Andolana originals

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್.

ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ… ಕುಳಿತುಕೊಳ್ಳಲು ಕುರ್ಚಿ ಇಲ್ಲ… ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ ಹೇಳಲಾಗದು… ಇನ್ನು ಸ್ವಚ್ಛತೆ ನಾಪತ್ತೆ ಎಂಬಂತಾಗಿದೆ. ಇಂತಹ ದುರವಸ್ಥೆ ಇರುವುದು ಸರ್ಕಾರಿ ಕಚೇರಿಯಲ್ಲಿ! ಅದರಲ್ಲೂ ಇಲ್ಲಿಗೆ ಬರುವ ವರು ಹೆಚ್ಚಾಗಿ ಮಹಿಳೆಯರು, ಮಕ್ಕಳು!  ವಿಜಯನಗರ ಎರಡನೇ ಹಂತದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಮೂಲಸೌಕರ್ಯಗಳೇ ಇಲ್ಲ. ಇಲ್ಲಿಗೆ ಹೆಚ್ಚಾಗಿ ಅಂಗನವಾಡಿ ಕಾರ್ಯಕರ್ತೆಯರು ಬರುತ್ತಾರೆ.

ಪ್ರತಿ ದಿನ ಕೆಲಸಕ್ಕೆ ಸಂಬಂಧಿತ ಅವರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬ ಆಶಯದಿಂದ ಇಲ್ಲಿಗೆ ಭೇಟಿ ನೀಡುತ್ತಾರೆ. ಅಲ್ಲದೆ, ಸಾರ್ವಜನಿಕರು ತಮ್ಮ ಊರಿನ ಅಂಗನವಾಡಿ ಕೇಂದ್ರ, ಕಾರ್ಯಕರ್ತೆಯರು, ಸಹಾ ಯಕಿಯರ ಕಾರ್ಯವೈಖರಿ ಬಗ್ಗೆ ಮಾತನಾಡಲು ಈ ಕಚೇರಿಗೆ ಬರುತ್ತಾರೆ. ಒಮ್ಮೊಮ್ಮೆ ಸಂಜೆಯವರೆಗೂ ಕಾಯುವುದು ಅನಿವಾರ್ಯವಾಗುತ್ತದೆ.

ಇಂತಹ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ ಕುಡಿಯಲು ನೀರು, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಶೌಚಾಲಯ ಇತ್ಯಾದಿ ಮೂಲಸೌಕರ್ಯಗಳೇ ಇಲ್ಲ. ಕಚೇರಿ ಕಟ್ಟಡದ ಯಾವ ಭಾಗದಲ್ಲೂ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ದೂರದಿಂದ ಬರುವ ಜನರು ತಮ್ಮ ಕೆಲಸಕ್ಕೆ ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಬಾಯಾರಿಕೆಯಾದರೆ ಅಂಗಡಿಗಳಲ್ಲಿ ಹಣ ಕೊಟ್ಟು ನೀರು ಖರೀದಿಸಬೇಕಾಗಿದೆ.

ಇಲ್ಲಿರುವ ಶೌಚಾಲಯಕ್ಕೆ ಬೀಗವೇ ಇಲ್ಲದಂತಾಗಿದೆ. ಕಚೇರಿ ಸಿಬ್ಬಂದಿ ಮಾತ್ರ ಸುಸಜ್ಜಿತವಾದ ಶೌಚಾಲಯಗಳನ್ನು ಬಳಸುತ್ತಾರೆ.

ಉಳಿದ ಸಮಯದಲ್ಲಿ ಬಂದ್ ಮಾಡಲಾಗುತ್ತದೆ. ಅಂಗನವಾಡಿ ಸಿಬ್ಬಂದಿಗೆ ಬಳಕೆಗೆ ಅವಕಾಶವಿಲ್ಲ. ಹಾಗಾಗಿ ಅಶುಚಿತ್ವ ಶೌಚಾಲಯದಿಂದಾಗಿ ಅವರುಪಾಡು ಶೋಚನೀಯವಾಗಿದೆ. ವಿವಿಧ ವಿಭಾಗಗಳ ತ್ಯಾಜ್ಯಗಳು ಹಾಗೂ ಕಸ ಮತ್ತಿತರ ವಸ್ತುಗಳನ್ನುಕಟ್ಟಡದ ಸುತ್ತ ಎಲ್ಲೆಂದರಲ್ಲಿ ಎಸೆಯಲಾಗಿದೆ. ಕಟ್ಟಡದ ಒಳ ಆವರಣವನ್ನೂ ಬಿಡದೆ ಕಸ ಸುರಿಯಲಾಗಿದೆ.

” ಪಾರಂಪರಿಕ ಮತ್ತು ಸ್ವಚ್ಛ ನಗರ ಎಂದು ದೇಶದಲ್ಲೇ ಪ್ರಸಿದ್ಧಿ ಹೊಂದಿರುವ ಮೈಸೂರು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲೇ ಅಶುಚಿತ್ವ ತಾಂಡವವಾಡುತ್ತಿದೆ ಎಂದರೆ ಅದು ನಾಚಿಕೆಗೇಡು. ಕನಿಷ್ಠ ತಮ್ಮ ಇಲಾಖೆಯ ಡಿ ಗ್ರೂಪ್ ನೌಕರರಿಂದ ಸ್ವಚ್ಛ ಮಾಡಿಸಿಕೊಳ್ಳುವ ಜವಾಬ್ದಾರಿಯನ್ನು ಅವರು ತೋರುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮಕ್ಕೆ ಮುಂದಾಗಬೇಕು”

-ಹೆಸರು ಹೇಳಲಿಚ್ಛಿಸದ ಅಂಗನವಾಡಿ ಕಾರ್ಯಕರ್ತೆ

” ಸಮಸ್ಯೆ ಕುರಿತು ಈಗಷ್ಟೇ ತಿಳಿದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವ್ಯವಸ್ಥೆಯಾಗಿರುವ ಮೂಲ ಸೌಕರ್ಯಗಳನ್ನು ಸರಿಪಡಿಸಲಾಗುವುದು. ಜೊತೆಗೆ ನಮ್ಮ ಸಿಬ್ಬಂದಿಗಳಿಂದ ಅಶುಚಿತ್ವವಾದರೆ ಅವರಿಗೂ ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳಲಾಗುವುದು”

-ನಾಗರಾಜು, ಜಂಟಿ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

 

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago