Andolana originals

ಗ್ರಾಪಂ: ಮೀಸಲಾತಿ ಪ್ರಕಟಣೆಗೆ ದಿನಗಣನೆ

ಕೆ.ಬಿ.ರಮೇಶನಾಯಕ

ಮೈಸೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೈಸೂರು ಜಿಲ್ಲೆಯ ೨೫೫ ಗ್ರಾಮ ಪಂಚಾಯಿತಿಗಳ ೪,೩೧೭ ಸದಸ್ಯ ಸ್ಥಾನಗಳಿಗೆ ಎರಡು- ಮೂರು ದಿನಗಳಲ್ಲಿ ವರ್ಗವಾರು ಮೀಸಲಾತಿ ಘೋಷಣೆಯಾಗುವ ಸಾಧ್ಯತೆ ಇದೆ.

ಪಕ್ಕದ ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಪಂಗಳ ಸ್ಥಾನಗಳಿಗೆ ಈಗಾಗಲೇ ಮೀಸಲಾತಿ ಪ್ರಕಟವಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮೀಸಲಾತಿ ಪಟ್ಟಿ ಪರಿಶೀಲನೆ ಅಂತಿಮ ಹಂತದಲ್ಲಿದೆ. ಇದರಿಂದಾಗಿ ಮೀಸಲಾತಿ ಪ್ರಕಟ ಮಾಡುವ ಕುರಿತು ಹಲವಾರು ದಿನಗಳಿಂದ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳ ಮನದಲ್ಲಿ ಸಂತಸ ಮೂಡಿಸಿದ್ದು, ಲೋಕಲ್ ಫೈಟ್ ಎದುರಿಸಲು ಮಾನಸಿಕವಾಗಿ ತಯಾರಾಗಿದ್ದಾರೆ.

ರಾಜ್ಯದಲ್ಲಿ ೫,೫೫೦ ಗ್ರಾಮ ಪಂಚಾಯಿತಿಗಳ ಸದಸ್ಯರ ಐದು ವರ್ಷಗಳ ಆಡಳಿತಾವಧಿ ಡಿಸೆಂಬರ್‌ಗೆ ಮುಗಿದರೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆದ ದಿನದ ಲೆಕ್ಕ ಪರಿಗಣನೆಗೆ ತೆಗೆದುಕೊಳ್ಳುವುದರಿಂದ ಫೆಬ್ರವರಿ ತಿಂಗಳಲ್ಲಿ ಮುಕ್ತಾಯವಾಗಿತ್ತು. ಹೀಗಾಗಿ, ಆರು ತಿಂಗಳ ಅವಧಿಯೊಳಗೆ ಚುನಾವಣೆ ನಡೆಸಬೇಕೆಂಬ ಕೂಗು ಕೇಳಿ ಬಂದರೂ ನಾನಾ ಕಾರಣಕ್ಕಾಗಿ ಸರ್ಕಾರ ಮುಂದೂಡುತ್ತಲೇ ಬಂದಿತ್ತು.

ಆದರೆ, ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರಿಂದಾಗಿ ನವೆಂಬರ್ ತಿಂಗಳೊಳಗೆ ಮೂರು ಹಂತದ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಿದ್ದು, ಗ್ರಾಪಂ ಚುನಾವಣೆಯನ್ನು ಬಹುಬೇಗನೆ ಮುಗಿಸಲು ತಯಾರಿ ಮಾಡಿಕೊಂಡಿದೆ. ಅದಕ್ಕೆ ಪೂರಕವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಪಂ ವರ್ಗವಾರು ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಮಾಡಿ ರಾಜ್ಯಪತ್ರ ಪ್ರಕಟಿಸಿರುವುದನ್ನು ಗಮನಿಸಬಹುದಾಗಿದೆ.

