Andolana originals

ದಸರಾ ವಸ್ತು ಪ್ರದರ್ಶನದಲ್ಲಿ ಆರೋಗ್ಯ ಸೇವೆ ಅನಾವರಣ!

ಕೆ.ಪಿ.ಮದನ್

ಗಮನ ಸೆಳೆಯುವ ಆರೋಗ್ಯ ಇಲಾಖೆ ಮಳಿಗೆ; ಅಂಗಾಂಗ ಮಾದರಿಗಳ ಪ್ರದರ್ಶನ  

ಮೈಸೂರು: ಸಾರ್ವಜನಿಕ ಆರೋಗ್ಯ ಸೇವೆಗಳು, ತಾಯಿ ಮತ್ತು ಶಿಶುಗಳ ಆರೋಗ್ಯ ರಕ್ಷಣೆ ಮತ್ತು ಜನ ಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಬೇಕೆ? ಹಾಗಿದ್ದಲ್ಲಿ ಮೈಸೂರು ದಸರಾ ವಸ್ತುಪ್ರದರ್ಶನದಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಳಿಗೆಗೆ ಭೇಟಿ ನೀಡಿ…

ಜನರಿಗೆ ಅಗತ್ಯ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಟ ದಿ.ಪುನೀತ್ ರಾಜ್‌ಕುಮಾರ್ ನೆನಪಿನಾರ್ಥ ಜಾರಿಗೆ ತರಲಾಗಿರುವ ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ದೊರೆಯುವ ಸೌಲಭ್ಯಗಳ ಕುರಿತ ಮಾಹಿತಿ ಇಲ್ಲಿ ದೊರೆಯಲಿದೆ.

ಪುನೀತ್ ರಾಜ್‌ಕುಮಾರ್ ಹೃದಯ ಹಿಡಿದಿರುವ ಬೃಹತ್ ಕಟೌಟ್ ಮಳಿಗೆಗೆ ಜನರನ್ನು ಸ್ವಾಗತಿಸುತ್ತದೆ. ಒಳಗೆ ಹೆಜ್ಜೆ ಇಟ್ಟರೆ ಮಗುವಿಗೆ ಎದೆ ಹಾಲು ಉಣಿಸುತ್ತಿರುವ ತಾಯಿಯ ಪ್ರತಿಕೃತಿ, ದೃಷ್ಟಿಯ ಉಡುಗೊರೆ ಬೆಳಕಿನ ಪರಂಪರೆ ವಾಕ್ಯದಡಿ ನೇತ್ರದಾನದ ಮಹತ್ವ ಸಾರುವ ಕಣ್ಣು, ಮೆದುಳು ಆರೋಗ್ಯ ಉಪಕ್ರಮದ ಮೆದುಳಿನ ಪ್ರತಿಕೃತಿ, ಗೃಹ ಯೋಜನೆ, ಹೆಣ್ಣು ಭ್ರೂಣಹತ್ಯೆ ಹತ್ಯೆ ನಿಲ್ಲಿಸಿ, ಹೆಣ್ಣು ಮಕ್ಕಳನ್ನು ಉಳಿಸಿ ಎಂದು ಗರ್ಭಿಣಿಯೊಬ್ಬಳು ಬೇಡುತ್ತಿರುವ ದೃಶ್ಯ ಮನ ಮುಟ್ಟುವಂತಿವೆ. ಜೊತೆಗೆ ಗೃಹ ಆರೋಗ್ಯ ಯೋಜನೆ, ಆಂಬ್ಯುಲೆನ್ಸ್ ಸೇವೆ, ತಂಬಾಕು ಸೇವನೆಯಿಂದ ಮಾನವನ ಆರೋಗ್ಯದ ಮೇಲಾಗುವ ದುಷ್ಪರಿಣಾ ಮಗಳ ಕುರಿತ ಪ್ರತಿಕೃತಿಗಳು ಎಲ್ಲರ ಗಮನ ಸೆಳೆಯುತ್ತಿವೆ.

ಅಂಗಾಂಗ ಮಾದರಿಗಳ ಪ್ರದರ್ಶನ: ಗರ್ಭಧಾರಣೆ ಸಂದರ್ಭದ ಪ್ರಕ್ರಿಯೆಗಳು, ಗರ್ಭಧಾರಣೆ, ಶಿಶುವಿನ ಬೆಳವಣಿಗೆ ಹಂತದ ಮಾದರಿಗಳು, ಮಾನವನ ಮೆದುಳು, ಹೃದಯ, ಮೂತ್ರಪಿಂಡ, ಶ್ವಾಸಕೋಶಮಾದರಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಅವುಗಳ ಜೊತೆಯಲ್ಲಿ ಆಯಾ ಅಂಗಾಂಗಗಳ ಬಗ್ಗೆ ಮಾಹಿತಿಯನ್ನೂ ನೀಡಲಾಗಿದೆ.

