Andolana originals

‘ಸರ್ಕಾರಿ ಪಿಯು ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ ಭಾಗ್ಯ’

ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ

ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ ಬ್ಲಾಕ್ ನಿರ್ಮಾಣ

೧೭೬ ತರಗತಿ ಕೊಠಡಿಗಳ ದುರಸ್ತಿಗೆ ಕ್ರಮ

೨೦೨೫-೨೬ನೇ ಹಣಕಾಸು ವರ್ಷದಲ್ಲೇ ಕಾಮಗಾರಿಗೆ ಸೂಚ

ಗಿರೀಶ್ ಹುಣಸೂರು

ಮೈಸೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಕೊಠಡಿಗಳ ಕೊರತೆ ಹೋಗಲಾಡಿಸಲು ಹೊಸ ತರಗತಿ ಕೊಠಡಿಗಳ ನಿರ್ಮಾಣ, ಶೌಚಾಲಯ ಬ್ಲಾಕ್‌ಗಳ ನಿರ್ಮಾಣ ಹಾಗೂ ತರಗತಿ ಕೊಠಡಿಗಳ ದುರಸ್ತಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ.

೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ೭೨೫ ಕೋಟಿ ರೂ. ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ೫೦ ಕೋಟಿ ರೂ.ಗಳನ್ನು ಒದಗಿಸುವುದಾಗಿ ಪ್ರಕಟಿಸಿದ್ದರು. ಅದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ಕ್ರಿಯಾ ಯೋಜನೆ ೨೦೨೫-೨೬ನೇ ಸಾಲಿಗೆ, ೨೦೨೩-೨೪ನೇ ಸಾಲಿನ ಏಕರೂಪ ದರಪಟ್ಟಿಯ ದರಗಳು ಹಾಗೂ ದರಪಟ್ಟಿಗೆ ಸಂಬಂಧಿಸಿದ ತಿದ್ದುಪಡಿಗಳನ್ನು ಅಳವಡಿಸಿಕೊಂಡು ಸಿದ್ಧಪಡಿಸಿ, ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಕ್ಕೆ ನಿಗದಿಪಡಿಸಲಾದ ಘಟಕ ವೆಚ್ಚಗಳನ್ನು ಮತ್ತು ಜಿಲ್ಲಾ ಉಪನಿರ್ದೇಶಕರಿಂದ ನಿಯಮಗಳ ಪ್ರಕಾರ ಜಿಲ್ಲಾಮಟ್ಟದ ಟೆಂಡರ್ ಮೂಲಕ ಲೋಕೋಪಯೋಗಿ ಇಲಾಖೆಯಿಂದ ನಿಯಮಾನು ಸಾರ ಅನುಷ್ಠಾನಗೊಳಿಸುವಂತೆ ತಿಳಿಸಲಾಗಿದೆ. ಇದ ರಿಂದಾಗಿ ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳಲ್ಲಿನ ೧೩೫ ಪದವಿಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿಯಾಗಿ ೧೮೫ ಕೊಠಡಿಗಳು ನಿರ್ಮಾಣ ವಾಗಲಿವೆ. ರ‍್ಯಾಂಪ್ ಸಹಿತ ಪ್ರತಿ ಕೊಠಡಿ ನಿರ್ಮಾಣದ ಘಟಕ ವೆಚ್ಚವನ್ನು ೨೮.೨೫ ಲಕ್ಷ ರೂ. ನಿಗದಿಪಡಿಸಲಾಗಿದೆ. ೧೮೫ ಹೊಸ ಕೊಠಡಿಗಳ ನಿರ್ಮಾಣಕ್ಕಾಗಿ ೫,೨೮೩.೮೫ ಲಕ್ಷ ರೂ. ಅನುದಾನ ನಿಗದಿಪಡಿಸಿದೆ. ಇನ್ನು ಈ ಜಿಲ್ಲೆಗಳಲ್ಲಿನ ಪಿಯು ಕಾಲೇಜುಗಳ ಪೈಕಿ ಬಾಲಕರ ೪೬ ಶೌಚಾಲಯ ಬ್ಲಾಕ್ ನಿರ್ಮಾಣಕ್ಕಾಗಿ ತಲಾ ೧೦.೬ ಲಕ್ಷ ರೂ., ಬಾಲಕಿಯರ ೫೦ ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕಾಗಿ ತಲಾ ೯.೯೫ ಲಕ್ಷ ರೂ.ಗಳನ್ನು ನಿಗದಿಪಡಿಸಿದ್ದು, ಒಟ್ಟಾರೆ ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕೆ ೯೮೫.೧೦ ಲಕ್ಷರೂ. ನಿಗದಿಪಡಿಸಿದೆ. ರಾಜ್ಯದ ೧೭೬ ಪಿಯು ಕಾಲೇಜು ಕೊಠಡಿಗಳ ದುರಸ್ತಿಗಾಗಿ ೩೪೩.೪೩ ಲಕ್ಷ ರೂ. ಸೇರಿದಂತೆ ಒಟ್ಟಾರೆ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ೬,೬೧೨.೩೮ ಲಕ್ಷ ರೂ. ಅನುದಾನವನ್ನು ನಿಗದಿಪಡಿಸಿ ಅನುಮೋದನೆ ನೀಡಲಾಗಿದೆ.

