Categories: Andolana originals

ಎಚ್.ಡಿ.ಕೋಟೆ: ಆಡಳಿತ ಭವನದಲ್ಲಿ ಕಸದ ರಾಶಿ

ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದ ಗಬ್ಬುನಾರುತ್ತಿರುವ ಶೌಚಾಲಯ

ಮಂಜು ಕೋಟಿ

ಎಚ್‌.ಡಿ.ಕೋಟೆ: ತಾಲ್ಲೂಕು ಆಡಳಿತ ಭವನದ ಒಂದನೇ ಮಹಡಿಯಲ್ಲಿರುವ ವಿವಿಧ ಇಲಾಖೆಗಳ 12 ಶಾಖೆಗಳ ಕಚೇರಿ ಸಮೀಪದಲ್ಲಿ ಕಸದ ರಾಶಿ ಮತ್ತು ಶೌಚಾಲಯಗಳು ಒಂದು ವಾರದಿಂದ ಗಬ್ಬುನಾರುತ್ತಿದ್ದು, ಅಧಿಕಾರಿಗಳು ಮತ್ತು ನೌಕರರು ಕಂಡು ಕಾಣದಂತೆ ಇದ್ದಾರೆ.

ಪಟ್ಟಣದ ಆಡಳಿತ ಭವನದಲ್ಲಿರುವ ಸರ್ವೆ, ಆಹಾರ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಭೂ ಮಾಪನ ಶಾಖೆಯ ಅಧೀಕ್ಷಕರು, ತಾಂತ್ರಿಕ ವಿಭಾಗ, ಪೋಡಿ ಶಾಖೆ, ಅಭಿಲೇಖಾಲಯ ಮೋಜಣಿ ವಿಭಾಗದ ಬಳಿ ಇರುವ ಪುರುಷರ ಮತ್ತು ಮಹಿಳೆಯರ ಶೌಚಾಲಯದ ಪಕ್ಕದ ಖಾಲಿ ಜಾಗದಲ್ಲಿ ಕಸದ ರಾಶಿಯನ್ನು ಗುಡ್ಡೆ ಹಾಕಿದ್ದಾರೆ. ಅಲ್ಲದೆ ಈ ಶೌಚಾಲಯಗಳಲ್ಲಿ ನೀರು ಇಲ್ಲದೆ ದುರ್ವಾಸನೆ ಬೀರುತ್ತಿದೆ. ಭವನದ ಈ ಮಹಡಿಯಲ್ಲಿ ಕೆಲಸ ನಿರ್ವಹಿಸುವ ಕಚೇರಿಗಳು ಮತ್ತು ಶಾಖೆಗಳಿಗೆ ಪ್ರತಿನಿತ್ಯ ರೈತರು, ಸಾರ್ವಜನಿಕರು ಭೇಟಿ ನೀಡುತ್ತಾರೆ. ಈ ವೇಳೆ ಕಸದ ರಾಶಿ ಹಾಗೂ ಶೌಚಾಲಯದ ಅಶುಚಿತ್ವ ನೋಡಿ ಮುಜುಗರ ಪಡುವಂತಾಗಿದೆ. ಹೀಗಿದ್ದರೂ ಅಧಿಕಾರಿಗಳು ಮತ್ತು ನೌಕರರು ಇತ್ತ ಗಮನಹರಿಸಿ ಸ್ವಚ್ಛತಾ ಕಾರ್ಯ ಮಾಡಿಸಲು ಮುಂದಾಗಿಲ್ಲ. ಇದರಿಂದ ಸಾರ್ವಜನಿಕರು, ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿ, ಸಿಬ್ಬಂದಿ ವರ್ಗದವರು ಈ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಂಡಿಲ್ಲ. ಆದ್ದರಿಂದ ಶಾಸಕರು ಇತ್ತ ಗಮನಹರಿಸಿ ಆಡಳಿತ ಭವನದ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿ, ನೌಕರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

“ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಇಲಾಖೆಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿಬೇಕು. ಇದನ್ನು ನಿರ್ಲಕ್ಷಿಸುವವರಿಗೆ ನೋಟಿಸ್‌ ಜಾರಿ ಮಾಡಿ ಕ್ರಮ ಕೈಗೊಳ್ಳುತ್ತೇನೆ”

– ಶ್ರೀನಿವಾಸ್‌, ತಹಸಿಲ್ದಾ‌ರ್‌

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

7 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

8 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

8 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

8 hours ago