Andolana originals

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ

ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೪ ಎಚ್೧ಎನ್೧ ಪ್ರಕರಣಗಳು ದೃಢಪಟ್ಟಿವೆ. ಇನ್ಫ್ಯುಯೆಂಜಾ (ಎಚ್ ೧ಎನ್೧) ವೈರಸ್ ಹರಡುವಿಕೆ ತಡೆಗಟ್ಟಲು ಆರೋಗ್ಯ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಕೂಡ ಎಚ್ಚರಿಕೆ ವಹಿಸ ಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

ರಾಜ್ಯ ಆರೋಗ್ಯ ಸಚಿವರು ಇತ್ತೀಚೆಗೆ ನಡೆಸಿದ ವಿಡಿಯೊ ಕಾನ್ಛರೆನ್ಸ್‌ನಲ್ಲಿ ನೀಡಿದ ನಿರ್ದೇಶನದಂತೆ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ರೋಗ ನಿಯಂತ್ರಣ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಚುರುಕುಗೊಳಿಸಲಾಗಿದೆ. ಸಾಮಾನ್ಯವಾಗಿ ಜನವರಿಯಿಂದ ಮಾರ್ಚ್ ಹಾಗೂ ಜುಲೈನಿಂದ ಸೆಪ್ಟೆಂಬರ್‌ವರೆಗೆ ತೀವ್ರ ಜ್ವರ, ಕೆಮ್ಮು, ಶೀತ, ಹಳದಿ ಕಫ, ಗಂಟಲು ಕೆರೆತ, ಅತಿಯಾದ ಮೈ-ಕೈ ನೋವು, ಉಸಿರಾಟದ ತೊಂದರೆ ಸೇರಿದಂತೆ ಕೋವಿಡ್-೧೯ ಮಾದರಿಯ ಲಕ್ಷಣಗಳು ಕಂಡುಬರುತ್ತವೆ.

ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಈವರೆಗೆ ಸುಮಾರು ೩,೭೬೨ ಶೀತ, ಕೆಮ್ಮು ಮತ್ತು ಜ್ವರದಂತಹ ಪ್ರಕರಣಗಳು ದಾಖಲಾಗಿವೆ. ತೀವ್ರ ಉಸಿರಾಟದ ಸಮಸ್ಯೆಯ ೧೧ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ೪ ಮಂದಿಗೆ ಎಚ್೧ಎನ್೧ ಇನ್- ಯೆಂಜಾ ಸೋಂಕು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಜಿಲ್ಲಾಸ್ಪತ್ರೆ ಹಾಗೂ ಎಲ್ಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿಯೂ ಶಂಕಿತ ರೋಗಿಗಳಿಗಾಗಿ ಪ್ರತ್ಯೇಕ ವೈರಲ್ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್, ವೆಂಟಿಲೇಟರ್ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಫೀವರ್ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ.

ಪ್ಯಾರಸಿಟಮಲ್, ಸಿಟ್ರಿಜಿನ್, ಆಂಟಿಪೈರೆಟಿಕ್ಸ್, ಐವಿ ಫ್ಲೂಯಿಡ್ಸ್ ಸೇರಿದಂತೆ ಅಗತ್ಯ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಲಾಗಿದೆ. ಗಂಭೀರ ಪ್ರಕರಣಗಳ ಚಿಕಿತ್ಸೆಗೆ ಬಳಸುವ ಒಸೆಲ್ಟಾಮಿವಿರ್ ಆಂಟಿ ವೈರಲ್ ಔಷಧಿಯನ್ನೂ ಎಲ್ಲ ಆರೋಗ್ಯ ಕೇಂದ್ರಗಳಿಗೆ ಪೂರೈಸಲಾಗಿದೆ.

