ಮೈಸೂರು: ನಗರದ ರಾಮಾನುಜ ರಸ್ತೆಯ ೧೭ ಕ್ರಾಸ್‌ನ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆರಾಚುತ್ತಿದೆ. ಈಗ ಮಳೆ ಬೀಳುತ್ತಿರುವುದರಿಂದ ಕಸದ ರಾಶಿ ಕೊಳೆತು ನಾರುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವುದು ಅನಿವಾರ್ಯವಾಗಿದೆ.
ಮಹಾನಗರ ಪಾಲಿಕೆಯವರು ನಿಯಮಿತವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಕಸದ ರಾಶಿ ಕಂಡು ಬರುತ್ತಿದ್ದು, ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳು ಕಸವನ್ನು ಹರಡುತ್ತಿರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಮೈಸೂರು ಮಹಾನಗರ ಪಾಲಿಕೆ ತ್ಯಾಜ್ಯ ಸಂಗ್ರಹಿಸುವ ವಾಹನವು ಪ್ರತಿದಿನವೂ ಬೆಳಿಗ್ಗೆ ನಗರದ ಪ್ರತಿ ನಾಗರಿಕರ ಮನೆಯ ಬಾಗಿಲಿಗೆ ಆಗಮಿಸುತ್ತಿದ್ದರೂ ಸಾರ್ವಜನಿಕರು ಪ್ರತಿದಿನ ರಾತ್ರಿ ವೇಳೆ ಕಸವನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಇಲ್ಲಿಗೆ ಎಸೆಯುತ್ತಿದ್ದಾರೆ.
ಸ್ಥಳದಲ್ಲಿ ಸಿಸಿ ಕ್ಯಾಮೆರಾ ಆಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲಿನ ತ್ಯಾಜ್ಯವನ್ನು ತೆರವುಗೊಳಿಸಿ, ಇಲ್ಲಿ ಸಂಚರಿಸುವವರಿಗೆ ಮತ್ತು ಅಕ್ಕ ಪಕ್ಕದ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇ ಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಸ್ಥಳದಲ್ಲಿ ಹಲವು ಬಾರಿ ತಾವೇ ಸ್ವಚ್ಛತೆಯನ್ನು ಮಾಡಿಸಿದ್ದರೂ ವಾಹನಗಳಲ್ಲಿ ಬರುವವರುರಾತ್ರಿ ಸಮಯದಲ್ಲಿ ಕಸವನ್ನು ತಂದು ಬೀಸಾಡಿ ಹೋಗುತ್ತಿದ್ದಾರೆ ಎಂದು ಸ್ಥಳೀಯರು ಆಪಾದಿಸಿದ್ದಾರೆ.
” ರಾತ್ರಿ ವೇಳೆ ಫಾಸ್ಟ್‌ಫುಡ್ ವ್ಯಾಪಾರಿಗಳು ಹಾಗೂ ಅಕ್ಕಪಕ್ಕದ ಮನೆಯವರು ಕಸವನ್ನು ತಂದು ಹಾಕುತ್ತಿದ್ದಾರೆ. ಸ್ಥಳದಲ್ಲಿ ಸಿಸಿ ಕ್ಯಾಮೆರಾ ಆಳವಡಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಸದ ದುರ್ವಾಸನೆಯಿಂದ ಮನೆಯಲ್ಲಿ ಇರಲು ಕಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು.”
– ಡಾ.ಪಂಡಿತಾರಾಧ್ಯ, ಸ್ಥಳೀಯ ನಿವಾಸಿ
” ಮಹಾನಗರ ಪಾಲಿಕೆಯವರು ಕಸವನ್ನು ತೆರವುಗೊಳಿಸಿದರೂ ರಸ್ತೆಯಲ್ಲೇ ಕಸವನ್ನು ತೆಗೆದು ಸ್ವಚ್ಛಗೊಳಿಸಿದರೂ ರಾತ್ರಿ ವೇಳೆ ಹೋಟೆಲ್‌ಗಳವರು ತ್ಯಾಜ್ಯವನ್ನು ಎಸೆಯುತ್ತಿದ್ದಾರೆ. ಕಸದ ದುರ್ವಾಸನೆಯಿಂದ ರೋಗಗಳು ಹರಡುವ ಭೀತಿಎದುರಾಗಿದೆ.”
-ಆನಂದ್, ಸ್ಥಳೀಯ ನಿವಾಸಿ
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…