ಹಳೇ ಮೈಸೂರು ಭಾಗದ ಹಲವು ಅರಣ್ಯ ಪ್ರದೇಶಗಳಲ್ಲಿ ಹದಿನಕಣ್ಣು
ಚಿರಂಜೀವಿ ಸಿ. ಹುಲ್ಲಹಳ್ಳಿ
ಮೈಸೂರು: ಬೇಸಿಗೆ ಕಾವು ತೀವ್ರವಾಗುವ ಮುನ್ನವೇ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವನ, ಬಿಳಿಗಿರಿರಂಗನಬೆಟ್ಟ, ಮಲೆ ಮಹದೇಶ್ವರ ಬೆಟ್ಟ, ಮೈಸೂರಿನ ಚಾಮುಂಡಿಬೆಟ್ಟ, ನಂಜನಗೂಡು ತಾಲ್ಲೂಕಿನ ಕಾರ್ಯ ಬೆಟ್ಟ ಸೇರಿದಂತೆ ಸ್ಥಳೀಯವಾಗಿರುವ ಸಾಮಾಜಿಕ ಅರಣ್ಯ ಪ್ರದೇಶ ಗಳಲ್ಲಿ ಕಾಡ್ಗಿಚ್ಚಿನಿಂದ ಸಸ್ಯ, ವನ್ಯ ಸಂಪತ್ತು ಹಾನಿಗೀಡಾದಂತೆ ನೋಡಿಕೊಳ್ಳಲು ಹದ್ದಿನ ಕಣ್ಣಿಟ್ಟಿದ್ದಾರೆ.
ವಿಶೇಷವಾಗಿ ಬಂಡೀ ಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಈ ಬಾರಿ ಸಣ್ಣ ಅವಘಡಕ್ಕೂ ಆಸ್ಪದವಾಗದಂತೆ ತಡೆ ಯಲು ತಿಂಗಳ ಮುನ್ನವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವುದು ವಿಶೇಷವಾಗಿದೆ. ಎಲ್ಲ ವಲಯ ಗಳಲ್ಲಿ ಎರಡು ವಾಚ್ ಟವರ್ ಗಳಿದ್ದು, ವಾಚ್ ಟವರ್ ಇಲ್ಲದ ಕಡೆಗಳಲ್ಲಿ ಮಚ್ಚಾನ್ ನಲ್ಲಿ ಬೆಳಿಗ್ಗೆ ೬ ರಿಂದ ಸಂಜೆ ೬ ತನಕ ಹದ್ದಿನ ಕಣ್ಣಿಟ್ಟು ಸಿಬ್ಬಂದಿ ಕಾವಲು ಕಾಯಲಿದ್ದಾರೆ. ಒಂದು ವೇಳೆ ಬೆಂಕಿ ಅವಘಡ ಸಂಭವಿಸಿದ ಸಂದರ್ಭ ಅದನ್ನು ನಿಯಂತ್ರಿಸಲು ಅನುಕೂಲ ವಾಗುವಂತೆ ಬೆಂಕಿ ನಂದಿಸುವ ಬೋಯರ್ಸ್, ಸ್ಪ್ರೇಯರ್ಸ್, ಫೈರ್ ಬೇಯರ್ಸ್‌ಗಳನ್ನು ಸಿದ್ಧಗೊಳಿಸಲಾಗಿದೆ. ಇದೆಲ್ಲದರ ನಡುವೆ ಅರಣ್ಯ ಸಿಬ್ಬಂದಿ, ಫೈರ್ ವಾಚರ್ ಮತ್ತು ವಿಶೇಷ ಹುಲಿ ಸಂರಕ್ಷಣಾ ಪಡೆಯ ಸಿಬ್ಬಂದಿ ಕೂಡ ಗಸ್ತು ತಿರುಗುತ್ತಿದ್ದಾರೆ.
ರಸ್ತೆಯ ಆಸುಪಾಸಿ ನಲ್ಲಿರುವ ಕುರುಚಲು ಕಾಡನ್ನು ಕಡಿದು ಅದನ್ನು ಸುಡುವ ಮೂಲಕ ಅಪ್ಪಿ ತಪ್ಪಿ ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಬೆಂಕಿ ಅ g ಣ z U ಹರಡದಂತೆ ತಡೆಯುವ ಕೆಲಸವನ್ನು ಮಾಡಲಾ ಗುತ್ತಿದೆ. ಬೆಂಕಿ ನಿಯಂ ತ್ರಣ ರೇಖೆ ನಿರ್ಮಾಣ ದಿಂದ ಯಾರಾದರೂ ಅಕಸ್ಮಾತ್ ಸಿಗರೇಟು, ಬೀಡಿ ಸೇದಿ ಬೆಂಕಿ ಆರಿ ಸದ ತುಂಡನ್ನು ಎಸೆದರೂ ಅದರಿಂದ ಬೆಂಕಿ ಹೊತ್ತಿ ಕೊಳ್ಳುವುದನ್ನು ತಡೆ ಯುವುದು ಸಾಧ್ಯ. ಇದೊಂದು ಪ್ರಮುಖ ಕ್ರಮವಾಗಿದ್ದು, ಸಾಮಾನ್ಯವಾಗಿ ಎಲ್ಲ ಅರಣ್ಯಗಳಲ್ಲಿ ಇದನ್ನು ಮಾಡಲಾಗುತ್ತಿದೆ.
