ನವೀನ್ ಡಿಸೋಜ
ಹಸಿರು ಪಟಾಕಿಗಳಿಗಷ್ಟೇ ಅವಕಾಶ; ರಾತ್ರಿ ೮ರಿಂದ ೧೦ರವರೆಗೆ ಸಿಡಿಸಲು ಕಾಲಮಿತಿ, ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ
ಮಡಿಕೇರಿ: ಬೆಳಕಿನ ಹಬ್ಬ ದೀಪಾವಳಿ ಎಂದರೆ ಮನೆ ಮನೆಯಲ್ಲೂ ದೀಪಗಳ ಬೆಳಕು, ಸಂಭ್ರಮ, ಸಡಗರ. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಸಂಭ್ರಮದ ನಡುವೆ ಪಟಾಕಿಗಳ ಅಬ್ಬರ ಹೆಚ್ಚಾಗಿ ಪರಿಸರ ಮತ್ತು ಸಾರ್ವ ಜನಿಕರ ಆರೋಗ್ಯಕ್ಕೆ ಸವಾಲಾಗಿ ಪರಿಣಮಿಸಿದೆ. ಕ್ಷಣಿಕ ಸಂಭ್ರಮಕ್ಕಾಗಿ ಸಿಡಿಸುವ ಪಟಾಕಿಗಳು ವಾತಾವರಣಕ್ಕೆ ವಿಷಕಾರಿ ಹೊಗೆ ಸೇರಿಸುವುದರ ಜೊತೆಗೆ ಶಬ್ದ ಮಾಲಿನ್ಯವನ್ನೂ ಹೆಚ್ಚಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪರಿಸರದ ಕಾಳಜಿಯೊಂದಿಗೆ ಹಬ ಆಚರಿಸುವಂತೆ ಕೊಡಗು ಜಿಲ್ಲಾಡಳಿತ ಹಾಗೂ ಪರಿಸರ ಜಾಗೃತಿ ಸಮಿತಿ ಸಾರ್ವಜನಿಕರಿಗೆ ಕರೆ ನೀಡಿವೆ.
ದೀಪಾವಳಿಯನ್ನು ಮಾಲಿನ್ಯ ರಹಿತ, ಸುರಕ್ಷಿತ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿವೆ.
ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಸಾರ್ವಜನಿಕರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಪಟಾಕಿ ತಯಾರಿಕೆಯಲ್ಲಿ ಬಳಸುವ ವಿವಿಧ ರಾಸಾ ಯನಿಕ ವಸ್ತುಗಳು ಸಿಡಿದ ನಂತರ ವಾತಾವರಣಕ್ಕೆ ಸೇರಿ ವಾಯು ಮಾಲಿನ್ಯ ಉಂಟುಮಾಡುತ್ತವೆ. ಇವುಗಳಿಂದ ಹೊರಹೊಮ್ಮುವ ಹೊಗೆ ಮತ್ತು ವಿಷಾನಿಲಗಳು ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ಎಲ್ಲರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತವೆ.
ವಿಶೇಷವಾಗಿ ಉಸಿರಾಟದ ತೊಂದರೆ ಇರುವವರು, ವೃದ್ಧರು ಹಾಗೂ ಪುಟ್ಟ ಮಕ್ಕಳಿಗೆ ಪಟಾಕಿಯ ಹೊಗೆ ಅಪಾಯಕಾರಿಯಾಗಿದೆ. ಪ್ರಾಣಿ-ಪಕ್ಷಿಗಳಿಗೂ ಪಟಾಕಿಗಳ ತೀವ್ರ ಶಬ್ದದಿಂದ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಅನುಮತಿ ಪಡೆದ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮತ್ತು ಬಳಕೆ ಮಾಡಬೇಕು. ಪಟಾಕಿ ಪೊಟ್ಟಣಗಳ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇರುವುದನ್ನು ಖಚಿತಪಡಿಸಿ ಕೊಳ್ಳಬೇಕು. ಪರವಾನಗಿ ಪಡೆದ ಅಂಗಡಿಗಳಿಂದಲೇ ಪಟಾಕಿ ಖರೀದಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.
