Andolana originals

ಅವಧಿಗೂ ಮುನ್ನವೇ ಹಾರಂಗಿ ಬಹುತೇಕ ಭರ್ತಿ

ನವೀನ್ ಡಿಸೋಜ

ಯಾವುದೇ ಸಮಯದಲ್ಲಿ ನದಿಗೆ ನೀರು ಹರಿಯಬಿಡುವ ಸಾಧ್ಯತೆ; ಎಚ್ಚರದಿಂದಿರಲು ನದಿಪಾತ್ರದ ಜನರಿಗೆ ಸೂಚನೆ 

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಸಮಯದಲ್ಲಿ ನದಿಗೆ ನೀರು ಹರಿಯಬಿಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದಿರುವಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ೭೬೭.೪೩ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೩೩೯.೫೮ ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.೫೦ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಅವಧಿಗೂ ಮುನ್ನವೇ ಜಲಾಶಯ ಬಹುತೇಕ ಭರ್ತಿಯಾಗಿದೆ.

೨,೮೫೯ ಅಡಿ ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಮಂಗಳವಾರ ಬೆಳಿಗ್ಗೆ ೮ ಗಂಟೆಯ ವೇಳೆಗೆ ೨,೮೫೧.೧೩ ಅಡಿಯಷ್ಟು ನೀರಿನ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೨,೮೨೪.೧೦ ಅಡಿಗಷ್ಟು ಮಾತ್ರ ನೀರಿನ ಸಂಗ್ರಹವಿತ್ತು. ಜಲಾಶಯದಲ್ಲಿ ಸದ್ಯ ೫.೪೧೮೬೬ ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೨.೨೮೬೭೮ ಟಿಎಂಸಿ ಯಷ್ಟು ನೀರಿನ ಸಂಗ್ರಹವಿತ್ತು. ಸದ್ಯ ಜಲಾಶಯಕ್ಕೆ ೧,೫೪೧ ಕ್ಯೂಸೆಕ್ಸ್‌ನಷ್ಟು ನೀರು ಹರಿದುಬರುತ್ತಿದ್ದು, ಮಂಗಳವಾರ ಬೆಳಿಗ್ಗೆ ವೇಳೆಗೆ ನದಿಗೆ ೧೦೦ ಕ್ಯೂಸೆಕ್ಸ್‌ನಷ್ಟು ನೀರನ್ನು ಹರಿಯಬಿಡಲಾಗುತ್ತಿದೆ.

ಸಾಮಾನ್ಯವಾಗಿ ಹಾರಂಗಿ ಜಲಾಶಯ ಭರ್ತಿಯಾಗುವುದು ಆಗಸ್ಟ್ ತಿಂಗಳಿನಲ್ಲಿ. ಒಮ್ಮೊಮ್ಮೆ ಹೆಚ್ಚು ಮಳೆಯಿದ್ದಾಗ ಜುಲೈ ತಿಂಗಳಾಂತ್ಯದಲ್ಲಿ ಭರ್ತಿಯಾಗುತ್ತದೆ. ಜೂನ್ ನಲ್ಲಿ ಜಲಾಶಯ ಭರ್ತಿಯಾಗಿರುವುದೇ ಅಪರೂಪ.

” ಹಾರಂಗಿ ಜಲಾಶಯಕ್ಕೆ ಹೆಚ್ಚು ನೀರು ಹರಿದುಬರುತ್ತಿದೆ. ದೊಡ್ಡ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದರೆ ಕುಶಾಲನಗರದಲ್ಲಿ ಪ್ರವಾಹ ಉಂಟಾಗು ತ್ತದೆ. ಹೀಗಾಗಿ ಜಲಾಶಯ ಭರ್ತಿಗೆ ಕೆಲ ಅಡಿಗಳಿರುವಾಗ ಮಳೆ ಮತ್ತು ಒಳಹರಿವಿನ ಪ್ರಮಾಣ ನೋಡಿಕೊಂಡು ನೀರು ಬಿಡುಗಡೆ ಮಾಡಲಾಗುವುದು. ಸಾರ್ವಜನಿಕರು ಎಚ್ಚರದಿಂದ ಇರಬೇಕು.”

-ಪುಟ್ಟಸ್ವಾಮಿ, ಕಾರ್ಯಪಾಲಕ ಇಂಜಿನಿಯರ್, ಹಾರಂಗಿ.

ಪ್ರವಾಹ ಮುನ್ನೆಚ್ಚರಿಕೆ..!

” ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕೋರಲಾಗಿದೆ.”

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

37 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

41 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

44 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

48 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

57 mins ago