ನವೀನ್ ಡಿಸೋಜ
ಪಶು ಇಲಾಖೆಯಿಂದ ೭೬,೯೨೦ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ
ಮಡಿಕೇರಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.೨೬ರಿಂದ ೪೫ ದಿನಗಳ ಕಾಲ ೭ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಜಿಲ್ಲೆಯಲ್ಲಿ ೭೬,೯೨೦ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ಕಾಲುಬಾಯಿ ರೋಗವು ವೈರಾಣುನಿಂದ ಬರುವ ಅಂಟು ಜಾಡ್ಯವಾಗಿದೆ. ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ. ಕಾಲು ಬಾಯಿ ಜ್ವರವು ಒಂದು ವೈರಾಣುರೋಗ ವಾಗಿದ್ದು, ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ.
ಕಾಲುಬಾಯಿ ರೋಗದಿಂದ ಗುಣಮುಖವಾದರೂ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭ ಕಟ್ಟುವಲ್ಲಿ ವಿಳಂಬ, ಎತ್ತು, ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ.
ಲಸಿಕೆ ಹಾಕಿಸುವುದೊಂದೇ ಕಾಲು ಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ ೬ ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟ ಬಹುದಾಗಿರುತ್ತದೆ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ೬ ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕಿದೆ.
ವರ್ಷದಲ್ಲಿ ಕನಿಷ್ಠ ಎರಡು ಬಾರಿ ದನ ಮತ್ತು ಎಮ್ಮೆಗಳಿಗೆ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೇ ಒಮ್ಮೆ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ ೩ ರಿಂದ ೫ ವಾರದೊಳಗೆ ಬೂಸ್ಟರ್ ಲಸಿಕೆ ಹಾಕಿಸ ಬೇಕಿದೆ. ಹಾಗೆಯೇ ಗರ್ಭಧರಿಸಿದ ಹಸು ಮತ್ತು ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕಿದೆ.
ಜಿಲ್ಲೆಯಲ್ಲಿ ೨೦ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ ೭೬,೯೨೦ ಇದ್ದು ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಪಶುಪಾಲನಾ ಇಲಾಖೆ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಂಡಿದ್ದು, ೭೫ ಲಸಿಕಾದಾರರನ್ನೊಳಗೊಂಡ ಲಸಿಕಾ ದಾರರು ರೈತರ, ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ.
ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆಬಂದಾಗ ಸಹಕಾರ ನೀಡಿ ೪ ತಿಂಗಳ ಮೇಲ್ಪಟ್ಟ ಎಲ್ಲಾ ದನ, ಎಮ್ಮೆ ಲಸಿಕೆ ಹಾಕಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ ೯೪೪೮೬೪೭೨೭೬, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಸೋಮವಾರಪೇಟೆ ೯೯೮೦೩೬೦೨೦೦, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ವಿರಾಜಪೇಟೆ ೯೯೦೧೩೦೩೯೯೬, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ ೯೪೪೮೪೨೨೨೬೯ ಸಹಾ ಯಕ ನಿರ್ದೇಶಕರು, ಪಶು ಆಸ್ಪತ್ರೆ, ಪೊನ್ನಂಪೇಟೆ ೯೭೪೦೫೫೬೩೧೧
” ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಕಾಯಿಲೆಯಾಗಿದೆ. ಇದು ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಿಗೆ ತಗಲುವ ಮಾರಕ ರೋಗವಾಗಿದ್ದು, ಲಸಿಕೆ ಹಾಕುವುದರಿಂದ ಕಾಲುಬಾಯಿ ರೋಗವನ್ನು ನಿಯಂತ್ರಿಸಬಹುದಾಗಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರಿಗೆ ಆರ್ಥಿಕ ಸಂಕಷ್ಟ ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕು.”
-ಡಾ.ಲಿಂಗರಾಜ ದೊಡ್ಡಮನಿ, ಉಪ ನಿರ್ದೇಶಕರು, ಪಶುವೈದ್ಯಕೀಯ ಸೇವಾ ಇಲಾಖೆ
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…