೆ. ಸ್ಥಳೀಯರು ಅಂದೇ ರಸ್ತೆ ಅಂಡರ್‌ಪಾಸ್ ಬಳಿ ತಡೆಗೋಡೆಗಳು ವಾಲಿರುವ ಬಗ್ಗೆ ದೂರು ನೀಡಿದ್ದರು.
ನಂತರ ಮಾರ್ಚ್ ೧೨ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸಿದ್ದರು. ನಂತರ ಅಪಘಾತ ಹೆಚ್ಚಾದ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಅಲೋಕ್‌ಕುಮಾರ್ ಕೂಡ ವೀಕ್ಷಣೆ ಮಾಡಿದ್ದರು. ಆದರೂ ಯಾವುದೇ ಕ್ರಮ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಳೇ ಬೂದನೂರು ಬಸ್ ನಿಲ್ದಾಣ ಬಳಿಯ ಅಂಡರ್ ಪಾಸ್ ಮೇಲಿನ ರಸ್ತೆ ಅಲ್ಪ ಪ್ರಮಾಣದಲ್ಲಿ ಕುಸಿತವಾಗಿದೆ. ಬಹುಮುಖ್ಯವಾಗಿ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ರಸ್ತೆ ಕುಸಿತವಾಗಿದ್ದು, ವಾಹನ ಸವಾರರು ವಾಹನ ಗುಂಡಿಗೆ ಬಿದ್ದಾಗ ಆತಂಕಪಡುತ್ತಿದ್ದಾರೆ. ಹಗಲು- ರಾತ್ರಿ ವೇಳೆ ಜೀವಭಯದಿಂದ ಸಂಚರಿಸುವಂತಾಗಿದೆ. ಮೊದಲೇ ಅಪಘಾತ ಹೆದ್ದಾರಿ ಎಂಬ ಹೆಸರು ಪಡೆದಿರುವ ರಸ್ತೆಯಲ್ಲೀಗ ಮತ್ತೊಂದು ಸಮಸ್ಯೆ ಸವಾರರನ್ನು ಕಾಡುವಂತಾಗಿದೆ. ಕಬ್ಬಿಣದ ರಾಡು, ಕಾಂಕ್ರೀಟ್ ತುಂಬುವ ಕೆಲಸ ವಾರದಿಂದ ತಡೆಗೋಡೆ ವಾಲಿರುವುದನ್ನು ತಡೆಯಲು ಹೆದ್ದಾರಿ ಪ್ರಾಽಕಾರ ಕಬ್ಬಿಣದ ರಾಡು ಅಳವಡಿಸಲು ರಂಧ್ರಗಳನ್ನು ಮಾಡಿ ಜೊತೆಗೆ ಕಾಂಕ್ರಿಟ್ ತುಂಬುವ ಕಾಮಗಾರಿ ನಡೆಯುತ್ತಿದೆ. ಇದು ಕೂಡ ಅವೈಜ್ಞಾನಿಕ ವಾಗಿದ್ದು, ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ದೂರಿರುವ ಸ್ಥಳೀಯರು ಸಮರ್ಪಕ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್…
ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…
ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…
ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…
ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…