ಈ ಕಾಮಗಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯು ಆಯಾಯ ಜಿಪಂ ಸಿಇಒ ಹಾಗೂ ಡಿಡಿಪಿಯುಗಳದ್ದಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಕಾಮಗಾರಿಗಳ ಅನುದಾನ ಬಳಕೆಯಲ್ಲಿ ಅಥವಾ ಅನುಷ್ಠಾನದಲ್ಲಿ ಯಾವುದೇ ಪುನರಾವರ್ತನೆ ಆಗದಂತೆ ಎಲ್ಲಾ ಕಾಮಗಾರಿಗಳ ಮೇಲುಸ್ತುವಾರಿ ವಹಿಸಬೇಕು ಎಂದು ತಿಳಿಸಲಾಗಿದೆ.

ಸರ್ಕಾರಿ ಕಾಲೇಜು ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ನಿಯಮಗಳನುಸಾರ ೨೮.೨೫ ಲಕ್ಷ ರೂ. ಘಟಕ ವೆಚ್ಚದಂತೆ ಕಾಮಗಾರಿ ನಿರ್ವಹಿಸಬೇಕು. ಉದ್ದೇಶಿತ ಕಾಮಗಾರಿಗಳನ್ನು ನಿರ್ದಿಷ್ಟಪಡಿಸಲಾದ ಸಂಸ್ಥೆಯಿಂದ ನಿಯಮಗಳನುಸಾರ ನಿರ್ವಹಿಸತಕ್ಕದ್ದು ಎಂದು ಹೇಳಲಾಗಿದೆ.

” ಅನುದಾನ ಬಳಕೆ ಮತ್ತು ಕಾಮಗಾರಿ ಅನುಷ್ಠಾನ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಷರತ್ತುಗಳು ಮತ್ತು ನಿಬಂಧನೆಗಳನ್ನು ವಿಧಿಸಲಾಗಿದ್ದು, ೨೦೨೫-೨೬ನೇ ಆರ್ಥಿಕ ಸಾಲಿನ ಅಂತ್ಯದೊಳಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ತಿಳಿಸಲಾಗಿದೆ.”

-ಆರ್.ವಿ.ಶುಭಮಂಗಳ , ವಿಶೇಷಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧಿನ ಕಾರ್ಯದರ್ಶಿ (ಯೋಜನೆ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ.

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

1 hour ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

1 hour ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

1 hour ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

1 hour ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

1 hour ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

1 hour ago