ಎಂ.ನಾರಾಯಣ
ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ
ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಗ್ರಾಮ ಪಂಚಾಯಿತಿಯನ್ನು ಗುರುತಿಸಿ ರಾಜ್ಯ ಸರ್ಕಾರವು ಕೊಡಮಾಡುವ ೨೦೨೪-೨೫ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ತಾಲ್ಲೂಕಿನ ರಂಗಸಮುದ್ರ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.
ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿ ಯಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸರ್ಕಾರದ ಯೋಜನೆಗಳನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸುವ ಪಂಚಾಯಿತಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನೀಡಲಾಗುವ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನವಾಗಿರುವ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ಇದಾಗಿದೆ.
ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜ ನೆಗಳಾದ ಸ್ವಚ್ಛ ಭಾರತ್ ಮಿಷನ್, ಮಹಾತ್ಮ ಗಾಂಧಿ ನರೇಗಾ ಯೋಜನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ವಸತಿ ಯೋಜನೆ, ತೆರಿಗೆ ವಸೂಲಾತಿ, ಶಾಲೆ ಮತ್ತು ಅಂಗನವಾಡಿಗಳ ಅಭಿವೃದ್ಧಿ, ಶೌಚಾಲಯಗಳ ನಿರ್ಮಾಣ, ಬೀದಿ ದೀಪ ಮತ್ತು ಮೂಲಸೌಕರ್ಯ, ಬಾಲ್ಯವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿ ನಿಷೇಧ, ಮಾನವ ಅಭಿವೃದ್ಧಿ ಸೂಚ್ಯಂಕ ಸೇರಿದಂತೆ ಅಭಿವೃದ್ಧಿಯಲ್ಲಿ ರಂಗಸಮುದ್ರ ಗ್ರಾಮ ಪಂಚಾಯಿತಿ ಮುಂಚೂಣಿಯಲ್ಲಿದೆ.
ಪ್ರಶಸ್ತಿಯು ಸ್ಮರಣಿಕೆ ಹಾಗೂ ೭ ಲಕ್ಷ ರೂ. ಮೊತ್ತದ ಸಹಾಯಧನವನ್ನು ಒಳಗೊಂಡಿರುತ್ತದೆ. ಬೆಂಗಳೂರಿನಲ್ಲಿ ಜರುಗುವ ಸಮಾರಂಭದಲ್ಲಿ ಸರ್ಕಾರದ ವತಿಯಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯ ಮೊತ್ತವನ್ನು ಗ್ರಾಮಗಳ ಮೂಲಸೌಲಭ್ಯಗಳ ಅಭಿವೃದ್ಧಿಗಾಗಿ ಬಳಸಲಾಗುತ್ತದೆ.
” ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಅಭಿವೃದ್ಧಿ ಕೆಲಸಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ತೆರಿಗೆ ಸಂಗ್ರಹಣೆಯಲ್ಲಿ ಶೇ.೧೦೦ ರಷ್ಟು ಪ್ರಗತಿ ಸಾಽಸಿ ತಾಲ್ಲೂಕಿನಲ್ಲೇ ಅಗ್ರ ಸ್ಥಾನದಲ್ಲಿರುವಂತೆ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುವಂತೆ ಪ್ರಶಸ್ತಿಯು ಪ್ರೇರೇಪಿಸಿದೆ.”
-ಮೊಹಮ್ಮದ್ ಇಸ್ಹಾಕ್, ಪಿಡಿಒ, ರಂಗಸಮುದ್ರ ಗ್ರಾಪಂ
” ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಅಭಿವೃದ್ಧಿಯನ್ನೇ ಧ್ಯೇಯವಾಗಿರಿಸಿ ನಮ್ಮ ಪಿಡಿಒ ಮತ್ತು ಎಲ್ಲಾ ಸದಸ್ಯರ ಸಹಕಾರದಿಂದ ಉತ್ತಮ ಕಾರ್ಯಗಳನ್ನು ಮಾಡಲಾಗಿದೆ. ಅದಕ್ಕೆ ತಕ್ಕಂತೆ ಗಾಂಧಿ ಗ್ರಾಮ ಪುರಸ್ಕಾರ ದೊರಕಿರುವುದು ಸಂತೋಷ ಉಂಟುಮಾಡಿದೆ.”
-ಸುಜಾತ ರಂಗಸ್ವಾಮಿ, ನಿಕಟಪೂರ್ವ ಅಧ್ಯಕ್ಷರು, ರಂಗಸಮುದ್ರ ಗ್ರಾಪಂ
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…