Andolana originals

ನಾಳೆಯಿಂದ ರಾಜ್ಯಮಟ್ಟದ ಜಾನಪದ ಕಲಾಮೇಳ

ಚುಂಚಶ್ರೀ ಪ್ರಶಸ್ತಿ ಪ್ರದಾನ; ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕ

ನಾಗಮಂಗಲ: ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕದ ಅಂಗವಾಗಿ ಸೆ.೨೪ ಮತ್ತು ೨೫ರಂದು ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ ಜಾನಪದ ಕಲಾಮೇಳ ನಡೆಯಲಿದೆ.

ಜಾನಪದ ಕಲೆಯನ್ನು ಸಂರಕ್ಷಿಸಿ ಅದರ ಶ್ರೇಯೋಭಿವೃದ್ಧಿಗಾಗಿ ಚಿಂತಿಸುತ್ತಿದ್ದ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಶ್ರೀಗಳು ಜನಪದ ಕಲೆ, ಸಾಹಿತ್ಯವನ್ನು ರಕ್ಷಿಸಿ, ಉಳಿಸಿ ಬೆಳೆಸುವುದರ ಜತೆಗೆ ಕಲಾವಿದರ ಬದುಕನ್ನು ಹಸನುಗೊಳಿಸುವ ಉದ್ದೇಶದಿಂದ ತಮ್ಮ ಪಟ್ಟಾಭಿಷೇಕದ ವಾರ್ಷಿಕ ಮಹೋತ್ಸವವನ್ನು ನಾಡಿನ ಜಾನಪದ ಕಲಾವಿದರಿಗೆ ಅರ್ಪಿಸುವ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ಜಾನಪದ ಕಲಾಮೇಳ ನಡೆಸಲು ಚಿಂತಿಸಿದ್ದರು. ಅದರಂತೆ ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ ಜಾನಪದ ಕಲಾಮೇಳವನ್ನು ನಡೆಸುತ್ತಾ ಬಂದಿದ್ದು, ಶ್ರೀಗಳು ನಿಧನರಾದ ನಂತರವೂ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಮುಂದುವರಿದಿದೆ.

ಇದುವರೆಗೂ ೪೫ ಜಾನಪದ ಕಲಾಮೇಳಗಳು ಮೇಳೈಸಿದ್ದು, ೪೬ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳವನ್ನು ನಡೆಸಲು ಶ್ರೀ ಮಠ ಸಜ್ಜಾಗಿದೆ. ಈ ವೇಳೆ ಚುಂಚಶ್ರೀ ಪ್ರಶಸ್ತಿ ಪ್ರದಾನ ಹಾಗೂ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗುರು ಸಂಸ್ಮರಣೋತ್ಸವ ಸಮಾರಂಭವೂ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಕಲಾವಿದರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ೧೫ ಸಾವಿರಕ್ಕೂ ಹೆಚ್ಚು ಮಂದಿ ಜಾನಪದ ಕಲಾವಿದರು ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಕಲೆಯನ್ನು ಪ್ರದರ್ಶಿಸುವ ನಿರೀಕ್ಷೆ ಇದೆ.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯುವ ರಾಜ್ಯಮಟ್ಟದ ಜಾನಪದ ಕಲಾಮೇಳವನ್ನು ಸೆ.೨೪ರ ಬೆಳಿಗ್ಗೆ ೧೦ ಗಂಟೆಗೆ ಶ್ರೀಗಳ ಜತೆಗೂಡಿ ಗಣ್ಯರು ಉದ್ಘಾಟಿಸಲಿದ್ದಾರೆ. ಇದೇ ದಿನ ಸಂಜೆ ೮ ಗಂಟೆಗೆ ಕ್ಷೇತ್ರದ ಬಿಜಿಎಸ್ ವೃತ್ತದಿಂದ ಜೋಡಿ ರಸ್ತೆಯಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸರ್ವಾಲಂಕೃತ ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಜಾನಪದ ಕಲಾವಿದರ ವರ್ಣರಂಜಿತ ಮೆರವಣಿಗೆ ನಡೆದ ಬಳಿಕ ಸರ್ವಾಲಂಕೃತ ಶ್ರೀ ಕಾಲಭೈರವೇಶ್ವರಸ್ವಾಮಿ ಪುಷ್ಕರಣೆಯಲ್ಲಿ ತೆಪ್ಪೋತ್ಸವ ಜರುಗಲಿದೆ.

ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸೆ.೨೫ರ ಬೆಳಿಗ್ಗೆ ೯.೩೦ ಗಂಟೆಗೆ ಶ್ರೀ ಬಾಲಗಂಗಾಧರನಾಥ ಶ್ರೀಗಳ ೫೨ನೇ ವಾರ್ಷಿಕ ಪಟ್ಟಾಭಿಷೇಕ, ಶ್ರೀ ಗುರು ಸಂಸ್ಮರಣೋತ್ಸವಮತ್ತು ರಾಜ್ಯಮಟ್ಟದ ೪೬ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳದ ಸಮಾರೋಪ ಸಮಾರಂಭ ನಡೆಯಲಿದ್ದು, ಜಾನಪದ ಕ್ಷೇತ್ರದ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

” ಜಾನಪದ ಕಲಾಮೇಳದಲ್ಲಿ ಭಾಗವಹಿಸುವ ಎಲ್ಲಾ ಕಲಾವಿದರಿಗೆ ವಸ್ತ್ರ, ಪ್ರಯಾಣ ಭತ್ಯೆ ಹಾಗೂ ಉಚಿತ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುವುದು. ಜಾನಪದ ಕಲಾಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಸೆ.೨೩ರ ಬೆಳಿಗ್ಗೆ ೯ ಗಂಟೆಗೆ ಆಗಮಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ನಂತರ ಬಂದವರನ್ನು ನೋಂದಣಿ ಮಾಡಿಕೊಳ್ಳುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್ ಜತೆಗೆ ತಮ್ಮ ಜಿಲ್ಲೆಯ ಆದಿಚುಂಚನಗಿರಿ ಶಾಖಾ ಮಠಗಳು ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾಗವಹಿಸುವಿಕೆಯ ಪತ್ರವನ್ನು ಕಡ್ಡಾಯವಾಗಿ ತರತಕ್ಕದ್ದು. ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು. ಜಾನಪದ ಹಾಡುಗಾರರ ತಂಡದಲ್ಲಿ ಕನಿಷ್ಠ ೫ ಮಂದಿ, ಗರಿಷ್ಟ ೧೨ ಮಂದಿ ಇರಬೇಕು. ಕಲಾ ಪ್ರದರ್ಶನ ನೀಡುವ ತಂಡದಲ್ಲಿ ಕನಿಷ್ಠ ೯ ರಿಂದ ೩೦ ಮಂದಿ ಕಲಾವಿದರು ಇರಬೇಕು.”

ಶ್ರೀ ಪ್ರಸನ್ನನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ, ಆದಿಚುಂಚನಗಿರಿ ಮಠ

ಆಂದೋಲನ ಡೆಸ್ಕ್

Recent Posts

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

16 mins ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

26 mins ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

40 mins ago

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣ: ರಾಜೀವ್‌ಗೌಡ ಮನೆಗಳಿಗೆ ನೋಟಿಸ್‌ ಅಂಟಿಸಿದ ಪೊಲೀಸರು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು…

1 hour ago

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

5 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

5 hours ago