Andolana originals

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಕಸದ ತೊಟ್ಟಿಯಲ್ಲಿ ಅನ್ನದ ರಾಶಿ

ದೊಡ್ಡಾಸ್ಪತ್ರೆ ಎಂದೇ ಖ್ಯಾತಿ ಪಡೆದಿರುವ ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಟ್ರಾಮಾ ಕೇರ್, ಪಿಕೆಟಿಬಿ ಆಸ್ಪತ್ರೆಗಳಲ್ಲಿ ರೋಗಿಗಳ ಹಸಿವನ್ನು ನೀಗಿಸಬೇಕಾದ ಅನ್ನ ಕಸದ ತೊಟ್ಟಿ ಪಾಲಾಗುತ್ತಿರುವುದು ವಿಷಾದಕರ ಸಂಗತಿ.

ಆಸ್ಪತ್ರೆಯ ಫುಡ್ ಮೆನುವಿನಲ್ಲಿ ಮಧ್ಯಾಹ್ನ ಒಂದು ಕಪ್ ಮೊಸರು, ರಾತ್ರಿ ಮಜ್ಜಿಗೆ ಕೊಡಬೇಕು ಎಂದಿದ್ದರೂ ಒಂದೇ ಒಂದು ದಿನವೂ ಮೊಸರು ಮತ್ತು ಮಜ್ಜಿಗೆಯನ್ನು ನೀಡಿಲ್ಲ ಎಂಬುದು ಒಳ ರೋಗಿಗಳ ಆಪಾದನೆಯಾಗಿದೆ.

ಪಿಕೆಟಿಬಿ ಮತ್ತು ಚೆಲುವಾಂಬ ಆಸ್ಪತ್ರೆಗಳಲ್ಲಿ ಮೊಟ್ಟೆ ನೀಡಲಾಗುತ್ತಿದೆ, ಆದರೆ ಕೆ.ಆರ್.ಆಸ್ಪತ್ರೆಯಲ್ಲಿ ವಿಶೇಷ ದಿನಗಳಲ್ಲಿ ವಿಶೇಷ ಅಡುಗೆ ಮಾಡಲಾಗುತ್ತಿತ್ತು, ಈಗ ಅದ್ಯಾವುದೂ ಇಲ್ಲದೆ ಪ್ರತಿ ದಿನವೂ ಒಂದೇ ತರಹದ ತರಕಾರಿ ಸಾರು ನೀಡುತ್ತಿದ್ದು, ಭಾನುವಾರ ಬೆಳಿಗ್ಗೆ ತಿಂಡಿ ಬದಲು ಮೂರು ಪೀಸ್ ಬ್ರೆಡ್ – ಕಾಫಿ ನೀಡಲಾಗುತ್ತಿದೆ. ಒಳರೋಗಿಗಳಿಗ ನಿಗದಿತ ಸಮಯದಲ್ಲಿ ಊಟ ನೀಡದೆ, ರಾತ್ರಿ ಊಟವನ್ನು ಮಧ್ಯಾಹ್ನ ೩ ರಿಂದ ೫ ಗಂಟೆಯೊಳಗೆ ನೀಡುತ್ತಿರುವುದರಿಂದ ಅನ್ನವನ್ನು ತಿನ್ನಲಾಗದೆ ಬಹುತೇಕ ರೋಗಿಗಳು ಊಟವನ್ನು ಕಸದ ತೊಟ್ಟಿಗೆ ಬಿಸಾಡುತ್ತಿದ್ದಾರೆ. ಜಯದೇವ ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿರುವ ಅನಾಥ ಒಳರೋಗಿಗಳಿಗೆ ಊಟವನ್ನು ಪಾರ್ಸೆಲ್ ಕವರ್‌ನಲ್ಲಿ ಪ್ಯಾಕ್ ಮಾಡಿ ನೀಡುತ್ತಾರೆ. ಆದರೆ ಅದೂ ಕಸದ ತೊಟ್ಟಿಗೆ ಸೇರುತ್ತಿದೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ರೋಗಿಗಳಿಗೆ ಸಕಾಲಕ್ಕೆ ಉತ್ತಮ ಗುಣಮಟ್ಟದ ಊಟ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.

ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

3 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

3 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

3 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

4 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

4 hours ago