ಪಟಾಕಿ ಸಿಡಿಸುವುದಕ್ಕೂ ಸಮಯದ ಮಿತಿ ವಿಧಿಸಲಾಗಿದೆ. ರಾತ್ರಿ ೮ರಿಂದ ೧೦ ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ೧೨೫ ಡೆಸಿಬಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ ಸೇರಿದಂತೆ ನಿಶ್ಶಬ್ದ ವಲಯಗಳಲ್ಲಿ ಯಾವುದೇ ಸಮಯದಲ್ಲೂ ಶಬ್ದ ಉಂಟುಮಾಡುವ ಪಟಾಕಿಗಳನ್ನು ಸಿಡಿಸುವಂತಿಲ್ಲ. ಪಟಾಕಿ ಮಾರಾಟ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಚೀಲಗಳ ಬಳಕೆಗೂ ನಿರ್ಬಂಧವಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
” ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಅವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಆದ್ದರಿಂದ ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಸಾರ್ವಜನಿಕರು ಸಹಕರಿಸಬೇಕು.”
-ಎಸ್.ಜೆ.ಸೋಮಶೇಖರ್, ಕೊಡಗು ಜಿಲ್ಲಾಧಿಕಾರಿ
” ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಶಾಲಾ- ಕಾಲೇಜುಗಳಲ್ಲಿ ಮತ್ತು ಸಮುದಾಯದಲ್ಲಿ ಜನಜಾಗೃತಿ ಮೂಡಿಸುತ್ತಾ ಬರುತ್ತಿದ್ದು, ಇತ್ತೀಚೆಗೆ ಜಿಲ್ಲೆಯಲ್ಲಿ ಪಟಾಕಿ ಸಿಡಿತ ಕ್ಷೀಣಿಸಿದೆ. ಮಾಲಿನ್ಯಕಾರಿ ಪಟಾಕಿಗಳ ಬಳಕೆಯನ್ನು ಕಡಿಮೆ ಮಾಡುವ ಮೂಲಕ, ಶಬ್ದ ಮತ್ತು ವಾಯು ಮಾಲಿನ್ಯವನ್ನು ತಪ್ಪಿಸುವ ಮೂಲಕ ಹಸಿರು ದೀಪಾವಳಿಯನ್ನು ಆಚರಿಸಬೇಕಿದೆ. ಸ್ವಚ್ಛ, ಆರೋಗ್ಯಕರ ಮತ್ತು ಹಸಿರು ಭಾರತಕ್ಕೆ ಕೊಡುಗೆ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.”
-ಟಿ.ಜಿ.ಪ್ರೇಮಕುಮಾರ್, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಶಿಕ್ಷಕ
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶಕ್ಕೆ ತೆರಿಗೆ ವಸೂಲಾತಿಗೆ ಮುಂದಾಗಿರುವ ಪಿಡಿಒಗಳು ಮೈಸೂರು: ಗ್ರಾಮ ಪಂಚಾಯಿತಿಗಳು ರಾಜ್ಯ, ಕೇಂದ್ರ ಸರ್ಕಾರಗಳ…
ಮಂಜು ಕೋಟೆ ಗ್ರಾಮದಲ್ಲಿ ಬೋರ್‌ವೆಲ್ ಕೊರೆಸಿ ನೀರಿನ ಸಮಸ್ಯೆ ಪರಿಹರಿಸಿದ ಶಂಕರೇಗೌಡ ಎಚ್.ಡಿ.ಕೋಟೆ: ಅಧಿಕಾರಿಗಳು ಕುಡಿಯುವ ನೀರು ಒದಗಿಸಲು ಎಷ್ಟೇ…
ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟರೆ, ಅದರ ಪರಿಣಾಮ ನಮ್ಮ ಅಡುಗೆ ಮನೆಯ ಬಜೆಟ್ ಮೇಲೂ ಬೀಳುತ್ತಾ? ಎಲ್ ನಿನೊ ಪ್ರಭಾವದಿಂದ…
ಚೆನ್ನೈ: ದೀಪಾವಳಿ ಹಬ್ಬಕ್ಕೆ ತಮಿಳುನಾಡು ಸರ್ಕಾರ ವಿಶೇಷ ತರಕಾರಿ ಕಿಟ್ ಪರಿಚಯಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರದ ‘ವೆಟ್ರಿ’ ಯೋಜನೆಯಡಿ,…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ನವೆಂಬರ್ 6ರಿಂದ 18 ತಿಂಗಳ ಕಾಲ ಕೆಎಸ್‌ಆರ್‌ಟಿಸಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಕ್ಟೋಬರ್ 23ರಿಂದ ಕರ್ನಾಟಕ…