ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ ಹರ್ಷಗೊಂಡಿರುವ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.
ತಲ್ಲೂಕಿನಲ್ಲಿ ಕಬಿನಿ, ತಾರಕ, ನುಗು, ಹೆಬ್ಬಾಳ ಈ ನಾಲ್ಕು ಜಲಾಶಯಗಳಿದ್ದರೂ ನೀರಾವರಿ ಪ್ರದೇಶಕ್ಕಿಂತ ಮಳೆ ಆಶ್ರಿತ ಪ್ರದೇಶವೇ ಹೆಚ್ಚಾಗಿರುವುದರಿಂದ ರೈತರು ಮಳೆಯನ್ನೇ ಅವಲಂಬಿಸಿದ್ದಾರೆ.
ಈ ಬಾರಿ ಬಿಸಿಲಿನ ತಾಪಮಾನ ಅತಿಯಾಗಿ ಮತ್ತು ಒಂದು ತಿಂಗಳು ತಡವಾಗಿ ಮಳೆ ಪ್ರಾರಂಭ ಗೊಂಡರೂ ಒಂದು ವಾರದಿಂದ ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ೪-೫ ಬಾರಿ ಉತ್ತಮ ಮಳೆ ಯಾಗಿದ್ದು, ರೈತರ ಮುಖದಲ್ಲಿ ಮತ್ತು ಕುಟುಂಬದವರಲ್ಲಿ ಮಂದಹಾಸ ಮೂಡಿದೆ.
ಬಿಸಿಲು, ಮಳೆ ಲೆಕ್ಕಿಸದೆ ರೈತರು ಮತ್ತು ಅವರ ಕುಟುಂಬದವರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಬಿತ್ತನೆ ಕಾರ್ಯ ಪ್ರಾರಂಭ ಮಾಡಿದ್ದಾರೆ. ಕಳೆದ ಸಾಲಿನಂತೆ ಈ ಸಾಲಿನಲ್ಲೂ ಅತಿ ಹೆಚ್ಚು ರೈತರು ಮುಸುಕಿನ ಜೋಳದ ಬೆಳೆಗೆ ಆಸಕ್ತಿ ತೋರಿದ್ದು, ಜಮೀನುಗಳಲ್ಲಿ ಬಿತ್ತನೆ ಕಾರ್ಯ ನಡೆಸುತ್ತಿದ್ದಾರೆ. ಹಿಂದೆ ರೈತರ ಆರ್ಥಿಕ ಬೆಳೆಯಾಗಿದ್ದ ಹತ್ತಿ ಬೆಳೆಯನ್ನು ಬಹುಪಾಲು ರೈತರು ಅನೇಕ ಕಾರಣಗಳಿಂದ ದೂರ ಮಾಡಿದ್ದು, ಪರ್ಯಾಯ ಬೆಳೆಗಳಾದ ಮುಸುಕಿನ ಜೋಳ, ಹೊಗೆಸೊಪ್ಪು, ಅಲಸಂದೆ, ರಾಗಿ, ಇನ್ನಿತರ ಬೆಳೆಗಳ ಬಿತ್ತನೆ ಪ್ರಾರಂಭಿಸಿದ್ದಾರೆ. ೬೦,೦೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆಸಬೇಕಾಗಿದ್ದು, ಈಗಾಗಲೇ ೧೦,೦೦೦ ಹೆಕ್ಟೇರ್ ಪ್ರದೇಶಗಳಲ್ಲಿ ರೈತರು ಬಿತ್ತನೆ ಕಾರ್ಯ ನಡೆಸುತ್ತಿದ್ದಾರೆ. ಇದೇ ರೀತಿ ಮಳೆ ಮುಂದುವರಿದರೆ ಇನ್ನೊಂದು ವಾರದೊಳಗೆ ತಾಲ್ಲೂಕಿನಲ್ಲಿ ಬಹುತೇಕ ಕಡೆ ಬಿತ್ತನೆ ಕಾರ್ಯ ಪೂರ್ಣಗೊಳ್ಳಲಿದೆ.
ಇಲ್ಲಿಯವರೆಗೆ ೧೧೦ ಮಿ. ಮೀ. ವಾಡಿಕೆ ಮಳೆಯಾಗಬೇಕಿದ್ದ ಈ ಪ್ರದೇಶಗಳಲ್ಲಿ ೬೫ ಮಿ. ಮೀ. ಮಳೆ ಮಾತ್ರ ಆಗಿದೆ. ಬಿ. ಮಟಕೆರೆ ಮತ್ತು ಹಂಪಾಪುರ ಭಾಗದಲ್ಲಿ ಉತ್ತಮವಾಗಿ ಮಳೆಯಾಗಿದೆ. ಉಳಿದ ಹೋಬಳಿಗಳಲ್ಲಿ ಬಿತ್ತನೆಗೆ ಅನುಕೂಲವಾಗುವ ರೀತಿಯಲ್ಲಿ ಮಳೆಯಾಗಿದೆ. ಕಳೆದ ಬಾರಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳಿಗೆ ರೋಗ ಕೀಟಬಾಧೆ ತಗುಲಿ ದ್ದರಿಂದ ಮತ್ತು ಬೆಳೆದ ಬೆಳೆಗೂ ಉತ್ತಮ ಬೆಲೆ ಸಿಗದೆ ಕಂಗಾಲಾಗಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು.
ಈ ಬಾರಿಯಾದರೂ ಬೆಳೆ ತಮ್ಮ ಕೈಹಿಡಿಯಲಿದೆ ಎಂಬ ಆಶಾಭಾವನೆಯಲ್ಲಿ ರೈತರ ಮತ್ತು ರೈತ ಕುಟುಂಬದವರು ಕೃಷಿ ಚಟುವಟಿಕೆ ಗಳಲ್ಲಿ ಸಡಗರದಿಂದ ತೊಡಗಿಕೊಂಡಿದ್ದಾರೆ.
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…