Andolana originals

ʼಚಾಮುಂಡಿ ಬೆಟ್ಟ ದೇಗುಲದ ಆಸ್ತಿ; ಇರಲಿ ಯಥಾಸ್ಥಿತಿʼ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿ ಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶ್ರೀ ಚಾಮುಂಡೇಶರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿಂಧುತ್ವ ಪ್ರಶ್ನಿಸಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ‌ ಅವರಿದ್ದ ಏಕ ಸದಸ್ಯ ಪೀಠ ಮೇಲಿನಂತೆ ಸೂಚನೆ ನೀಡಿತು. ಮಂಗಳವಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗ ಬೇಕಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದರು.

ಪ್ರಮೋದಾದೇವಿ ಪರ ವಾದ ಮಂಡಿಸಿದ ವಕೀಲರು, ಚಾಮುಂಡೇಶ್ವರಿ ಕ್ಷೇತ್ರ ಮೈಸೂರು ರಾಜಮನೆತನದ ಖಾಸಗಿ ಆಸ್ತಿ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಪ್ರಾಧಿಕಾರ ರಚನೆಯಿಂದ ದೇವಾಲಯದ ಆಸ್ತಿ, ವಜ್ರ ವೈಡೂರ್ಯ ಸರ್ಕಾರದ ಸುಪರ್ದಿಗೆ ಹೋಗಲಿದೆ.

• ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ಸಲ್ಲಿಸಿದ್ದ
ತಕರಾರು ಅರ್ಜಿ ವಿಚಾರಣೆ
• ದೇವಸ್ಥಾನಕ್ಕೆ ಸಂಬಂಧಿಸಿದ ಚರ-ಸ್ಥಿರ ಆಸ್ತಿಗಳಲ್ಲಿ ಸದ್ಯ ಯಾವುದೇ ಬದಲಾವಣೆ ಮಾಡಬಾರದೆಂದು ಸೂಚನೆ

 

ಕ್ಷೇತ್ರದ ಧಾರ್ಮಿಕ ವಿಧಿ-ವಿಧಾನಗಳು, ಸಂಪ್ರದಾಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಲಿದೆ ಎಂದರು. ಚರ ಮತ್ತು ಸ್ಥಿರ ಆಸ್ತಿ ಗಳಲ್ಲಿ ವೇಗವಾಗಿ ಬದಲಾವಣೆ ತರಲಾಗು ತಿದೆ. ಪ್ರಾಧಿಕಾರ ರಚನೆಗೆ ಮಧ್ಯಂತರ ತಡೆ ನೀಡುವುದರ ಜೊತೆಗೆ ದೇವಾಲಯದ ಸಂಪ್ರದಾಯಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಮತ್ತು ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಬದಲಾವಣೆ ಮಾಡಬಾರದು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಎನ್. ದೇವದಾಸ್ ವಾದಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾ ಧೀಶರು ವಿಚಾರಣೆಯನ್ನು 5.258 ಮುಂದೂಡಿದರು. ಅಲ್ಲಿವರೆಗೆ ದೇಗುಲದೆ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದ ಲಾವಣೆಗಳನ್ನು ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದರು.

 

andolana

Recent Posts

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

8 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

12 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

57 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

1 hour ago