ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸುಬ್ರಹ್ಮಣ್ಯ ದೇವಾಲಯದ ಸಮೀಪ -ಟ್ ಪಾತ್‌ನಲ್ಲಿ ಕಸದ ರಾಶಿ ಬಿದ್ದಿದ್ದು, ಇದನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.
ಸಾರ್ವಜನಿಕರು ಇದೇ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ.
ಮಹಾನಗರ ಪಾಲಿಕೆಯವರು ಕೂಡಲೇ ಫುಟ್‌ಪಾತ್‌ನಲ್ಲಿರುವ ಕಸವನ್ನು ತೆರವುಗೊಳಿಸಬೇಕು ಹಾಗೂ ಇಲ್ಲಿ ಮೂತ್ರ ವಿಸರ್ಜಿಸುವವರಿಗೆ ದಂಡ ವಿಧಿಸುವ ಮೂಲಕ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಆಶಾ, ಮೈಸೂರು