ಸದ್ಯ ಅರಣ್ಯ ಇಲಾಖೆಯಿಂದ ಬೆಂಕಿ ನಿಯಂತ್ರಣ ರೇಖೆ ನಿರ್ಮಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದ್ದು, ಇದೀಗ ಸುಮಾರು ಶೇ. ೮೦ರಷ್ಟು ಬೆಂಕಿ ನಿಯಂತ್ರಣ ರೇಖೆಯನ್ನು ನಿರ್ಮಿಸಲಾಗಿದೆ.
೨,೬೫೦ ಚದರ ಕಿ. ಮೀ ಬೆಂಕಿ ತಡೆ ರೇಖೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ೧೩ ವಲಯಗಳಲ್ಲಿ ಸುಮಾರು ೨,೬೫೦ ಚದರ ಕಿ. ಮೀಯಷ್ಟು ಬೆಂಕಿ ನಿಯಂತ್ರಣ ರೇಖೆಯನ್ನು ನಿರ್ಮಿಸಲಾಗುತ್ತಿದೆ.
೪೫೦ ಫೈರ್ ವಾಚರ್‌ಗಳ ನೇಮಕ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಕಿ ಬೀಳದಂತೆ ಅರಣ್ಯ ಇಲಾಖೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಕಾಡಂಚಿನ ಗ್ರಾಮಗಳ ರೈತರು ಜಮೀನಿನಲ್ಲಿ ಬೆಂಕಿ ಹಾಕುವಾಗ ಮುನ್ನೆಚ್ಚರಿಕೆ ಇರಲಿ. ಕಾಡು ಹಾಗೂ ಪ್ರಾಣಿಗಳ ಸಂರಕ್ಷಣೆಗೆ ರೈತರು, ಸಾರ್ವಜನಿಕರ ಸಹಕಾರ ಇಲಾಖೆ ಮೇಲಿರಲಿ ಎಂದು ಮನವಿಯನ್ನು ಮಾಡಿದ್ದಾರೆ. ಇದರ ಜತೆಗೆ ಅರಣ್ಯ ಪ್ರದೇಶದಲ್ಲಿ ವನ್ಯಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಮಾಡುವುದು, ಸೋಲಾರ್ ಬೋರ್ ವೆಲ್‌ಗಳ ತಪಾಸಣೆ ನಡೆಸಿ ಕೆರೆಕಟ್ಟೆಗಳಿಗೆ ನೀರು ತುಂಬಿಸಲಾಗುತ್ತದೆ. ಇಷ್ಟೇ ಅಲ್ಲದೆ ಬೇಸಿಗೆಯ ದಿನಗಳಲ್ಲಿ ಅಗ್ನಿ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳುವ ಸಲುವಾಗಿ ಕಾವಲಿಗೆ ಅರಣ್ಯದಲ್ಲಿ ೪೫೦ ಫೈರ್ ವಾಚರ್‌ಗಳನ್ನು ನೇಮಕ ಮಾಡುವ ಕಾರ್ಯವೂ ನಡೆಯಲಿದೆ. ಅರಣ್ಯದ ೧೩ ವಲಯಗಳಲ್ಲಿ ಸಂಚರಿಸುತ್ತಾ ಪರಿಶೀಲನೆ ನಡೆಸಲು ಒಂದು ಅಥವಾ ಎರಡು ಹೆಚ್ಚುವರಿ ಜೀಪುಗಳ ವ್ಯವಸ್ಥೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಂರಕ್ಷಿತ ಅರಣ್ಯದಲ್ಲಿ ೪೫೦ ಫೈರ್ ವಾಚರ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ೧೩ ವಲಯಗಳಲ್ಲಿ ಒಂದು ಅಥವಾ ಎರಡು ಹೆಚ್ಚುವರಿ ವಾಹನಗಳನ್ನು ನೀಡಲಾಗಿದೆ.