ಇದನ್ನು ಹೊರತುಪಡಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಳಿಗೆಯಲ್ಲಿ ೧೦ ರಿಂದ ೧೯ ವರ್ಷ ವಯಸ್ಸಿನ ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಾರಿಗೆ ತರಲಾಗಿರುವ ಸ್ನೇಹ ಕ್ಲಿನಿಕ್, ೧೮ ವರ್ಷ ಒಳಗಿನ ಹೆಣ್ಣು ಮಕ್ಕಳಿಗೆ ಬಾಲ್ಯವಿವಾಹ ಮಾಡದಂತೆ ಶಿಕ್ಷಣ ಮೊದಲು-ಮದುವೆ ನಂತರ ಎನ್ನುವ ಫಲಕ, ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ, ಸಾಪ್ತಾಹಿಕ ಕಬ್ಬಿಣ ಮತ್ತು ಪೋಲಿಕ್ ಆಮ್ಲ ಪೂರಕ (ಡಬ್ಲ್ಯುಐಎಫ್ಎಸ್), ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮ, ತಾಯಿ ಮತ್ತು ಮಗುವಿನ ಆರೈಕೆ,ತಾಯಿ ಮತ್ತು ಮಗುವಿನ ಸುರಕ್ಷತೆಗಾಗಿ ಟೋಲ್ ಫ್ರೀ ಕಾಲ್, ಕಾಂಗರೂ ಮಾದರಿ ಆರೈಕೆ, ಮಕ್ಕಳ ಆರೈಕೆ, ಆರೋಗ್ಯದ ಮರುಸ್ಥಾಪನೆಗಾಗಿ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಗಳು, ಸಾರ್ವತ್ರಿಕ ಲಸಿಕಾ ಅಭಿಯಾನ, ಗರ್ಭ ನಿರೋಧಕ ಸಾಧನಗಳು, ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ, ಮಾನಸಿಕ ಆರೋಗ್ಯ ಕಾರ್ಯಕ್ರಮ, ಶ್ರವಣ ಸಂಜೀವಿನಿ, ಕ್ಷಯ ಮುಕ್ತ ಕರ್ನಾಟಕ: ಕ್ಷಯರೋಗ- ಮುಕ್ತ ಗ್ರಾಮಗಳು,ಆಯುಷ್ಮಾನ್ ಆರೋಗ್ಯ ಕೇಂದ್ರ, ಋತುಚಕ್ರ ಕುರಿತಾದ ‘ನನ್ನ ಮೈತ್ರಿ’ ಸೇರಿದಂತೆ ಆರೋಗ್ಯ ಇಲಾಖೆಯಿಂದ ಪರಿಚಯಿಸ ಲಾಗಿರುವ ವಿನೂತನ ಕಾರ್ಯ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ವಸ್ತು ಪ್ರದರ್ಶನ ಅವಧಿ ಮುಗಿ ಯುವವರೆಗೂ ಇಲ್ಲಿ ದೊರೆಯಲಿದೆ.

” ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಸೌಲಭ್ಯಗಳನ್ನೂ ಜನರಿಗೆ ತಲುಪಿಸುವ ಉದ್ದೇಶದಿಂದ ಈ ಮಳಿಗೆ ತೆರೆಯಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಬಂದು ವೀಕ್ಷಿಸಿ,ಇದರ ಬಗ್ಗೆಅರಿವು ಮೂಡಿಸಿಕೊಂಡು, ಸೌಲಭ್ಯಗಳ ಲಾಭ ಪಡೆಯಲು ಮುಂದಾಗಿದ್ದಾರೆ.”

-ಡಾ. ಕುಮಾರಸ್ವಾಮಿ, ಡಿಎಚ್‌ಒ

” ವಸ್ತು ಪ್ರದರ್ಶನ ಆವರಣದಲ್ಲಿ ತೆರೆಯಲಾಗಿರುವ ಆರೋಗ್ಯ ಇಲಾಖೆಮಳಿಗೆ ಅತ್ಯಂತ ಉಪಯುಕ್ತವಾಗಿದೆ. ಎಲ್ಲವನ್ನೂ ತಾಳ್ಮೆಯಿಂದ ವೀಕ್ಷಿಸಿದರೆ ಆರೋಗ್ಯ ಸೇವೆಯ ಬಗ್ಗೆ ಹಲವು ಮಾಹಿತಿಗಳು ಲಭ್ಯವಾಗುತ್ತವೆ. ಪ್ರಸ್ತುತ ಸನ್ನಿವೇಶದಲ್ಲಿ ಆರೋಗ್ಯದ ಕುರಿತ ಕಾಳಜಿ ಎಲ್ಲರಿಗೂ ಅವಶ್ಯವಿದೆ. ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದವರು ಈ ಮಳಿಗೆಗೂ ಭೇಟಿ ನೀಡಿದರೆ ಅಗತ್ಯ ಮಾಹಿತಿ ತಿಳಿದುಕೊಳ್ಳಬಹುದು.”

-ಎಚ್.ಆರ್.ವಾಣಿಶ್ರೀ, ಪ್ರೌಢಶಾಲಾ ಶಿಕ್ಷಕಿ

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago