ಕಾರು, ಬೈಕ್‌ಗಳಲ್ಲಿ ಬಂದು ಕಸ ಎಸೆಯುವ ಜನರು; ರೋಗ ಹರಡುವ ಭೀತಿಯಲ್ಲಿ ನಿವಾಸಿಗಳು
ಮೈಸೂರು: ನಾಡಹಬ್ಬ ದಸರಾ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿ ವರ್ಗ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದರೆ, ನಗರದ ವಿವಿಧೆಡೆ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ ಸಾಂಕ್ರಾಮಿಕ ರೋಗ ಹರಡುತ್ತಿದೆ.
ಇದಕ್ಕೆ ತಾಜಾ ಉದಾಹರಣೆ ಎಂಬಂತೆ ನಗರಪಾಲಿಕೆ ವಾರ್ಡ್ ಸಂಖ್ಯೆ ೫೧ರ ವ್ಯಾಪ್ತಿಯಲ್ಲಿನ ರಾಮಾನುಜ ರಸ್ತೆಯ ೧೭ನೇ ಅಡ್ಡರಸ್ತೆಯಲ್ಲಿ ನಿತ್ಯ ಕಸ ವಿಲೇವಾರಿ ಮಾಡದಿರುವುದರಿಂದ ಇಲ್ಲಿನ ರಸ್ತೆ ಬದಿಯಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಬಿಸಿಲು- ಮಳೆ ಯಿಂದ ಕೊಳೆತು ಕಸ ದುರ್ನಾತ ಬೀರುತ್ತಿದೆ. ಸೊಳ್ಳೆ, ನೊಣಗಳ ಆವಾಸ ಸ್ಥಾನವಾಗಿ ಮಾರ್ಪಾಡಾಗಿರುವ ಈ ಕಸದ ರಾಶಿಯಿಂದ ಇಲ್ಲಿನ ಸ್ಥಳೀಯ ನಿವಾಸಿಗಳು ದುರ್ನಾ ತವನ್ನು ಸಹಿಸಲಾರದೆ ಮೂಗು ಮುಚ್ಚಿಕೊಂಡು ಓಡಾಡುತ್ತಾ ಅಧಿಕಾರಿ ವರ್ಗಕ್ಕೆ ಹಿಡಿಶಾಪ ಹಾಕುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ಎದುರಿಸುತ್ತಿದ್ದಾರೆ. ಸಮೀಪದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಕಾಯಿಲೆ ವಾಸಿ ಮಾಡಿಕೊಳ್ಳಲು ರೋಗಿಗಳು ಇಲ್ಲಿಗೆ ಬರಲು ಹಿಂದೆ ಮುಂದೆ ನೋಡುವಂತಾಗಿದೆ.
ಎಚ್ಚರಿಕೆ ಫಲಕಕ್ಕೂ ಡೋಂಟ್ ಕೇರ್: ಪೌರಕಾರ್ಮಿಕರು ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿ, ಕಸ ಹಾಕದಂತೆ ಹಲವು ಬಾರಿ ಎಚ್ಚರಿಕೆ ಫಲಕ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆಯ ಒಂದು ಕಡೆ ಪ್ರವೇಶ ಮಾಡಿ ಕಸವನ್ನು ಎಸೆದು ಮತ್ತೊಂದು ಕಡೆಯಿಂದ ತೆರಳುತ್ತಾರೆ. ರಸ್ತೆಯ ಎರಡೂ ಬದಿಗಳಲ್ಲಿ ಕಸ ಎಸೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಪೌರಕಾರ್ಮಿಕರನ್ನೇ ಭದ್ರತಾ ಸಿಬ್ಬಂದಿಯಾಗಿ ನೇಮಿಸಬೇಕಿದೆ.
ರಾತ್ರಿ ವೇಳೆ ಕಸ ಎಸೆಯುವ ಜನರು: ರಾತ್ರಿ ವೇಳೆ ಕಾರು, ಬೈಕ್‌ಗಳಲ್ಲಿ ಬರುವ ಜನರು ವಾಹನ ಚಾಲನೆಯಲ್ಲಿಟ್ಟುಕೊಂಡು ಕಸವನ್ನು ಆರೋಗ್ಯ ಕೇಂದ್ರದ ಕಾಂಪೌಂಡ್ ಬಳಿಯೇ ಎಸೆದು ಹೋಗುತ್ತಾರೆ. ಇದರಿಂದ ಕಸ ಎಸೆಯುವವರನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಕಸದ ಸಮಸ್ಯೆ ಉಲ್ಬಣಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
” ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನಲ್ಲಿರುವ ಆರೋಗ್ಯ ಕೇಂದ್ರಕ್ಕೆ ಹೊಂದಿಕೊಂಡಂತೆ ರಸ್ತೆ ಬದಿಯಲ್ಲಿ ಸಾರ್ವಜನಿಕರು ಕಸ ಎಸೆದು ಹೋಗುತ್ತಿದ್ದಾರೆ. ಇದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಸ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು.”
-ಪ್ರೊ.ಪಂಡಿತಾರಾಧ್ಯ, ಸ್ಥಳೀಯರು
” ಸಾರ್ವಜನಿಕರಲ್ಲಿ ಮೊದಲು ಸ್ವಚ್ಛತೆಯ ಪ್ರಜ್ಞೆ ಮೂಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಕಸ-ಒಣ ಕಸ ವಿಂಗಡಿಸಿ ನೀಡುವ ಮೂಲಕ, ನಗರವನ್ನು ಸ್ವಚ್ಛವಾಗಿಡಲು ಕೈ ಜೋಡಿಸಬೇಕು. ಎಲ್ಲವನ್ನೂ ಪಾಲಿಕೆಯೇ ಮಾಡಬೇಕು ಎನ್ನಬಾರದು. ಸಾರ್ವಜನಿಕರು ಸಹಕಾರ ನೀಡಬೇಕು.”
-ಆನಂದ್, ಸ್ಥಳೀಯರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…