ನವೀನ್ ಡಿಸೋಜ
ಯಾವುದೇ ಸಮಯದಲ್ಲಿ ನದಿಗೆ ನೀರು ಹರಿಯಬಿಡುವ ಸಾಧ್ಯತೆ; ಎಚ್ಚರದಿಂದಿರಲು ನದಿಪಾತ್ರದ ಜನರಿಗೆ ಸೂಚನೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಸಮಯದಲ್ಲಿ ನದಿಗೆ ನೀರು ಹರಿಯಬಿಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದಿರುವಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ೭೬೭.೪೩ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೩೩೯.೫೮ ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.೫೦ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಅವಧಿಗೂ ಮುನ್ನವೇ ಜಲಾಶಯ ಬಹುತೇಕ ಭರ್ತಿಯಾಗಿದೆ.
೨,೮೫೯ ಅಡಿ ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಮಂಗಳವಾರ ಬೆಳಿಗ್ಗೆ ೮ ಗಂಟೆಯ ವೇಳೆಗೆ ೨,೮೫೧.೧೩ ಅಡಿಯಷ್ಟು ನೀರಿನ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೨,೮೨೪.೧೦ ಅಡಿಗಷ್ಟು ಮಾತ್ರ ನೀರಿನ ಸಂಗ್ರಹವಿತ್ತು. ಜಲಾಶಯದಲ್ಲಿ ಸದ್ಯ ೫.೪೧೮೬೬ ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೨.೨೮೬೭೮ ಟಿಎಂಸಿ ಯಷ್ಟು ನೀರಿನ ಸಂಗ್ರಹವಿತ್ತು. ಸದ್ಯ ಜಲಾಶಯಕ್ಕೆ ೧,೫೪೧ ಕ್ಯೂಸೆಕ್ಸ್‌ನಷ್ಟು ನೀರು ಹರಿದುಬರುತ್ತಿದ್ದು, ಮಂಗಳವಾರ ಬೆಳಿಗ್ಗೆ ವೇಳೆಗೆ ನದಿಗೆ ೧೦೦ ಕ್ಯೂಸೆಕ್ಸ್‌ನಷ್ಟು ನೀರನ್ನು ಹರಿಯಬಿಡಲಾಗುತ್ತಿದೆ.
ಸಾಮಾನ್ಯವಾಗಿ ಹಾರಂಗಿ ಜಲಾಶಯ ಭರ್ತಿಯಾಗುವುದು ಆಗಸ್ಟ್ ತಿಂಗಳಿನಲ್ಲಿ. ಒಮ್ಮೊಮ್ಮೆ ಹೆಚ್ಚು ಮಳೆಯಿದ್ದಾಗ ಜುಲೈ ತಿಂಗಳಾಂತ್ಯದಲ್ಲಿ ಭರ್ತಿಯಾಗುತ್ತದೆ. ಜೂನ್ ನಲ್ಲಿ ಜಲಾಶಯ ಭರ್ತಿಯಾಗಿರುವುದೇ ಅಪರೂಪ.
” ಹಾರಂಗಿ ಜಲಾಶಯಕ್ಕೆ ಹೆಚ್ಚು ನೀರು ಹರಿದುಬರುತ್ತಿದೆ. ದೊಡ್ಡ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದರೆ ಕುಶಾಲನಗರದಲ್ಲಿ ಪ್ರವಾಹ ಉಂಟಾಗು ತ್ತದೆ. ಹೀಗಾಗಿ ಜಲಾಶಯ ಭರ್ತಿಗೆ ಕೆಲ ಅಡಿಗಳಿರುವಾಗ ಮಳೆ ಮತ್ತು ಒಳಹರಿವಿನ ಪ್ರಮಾಣ ನೋಡಿಕೊಂಡು ನೀರು ಬಿಡುಗಡೆ ಮಾಡಲಾಗುವುದು. ಸಾರ್ವಜನಿಕರು ಎಚ್ಚರದಿಂದ ಇರಬೇಕು.”
-ಪುಟ್ಟಸ್ವಾಮಿ, ಕಾರ್ಯಪಾಲಕ ಇಂಜಿನಿಯರ್, ಹಾರಂಗಿ.
ಪ್ರವಾಹ ಮುನ್ನೆಚ್ಚರಿಕೆ..!
” ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕೋರಲಾಗಿದೆ.”
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…