ವೆಂಟಿಲೇಟರ್ ಅಥವಾ ತೀವ್ರ ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಶಿಫಾರಸು ಮಾಡಲು ಸೂಚಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಮಕ್ಕಳಲ್ಲಿ ಎಚ್೧ಎನ್೧ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ರೋಗಲಕ್ಷಣಗಳು ಕಂಡುಬಂದವರು ಜನದಟ್ಟಣೆ ಇರುವ ಪ್ರದೇಶಗಳಿಗೆ ತೆರಳದೆ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕು. ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ಸಾಕಷ್ಟು ನೀರು, ಎಳನೀರು, ಗಂಜಿ ಸೇರಿದಂತೆ ದ್ರವಾ ಹಾರ ಸೇವಿಸಬೇಕು. ಆಗಾಗ್ಗೆ ಸಾಬೂನಿನಿಂದ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಬೇಕು.

” ಕೊಡಗು ಜಿಲ್ಲೆಯಲ್ಲಿ ೩,೭೬೨ ಮಂದಿಗೆ ಶೀತ, ಕೆಮ್ಮು ಮತ್ತು ಜ್ವರದ ಲಕ್ಷಣಗಳು ಕಂಡುಬಂದಿದ್ದು, ಈ ಪೈಕಿ ೪ ಮಂದಿಗೆ ಎಚ್೧ಎನ್೧ ಇನ್‌ಫ್ಲ್ಯು ಯೆಂಜಾ ಸೋಂಕು ದೃಢಪಟ್ಟಿದೆ. ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕಪಡದೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಪರೀಕ್ಷೆ ಮತ್ತು ಸೂಕ್ತ ಚಿಕಿತ್ಸೆ ಪಡೆಯಬೇಕು. ಇನ್‌ಫ್ಲ್ಯು ಯೆಂಜಾ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ.”

-ಡಾ.ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಏನು ಮಾಡಬೇಕು?: 

* ಸೀನುವಾಗ ಹಾಗೂ ಕೆಮ್ಮುವಾಗ ಮೂಗು-ಬಾಯಿಯನ್ನು ಕರವಸ್ತ್ರ ಅಥವಾ ಟಿಶ್ಯೂಯಿಂದ ಮುಚ್ಚಿಕೊಳ್ಳಬೇಕು

* ಸಾಬೂನು ಮತ್ತು ನೀರಿನಿಂದ ಕೈಗಳನ್ನು ನಿಯಮಿತವಾಗಿ ತೊಳೆಯಬೇಕು

* ಸಾಕಷ್ಟು ಪ್ರಮಾಣದಲ್ಲಿ ನೀರು ಹಾಗೂ ದ್ರವಾಹಾರ ಸೇವಿಸಬೇಕು

* ರೋಗಲಕ್ಷಣಗಳಿರುವವರು ಇತರರಿಂದ ಪ್ರತ್ಯೇಕವಾಗಿರಬೇಕು

ಏನು ಮಾಡಬಾರದು?: 

* ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇಪದೇ ಕೈಗಳಿಂದ ಮುಟ್ಟಬಾರದು

* ವೈದ್ಯರ ಸಲಹೆಯಿಲ್ಲದೆ ಸ್ವಯಂ ಔಷಧೋಪಚಾರ ಮಾಡಿಕೊಳ್ಳಬಾರದು.

* ರೋಗಲಕ್ಷಣಗಳಿದ್ದಾಗ ಜನಸಂದಣಿ ಪ್ರದೇಶಗಳಿಗೆ ತೆರಳಬಾರದು

* ಕೈಕುಲುಕುವುದು ಸೇರಿದಂತೆ ನೇರ ಸಂಪರ್ಕವನ್ನು ಸಾಧ್ಯವಾದಷ್ಟು ತಪ್ಪಿಸಬೇಕು

*ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಹಿರಿಯ ನಾಗರಿಕರು ಹಾಗೂ ದೀರ್ಘಕಾಲಿಕ ಕಾಯಿಲೆ ಹೊಂದಿರುವವರು ರೋಗಲಕ್ಷಣ ಇರುವವರಿಂದ ದೂರವಿರಬೇಕು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

2 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

2 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

3 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

3 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

3 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

3 hours ago