Andolana originals

ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಹಲವು ಸಮಸ್ಯೆಗಳು

ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ

ಭೇರ್ಯ ಮಹೇಶ್
ಭೇರ್ಯ: ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವೇನೋ ಹೈಟೆಕ್ ಆಗಿದೆ. ಆದರೆ ಬೆಳಿಗ್ಗೆ, ಸಂಜೆ, ರಾತ್ರಿ ವೇಳೆಯಲ್ಲಿ ಕೆಲವು ಬಸ್‌ಗಳು ನಿಲ್ದಾಣದೊಳಗೆ ಬರು ತ್ತಿಲ್ಲ, ಹೋಟೆಲ್, ಅಂಗಡಿಗಳು ಮುಚ್ಚಿರು ವುದರಿಂದಾಗಿ ನಿಲ್ದಾಣ ಬಿಕೋ ಎನ್ನುತ್ತಿದೆ.

ಮೂರೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ ಶೌಚಾಲಯ, ವಿಶ್ರಾಂತಿ ಕೊಠಡಿ ಎಲ್ಲವನ್ನೂ ನಿರ್ಮಿಸಲಾಗಿದೆ. ಆದರೆ ಶುದ್ಧ ಕುಡಿಯುವ ನೀರಿನ ಸೌಲಭ್ಯವಿಲ್ಲವಾಗಿದೆ. ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ೨೫ ಬೈಕ್‌ಗಳು ಕಳ್ಳತನವಾಗಿವೆ. ಆದ್ದರಿಂದ ಸುರಕ್ಷಿತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಾಗಿದೆ.

ಹೊಸದಾಗಿ ನಿರ್ಮಿಸಿದ್ದರೂ ಈ ನಿಲ್ದಾಣ ಪ್ರಯಾಣಿಕರಿಗೆ ಸುರಕ್ಷಿತವಾಗಿಲ್ಲ, ಸಂಜೆ ನಂತರ ಒಬ್ಬರೇ ಓಡಾಡುವುದಕ್ಕೆ ಹಿಂಜರಿಯುವಂ ತಾಗಿದೆ. ಸ್ಥಳೀಯ ಪೊಲೀಸರು ಕೂಡ ಬರುತ್ತಿಲ್ಲ. ಸೂಕ್ತ ಭದ್ರತೆ ಇಲ್ಲದಿರುವುದರಿಂದ ಪ್ರಯಾ ಣಿಕರು ಸಂಜೆ ನಂತರ ಬಸ್ ನಿಲ್ದಾಣದೊಳಗೆ ಬರುವುದನ್ನೇ ನಿಲ್ಲಿಸಿದ್ದಾರೆ. ಆದ್ದರಿಂದ ನಿಲ್ದಾಣದಲ್ಲಿ ಪೊಲೀಸ್ ಇಲಾಖೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಕೆಲವು ಬಸ್ ಬರುತ್ತಿಲ್ಲ: ಇಲ್ಲಿ ಮುಖ್ಯವಾಗಿ ಕೆಲವು ಬಸ್‌ಗಳ ಚಾಲಕರು ಸಂಜೆಯಿಂದ ರಾತ್ರಿಯವರೆಗೆ ನಿಲ್ದಾಣ ದೊಳಗೆ ಬರುತ್ತಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಕೆಲವು ಬಾರಿ ಬಸ್ ನಿಲ್ಲಿಸದೇ ಹಾಗೆಯೇ ಹೊರಟು ಹೋಗುತ್ತಾರೆ. ಒಮ್ಮೊಮ್ಮೆ ರಸ್ತೆಯಲ್ಲಿ ಬಸ್ ನಿಲ್ಲಿಸುವುದರಿಂದ ಪ್ರಯಾಣಿಕರು ಬಸ್ ಹತ್ತಲು ಓಡುತ್ತಾರೆ. ಈ ವೇಳೆ ಏನಾದರೂ ಅಪಘಾತ ಸಂಭವಿಸಿದರೆ ಯಾರು ಹೊಣೆ? ಎಂಬುದು ಪ್ರಯಾಣಿಕರ ಪ್ರಶ್ನೆಯಾಗಿದೆ.

 

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ನಿಮ್ಹಾನ್ಸ್‌ ಘಟಕ ಸ್ಥಾಪನೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…

1 min ago

ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಪ್ರಹ್ಲಾದ್‌ ಜೋಶಿ ವಿರುದ್ಧ ಬಿ.ಕೆ.ಹರಿಪ್ರಸಾದ್‌ ಕಿಡಿ

ಬೆಂಗಳೂರು: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೀಡಿರುವ ಹೇಳಿಕೆ ಅಮಿತ್‌…

32 mins ago

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

1 hour ago

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…

2 hours ago

ಡಿ.ಕೆ.ಸಹೋದರರಿಗೆ ಮದುವೆ ಕರೆಯೋಲೆ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ನೀಡಿ…

2 hours ago

ಶುಚಿತ್ವ, ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡ ಜಯದೇವ :ಸಿ.ಎಂ ಪ್ರಶಂಸೆ

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…

2 hours ago