ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು ಬಂದು ಸಂಚಾರಕ್ಕೆ ತೊಂದರೆಯಾಗಿದೆ.
ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿರವರು ಕೊಳ್ಳೇಗಾಲ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಇತರೆ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ೫೦ ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು. ಈ ಪೈಕಿ ವೆಂಕಟೇಶ್ವರ ಮಹಲ್ ರಸ್ತೆ, ಜಯ ಇನ್‌ಸ್ಟಿಟ್ಯೂಟ್ ರಸ್ತೆ ಮತ್ತು ಕೆ.ಎಸ್. ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಿಷ್ಣುವರ್ಧನ್ ರಸ್ತೆಯ ಡಾಂಬರನ್ನು ತೆಗೆದು ಕಾಂಕ್ರೀಟ್ ರಸ್ತೆಯಾಗಿ ದುರಸ್ತಿಪಡಿಸಲು ಮೀಸಲಿರಿಸಿದ್ದರು. ಅದರಂತೆ ಕಳೆದ ವರ್ಷ ಸ್ಥಳೀಯ ಗುತ್ತಿಗೆದಾರರ ಮೂಲಕ ಕಾಮಗಾರಿ ನಡೆದಿದೆ. ಆದರೆ ಒಂದೇ ವರ್ಷದಲ್ಲಿ ಕಾಂಕ್ರೀಟ್ ರಸ್ತೆಯ ಜಲ್ಲಿಕಲ್ಲು ಕಿತ್ತು ಬರುತ್ತಿದ್ದು ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಅಲ್ಲದೆ, ರಸ್ತೆ ಅಭಿವೃದ್ಧಿ ಮಾಡುವಾಗ ಎರಡು ಕಡೆಯೂ ಬಾಕ್ಸ್ ಚರಂಡಿ ಮಾಡಿ ಮಳೆ ನೀರು ಹರಿದು ಹೋಗಲು ಸಂಪರ್ಕ ಕಲ್ಪಿಸಬೇಕಾಗಿತ್ತು. ಆದರೆ, ಆಂದೋಲನ ಸರ್ಕಲ್‌ನಿಂದ ದತ್ತ ಮೆಡಿಕಲ್‌ವರೆಗೆ ಎರಡೂ ಕಡೆಗಳಲ್ಲಿ ಅಂಗಡಿ ಮಾಲೀಕರು ಒತ್ತುವರಿ ಮಾಡಿ ಕಟ್ಟಡ ಕಟ್ಟಿಕೊಂಡಿರುವುದರಿಂದ ರಸ್ತೆ ಮಾಡುವ ಸಂದರ್ಭದಲ್ಲಿ ಅಕ್ರಮ ಕಟ್ಟಡಗಳನ್ನು ತೆರವು ಮಾಡಿಸದೆ, ಚರಂಡಿ ಕಾಮಗಾರಿ ಪೂರ್ಣಗೊಳಿಸದೆ ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ನಡೆದಿದೆ.
ಅಧಿಕಾರಿಗಳು ರಸ್ತೆ ಕಾಮಗಾರಿ ಸರಿಯಾಗಿದೆ ಎಂದು ದೃಢೀಕರಿಸಿರುವುದರಿಂದ ೩ ಕೋಟಿ ರೂ. ಬಿಡುಗಡೆಯಾಗಿ, ಗುತ್ತಿಗೆದಾರರಿಗೆ ಹಣ ಸಂದಾಯವಾಗಿದೆ ಎಂದು ತಿಳಿದುಬಂದಿದೆ. ಟೆಂಡರ್ ನಿಬಂಧನೆ ಪ್ರಕಾರ ಸಿಮೆಂಟ್, ಜಲ್ಲಿಕಲ್ಲು, ಎಂ.ಸ್ಯಾಂಡ್‌ಅನ್ನು ಬಳಸದೇ ಇದ್ದುದ್ದರಿಂದ ರಸ್ತೆ ಕಳಪೆಯಾಗಿ ಕೂಡಿದ್ದು, ಜಲ್ಲಿಕಲ್ಲು ಹಾಗೂ ಎಂ.ಸ್ಯಾಂಡ್ ಬೇರ್ಪಟ್ಟಿದೆ ಎನ್ನಲಾಗಿದೆ.
ಈ ಸಂಬಂಧ ಇಲ್ಲಿನ ನಿವಾಸಿಗಳನ್ನು ಪತ್ರಿಕೆ ಮಾತನಾಡಿಸಿದಾಗ, ಮೊದಲಿದ್ದ ಡಾಂಬರು ರಸ್ತೆ ಚೆನ್ನಾಗಿತ್ತು. ಸಿಮೆಂಟ್ ರಸ್ತೆಯಾದ ಮೇಲೆ ರಸ್ತೆ ದೂಳಿನಿಂದ ಕೂಡಿದ್ದು, ತೊಂದರೆ ಅನುಭವಿಸುವಂತಾಗಿದೆ. ಟೆಂಡರ್ ನಿಬಂಧನೆ ಪ್ರಕಾರ ರಸ್ತೆ ನಿರ್ವಹಣೆಯನ್ನು ೫ ವರ್ಷಗಳವರೆಗೆ ಗುತ್ತಿಗೆದಾರರು ನೋಡಿಕೊಳ್ಳಬೇಕಾಗಿದೆ. ಆದರೆ ಇಲ್ಲಿನ ತಾಂತ್ರಿಕ ವಿಭಾಗದವರು ಟೆಂಡರ್‌ದಾರರ ಜೊತೆ ಶಾಮೀಲಾಗಿ ಕಿತ್ತು ಹೋಗಿರುವ ರಸ್ತೆಯನ್ನು ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ದೂರಿದರು.
” ಸಾರ್ವಜನಿಕರ ಹಿತದೃಷ್ಟಿಯಿಂದ ಶಾಸಕರು ತಂದಿರುವ ಮೂರು ಕೋಟಿ ರೂ. ದುರುಪಯೋಗವಾಗದಂತೆ ನೋಡಿಕೊಳ್ಳಬೇಕಾಗಿದೆ. ನಗರಸಭೆ ಆಡಳಿತಾಧಿಕಾರಿಯಾಗಿರುವ ಚಾ.ನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ರವರು ಈ ರಸ್ತೆಗಳನ್ನು ಪರಿವೀಕ್ಷಿಸಿ ಕ್ರಮ ಕೈಗೊಳ್ಳಬೇಕು.”
ಸಾರ್ವಜನಿಕರು
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…