ಓದುಗರ ಪತ್ರ
ವೈಯಕ್ತಿಕ, ಜೀವ ವಿಮಾ ಪಾಲಿಸಿ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಪ್ರಸ್ತುತ ಇರುವ ಜಿಎಸ್‌ಟಿ(ಸರಕು ಮತ್ತು ಸೇವಾ ತೆರಿಗೆ) ಗೆ, ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿಮೆ ಸಂಬಂಧಿಸಿದ ಸಮಿತಿಯ ಸಂಚಾಲಕರಾದ ಸಾಮ್ರಾಟ ಚೌಧರಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಇದೊಂದು ಸ್ವಾಗತಾರ್ಹ ಬೆಳವಣಿಗೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಮುಂದಿನ ತಿಂಗಳು ಸೆಪ್ಟೆಂಬರ್ ೯ ರಂದು, ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆದರೆ, ಈಗ ಪಾಲಿಸಿಯನ್ನು ತೆಗೆದುಕೊಳ್ಳುವ ಗ್ರಾಹಕರು ಹಾಲಿ ಇರುವ ಜಿಎಸ್‌ಟಿಯನ್ನು ಪಾವತಿಸಲೇ ಬೇಕು, ಕೆಲವು ಗ್ರಾಹಕರು ಸೆಪ್ಟೆಂಬರ್ ೯ ರ ವರೆಗೆ ಕಾದು ನೋಡಿ ನಂತರ ಪಾಲಿಸಿ ತೆಗೆದುಕೊಳ್ಳಲು ಬಯಸುತ್ತಾರೆ. ಇದರಿಂದಾಗಿ ವಿಮಾ ಕಂಪೆನಿಗಳ ಹೊಸ ವ್ಯವಹಾರವು ಕುಂಠಿತವಾಗುವ ಸಾಧ್ಯತೆ ಇರುತ್ತದೆ, ಆದ್ದರಿಂದ ಆಗಸ್ಟ್ ೨೦(೨೦೨೫) ರಿಂದ ತೆಗೆದುಕೊಳ್ಳುವ ಪಾಲಿಸಿಗಳಿಗೆ ಜಿಎಸ್‌ಟಿ ತೆರಿಗೆ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳ ಬೇಕಾಗುತ್ತದೆ, ಜಿಎಸ್‌ಟಿ ಗೊಂದಲದ ಬಗ್ಗೆ ಕೇಂದ್ರ ಸರ್ಕಾರ ಶೀಘ್ರವಾಗಿ ಕ್ರಮ ಕೈಗೊಳ್ಳಲಿ.
– ಬೂಕನಕೆರೆ ವಿಜೇಂದ್ರ , ಕುವೆಂಪು ನಗರ, ಮೈಸೂರು
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…