೨-೩ ದಿನಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಪ್ರಕಟ: ಮೈಸೂರು ಜಿಲ್ಲೆಯ ೨೫೫ ಗ್ರಾಮ ಪಂಚಾಯಿತಿಗಳ ಸಾಮಾನ್ಯ ೨,೦೮೯, ಮಹಿಳೆ- ೨,೨೨೮ ಸ್ಥಾನಗಳು ಸೇರಿದಂತೆ ೪,೩೧೭ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಲು ತಯಾರಿ ಮಾಡಲಾಗುತ್ತಿದೆ. ಮೈಸೂರು ಜಿಲ್ಲೆಯ ಚುನಾವಣಾ ಶಾಖೆಯಲ್ಲಿ ಮೀಸಲಾತಿ ಪಟ್ಟಿಯನ್ನು ಸಿದ್ಧ ಮಾಡುತ್ತಿದ್ದು, ಚುನಾವಣಾಧಿಕಾರಿಗಳು ಅಧಿಕೃತವಾಗಿ ರಾಜ್ಯಪತ್ರ ಪ್ರಕಟಿಸಿದ ಮೇಲೆ ಬಹಿರಂಗವಾಗಲಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.೫೦ರಷ್ಟು ಮೀಸಲಿರಿಸಿದ್ದಲ್ಲದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಹಿಂದುಳಿದ ಎ-ವರ್ಗ, ಹಿಂದುಳಿದ ಬಿ-ವರ್ಗ, ಸಾಮಾನ್ಯ ವರ್ಗಗಳೆಂದು ಮೀಸಲಿಡಲಾಗಿದೆ.

ಜಿಲ್ಲೆಯ ೨೫೫ ಗ್ರಾಪಂಗಳ ೪,೩೧೭ ಸ್ಥಾನಗಳ ಪೈಕಿ ಪರಿಶಿಷ್ಟ ಜಾತಿಯಲ್ಲಿ ೪೦೪ ಸಾಮಾನ್ಯ, ೫೩೮ ಮಹಿಳೆ ಸೇರಿ ೯೪೨, ಪರಿಶಿಷ್ಟ ಪಂಗಡಗಳಲ್ಲಿ ೨೪೩ ಸಾಮಾನ್ಯ, ೪೨೬ ಮಹಿಳೆ ಸೇರಿ ೬೬೯, ಹಿಂದುಳಿದ ‘ಎ’ ವರ್ಗದಲ್ಲಿ ೧೭೨ ಸಾಮಾನ್ಯ, ೩೦೦ ಮಹಿಳೆ ಸೇರಿ ೪೭೨, ಹಿಂದುಳಿದ ‘ಬಿ’ ವರ್ಗದ ಸ್ಥಾನಗಳಲ್ಲಿ ೬೫ ಸಾಮಾನ್ಯ, ೪೫ ಮಹಿಳೆ ಸೇರಿ ೧೧೦, ಸಾಮಾನ್ಯ ವರ್ಗದ ಪೈಕಿ ೧,೨೦೫ ಸಾಮಾನ್ಯ, ೯೧೯ ಸೇರಿದಂತೆ ೨,೧೨೪ ಸ್ಥಾನಗಳನ್ನು ಮೀಸಲಿಡಲಾಗಿದೆ.

ಲೋಕಲ್ ಫೈಟ್‌ಗೆ ಸಜ್ಜು: ಗ್ರಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ಸೂಚನೆ ಸಿಗುತ್ತಿದ್ದಂತೆ ಹಳ್ಳಿಗಳಲ್ಲಿ ಅಖಾಡ ಸಿದ್ಧವಾಗುತ್ತಿದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಯಾವುದೇ ಚುನಾವಣೆ ನಡೆದಿಲ್ಲ. ಸ್ಥಳೀಯವಾಗಿ ತಮ್ಮ ಪ್ರಾಬಲ್ಯ ಹೊಂದಿರುವ ಗ್ರಾಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮೀಸಲಾತಿ ಪ್ರಕಟಿಸಿದ ಬಳಿಕ ಮತ್ತೊಮ್ಮೆ ಚುನಾವಣೆ ಎದುರಿಸಲು ಸಜ್ಜಾಗಲಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಮೀಸಲಾತಿ ನಿಗದಿಯಾಗದೆ ಬೇರೆ ವರ್ಗಕ್ಕೆ ಮೀಸಲಾತಿ ನಿಗದಿಯಾಗಿದ್ದರೆ ತಮ್ಮವರನ್ನು ನಿಲ್ಲಿಸುವ ಸಾಧ್ಯತೆ ಇದೆ. ೨೦೨೦ರಲ್ಲಿ ರೋಸ್ಟರ್ ಪ್ರಕಾರ ನಿಗದಿಯಾಗಿರುವ ಮೀಸಲಾತಿಯನ್ನು ಈ ಬಾರಿ ಮರುಪರಿಶೀಲನೆ ನಡೆಸಿ ಮತ್ತೊಮ್ಮೆ ರೋಸ್ಟರ್ ನಿಗದಿಪಡಿಸಿ ಮೀಸಲಾತಿ ನಿಗದಿಪಡಿಸಬೇಕು. ಪರಿಶಿಷ್ಟ ಜಾತಿಗೆ ಮೀಸಲಾತಿ ಇದ್ದರೆ, ಅದನ್ನು ಪುರುಷ ಅಥವಾ ಮಹಿಳೆಗೆ ಮೀಸಲಿಡಬೇಕು. ಅದೇರೀತಿ ಪರಿಶಿಷ್ಟ ಪಂಗಡಗಳು ಪುರುಷ ವರ್ಗಕ್ಕೆ ನಿಗದಿಯಾಗಿದ್ದರೆ ಈ ಬಾರಿ ಮಹಿಳೆಗೆ ಅವಕಾಶ ಕೊಡಬೇಕು.

