ಗಿರೀಶ್ ಹುಣಸೂರು
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹಲವು ಸಲಹೆ
ಮೈಸೂರು: ಬೇಸಿಗೆಯ ಈ ಋತುಮಾನದಲ್ಲಿ ಹೆಚ್ಚುತ್ತಿರುವ ತೀವ್ರ ತಾಪಮಾನ, ಬಿಸಿಗಾಳಿ ಬೀಸುವಿಕೆಯಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಮತ್ತು ಲೂ (ಹೀಟ್ ಸ್ಟ್ರೋಕ್) ಪರಿಣಾಮದಿಂದ ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿದೆ.
ಮಾರ್ಚ್-ಮೇ ತಿಂಗಳ ಅವಧಿಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಟ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆ ಇದೆ. ಮಾರ್ಚ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಸಿಗಾಳಿ ಬೀಸುವ ಸಂಭವನೀಯತೆ ಇಲ್ಲ. ಆದರೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಭಾಗಗಳಲ್ಲಿ ೩ರಿಂದ ೬ ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಲಕ್ಷಣಗಳೇನು?:
ಅತೀ ಹೆಚ್ಚು ತಾಪಮಾನದಿಂದ (ಹೀಟ್ ವೇವ್) ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತ (ಸನ್ ಸ್ಟೋಕ್)ದಂತಹ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಇದರಿಂದಾಗಿ ಶಾಖ ಸೆಳೆತ ಉಂಟಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ೩೯ ಡಿಗ್ರಿ ಸೆಂಟಿಗ್ರೇಡ್‌ಗಿಂತ ಕಡಿಮೆ ಜ್ವರದಿಂದ ಬಳಲುತ್ತಿರುವವರಲ್ಲಿ, ಎಡಿಮಾ (ಊತ) ಮತ್ತು ಮೂರ್ಛೆಯಂತಹ ಲಕ್ಷಣಗಳು ಕಂಡು ಬರುತ್ತವೆ. ಶಾಖದ ಬಳಲಿಕೆಯಿಂದ ಆಯಾಸ, ದೌರ್ಬಲ್ಯ, ತಲೆತಿರುಗುವಿಕೆ, ತಲೆನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು. ಶಾಖಾಘಾತಕ್ಕೆ ದೇಹದ ಉಷ್ಣತೆಯು ೪೦ ಡಿಗ್ರಿ ಸೆಂಟಿಗ್ರೇಡ್ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.
ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ
೧ ಅತೀ ಹೆಚ್ಚು ತಾಪಮಾನದಿಂದ ಬಳಲಿದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು.
೨ ಒದ್ದೆ ಬಟ್ಟೆಯಿಂದ ಮೈಒರೆಸುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು.
೩ ವ್ಯಕ್ತಿ ಪ್ರಜ್ಞೆ ತಪ್ಪದಿದ್ದರೆ ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಒಆರ್‌ಎಸ್, ನಿಂಬೆ ಪಾನಕ ನೀಡುವುದು.
೩ ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸುವುದು.
೪ ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.
೫ ಬಳಲಿಕೆಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿಸುವುದು.
೬ ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು.
ಬಿಸಿಲಿನಿಂದ ರಕ್ಷಣೆಗೆ ಸಲಹೆಗಳು:
* ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಟ ತಾಪಮಾನದ ಅವಧಿ (ಮಧ್ಯಾಹ್ನ ೧೨ ರಿಂದ ೩ಗಂಟೆ)ಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು.
* ಬಾಯಾರಿಕೆ ಇಲ್ಲದಿದ್ದರೂ ಕೂಡ ಸಾಕಷ್ಟು ನೀರು ಕುಡಿಯುವುದು.
* ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು.
* ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು.
* ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು.
* ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ಒಯ್ಯುವುದು.
* ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.
* ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.
* ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಬಿಡದಿರುವುದು.
* ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವುದು.
* ನಿಂಬೆ ಪಾನೀಯ, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಒಆರ್‌ಎಸ್ ಬಳಸುವುದು.
* ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣುಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ, ಸೊಪ್ಪು, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
* ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.
* ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು.
” ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮತ್ತು ಕಂದಾಯ (ವಿ.ನಿ)ಇಲಾಖೆಯಿಂದ ತಯಾರಿಸಿರುವ ಐಇಸಿ ಸಕ್ರಿಯಗೊಳಿಸುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು, ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯದಿಂದ ಕ್ರಿಯಾಯೋಜನೆ ಸಿದ್ಧಪಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಿಳಿಸಲಾಗಿದೆ.”
ಹೊನ್ನಾಂಬ ಎಸ್., ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ,
” ಸಾಮಾಜಿಕ ಭದ್ರತೆ – ಪಿಂಚಣಿಗಳ ಆಯುಕ್ತಾಲಯ, ಕಂದಾಯ ಇಲಾಖೆ ಕಿಟ್ ಕೊಂಡೊಯ್ಯಿರಿ ಬಿಸಿಲಿನ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದ ಅನಿವಾರ್ಯತೆಯಿದ್ದಲ್ಲಿ ಜೊತೆಯಲ್ಲಿ ನೀರಿನ ಬಾಟಲಿ, ಛತ್ರಿ, ಕ್ಯಾಪ್, ಟವಲ್, ಎಲೆಕ್ಟ್ರೋಲೈಟ್, ಗ್ಲೂಕೋಸ್, ಒಆರ್‌ಎಸ್ ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಕೊಂಡೊಯ್ಯಿರಿ.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…