ಕಿಡಿಗೇಡಿಗಳ ಚಲನವಲನದ ಮೇಲೆ ಡ್ರೋನ್ ಕಣ್ಗಾವಲು
ಗುಂಡ್ಲುಪೇಟೆ ಹಾಗೂ ಬಂಡೀಪುರ ಉಪ ವಿಭಾಗದ ಅಧಿಕಾರಿಗಳ ಸಭೆ ನಡೆಸಿ ಬೇಸಿಗೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಕುರಿತು ಹಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಅರಣ್ಯದ ಪ್ರಮುಖ ಸ್ಥಳ ಹಾಗೂ ಹೆದ್ದಾರಿಯಲ್ಲಿ ಡ್ರೋನ್ ಮೂಲಕ ಕಿಡಿಗೇಡಿಗಳ ಚಲನವಲನಗಳ ಮೇಲೆ ಕಣ್ಣಿಡಲಾಗುತ್ತದೆ. ಅಗ್ನಿಶಾಮಕ ದಳಕ್ಕೆ ಪತ್ರ ಬರೆದು ಸಹಕಾರ ಪಡೆಯುವ ನಿರ್ಧಾರ ಮಾಡಲಾಗಿದೆ. –ಎಸ್. ಪ್ರಭಾಕರನ್, ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ.
ವಾಚ್ ಟವರ್‌ಗಳ ಸ್ಥಾಪನೆ
ಕೆಲ ದಿನಗಳ ಹಿಂದೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ, ಅಗ್ನಿಶಾಮಕ ಇಲಾಖೆಯ ಸಹಕಾರದಿಂದ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಲಾಯಿತು. ವಾಚ್ ಟವರ್ ಗಳನ್ನು ಸ್ಥಾಪಿಸಿ ಅಲ್ಲಿ ಸಿಬ್ಬಂದಿ ಇದ್ದು ನಿಗಾ ವಹಿಸುತ್ತಾರೆ. ಚಾಮುಂಡಿಬೆಟ್ಟ ಸೇರಿದಂತೆ ಸಾಮಾಜಿಕ ಅರಣ್ಯಗಳಲ್ಲಿ ಬೆಂಕಿ ಕಾಣಿಸಿಕೊಂಡರೆ ನಂದಿಸಲು ನೀರು ಅತ್ಯಗತ್ಯ. ಆದ್ದರಿಂದ ನೀರು ಲಭ್ಯವಿರುವ ಸ್ಥಳಗಳನ್ನು ಗುರುತಿಸಿಕೊಳ್ಳಲಾಗಿದೆ. -ಡಾ. ಮಾಲತಿ ಪ್ರಿಯಾ, ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ.
ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ಕ್ರಮ
ಅರಣ್ಯ ಬೆಂಕಿಯನ್ನು ತಡೆಯಲು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗ್ನಿ ಶಾಮಕ ಇಲಾಖೆಯ ಜೊತೆ ಸಂಪರ್ಕದಲ್ಲಿ ಇರುತ್ತೇವೆ. ಬೆಂಕಿ ಕಂಡುಬರುವ ಪ್ರದೇಶಗಳನ್ನು ಗುರುತಿಸಿ, ಮುನ್ನೆಚ್ಚರಿಕೆಯಾಗಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ, ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ. – ಡಾ ಕೆ. ಎನ್. ಬಸವರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವನ್ಯಸಂಪತ್ತನ್ನು ಬೇಸಿಗೆಯಿಂದ ಸಂರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ೨,೬೦೦ ಕಿ. ಮೀ ಬೆಂಕಿರೇಖೆ ನಿರ್ಮಿಸಲಾಗಿದೆ. ಇಲಾಖೆ ಸಿಬ್ಬಂದಿಗಳೊಂದಿಗೆ ಹೆಚ್ಚುವರಿಯಾಗಿ ತಾತ್ಕಾಲಿಕವಾಗಿ ೪೦೦ಕ್ಕೂ ಹೆಚ್ಚು ಫೈರ್ ವಾಚರ್‌ಗಳನ್ನು ನೇಮಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳ ಸಹಕಾರ ಕೋರಲಾಗಿದೆ. ಗಸ್ತು ಹೆಚ್ಚಳ ಮಾಡಲಾಗಿದೆ. ಕಾಡಂಚಿನ ಗ್ರಾಮಗಳ ಜನರ ಸಹಕಾರ ಪಡೆಯಲಾಗಿದೆ. ಪ್ರತಿ ವಲಯದಲ್ಲೂ ಟ್ಯಾಂಕರ್ ಹಾಗೂ ಬೆಂಕಿ ನಂದಿಸುವ ಉಪಕರಣಗಳನ್ನು ನೀಡಲಾಗಿ ದೆ. ವಿವಿಧ ಕಾರ್ಯಕ್ರಮಗಳ ಮೂಲಕ ಕಾಡಂಚಿನ ಗ್ರಾಮಗಳ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ೮ ವಲಯಗಳ ಎಲ್ಲಾ ಸಿಬ್ಬಂದಿ ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಪಣತೊಟ್ಟು ಕಾರ್ಯನಿರ್ವಹಿಸುತ್ತಿದ್ದಾರೆ. -ಸೀಮಾ, ನಿರ್ದೇಶಕರು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ.
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…
ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…
ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…
ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…
ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…
ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…