ಕಳೆದ ಬಾರಿ ಹಿಂದುಳಿದ ವರ್ಗಕ್ಕೆ ಅವಕಾಶ ಕೊಟ್ಟಿಲ್ಲದಿದ್ದರೆ ಈ ಬಾರಿ ಪರಿಗಣಿಸಿ ಮೀಸಲಾತಿ ನಿಗದಿಪಡಿಸಲಾಗುತ್ತಿದೆ. ವಿಶೇಷವಾಗಿ ಮಹಿಳೆಯರಿಗೆ ಶೇ.೫೦ರಷ್ಟು ಮೀಸಲಾತಿ ನಿಗದಿಯಾಗಿದ್ದರೂ, ಅದರಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಕ್ಕೆ ನಿಗದಿಪಡಿಸಬೇಕಾಗಿದ್ದು, ಅದಕ್ಕಾಗಿ ಚುನಾವಣಾ ಅಧಿಕಾರಿಗಳು ಬಹಳ ಸೂಕ್ಷ್ಮತೆಯಿಂದ ರೋಸ್ಟರ್ ಪ್ರಕಾರವೇ ನಿಗದಿಪಡಿಸುವುದಕ್ಕೆ ಹೆಚ್ಚಿನ ಗಮನಹರಿಸಿ ಪಟ್ಟಿ ತಯಾರಿ ಮಾಡಿರುವುದು ವಿಶೇಷವಾಗಿದೆ. ಹೀಗಾಗಿಯೇ, ಮೀಸಲಾತಿ ಪಟ್ಟಿ ಪ್ರಕಟವಾದ ಮೇಲೆ ರಾಜಕೀಯ ಚಟುವಟಿಕೆಗಳು ಗರಿಗೆದರುವುದು ನಿಶ್ಚಿತವಾಗಲಿದೆ.

” ಗ್ರಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ಸೂಚನೆ ಸಿಗುತ್ತಿದ್ದಂತೆಹಳ್ಳಿಗಳಲ್ಲಿ ಅಖಾಡ ಸಿದ್ಧವಾಗುತ್ತಿದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಯಾವುದೇ ಚುನಾವಣೆ ನಡೆದಿಲ್ಲ. ಸ್ಥಳೀಯವಾಗಿ ತಮ್ಮ ಪ್ರಾಬಲ್ಯ ಹೊಂದಿರುವ ಗ್ರಾಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮೀಸಲಾತಿ ಪ್ರಕಟಿಸಿದ ಬಳಿಕ ಮತ್ತೊಮ್ಮೆ ಚುನಾವಣೆ ಎದುರಿಸಲು ಸಜ್ಜಾಗಲಿದ್ದಾರೆ”

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

3 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

4 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

4 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

4 hours ago

ಟಿಎಪಿಸಿಎಂಎಸ್ ಚುನಾವಣೆಗೆ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ  ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ…

4 hours ago