Andolana originals

ಪಾರ್ಕಿಂಗ್ ತಾಣವಾದ ಹೈವೇ ಸರ್ವಿಸ್ ರಸ್ತೆ!

ಎಂ.ಆರ್.ಚಕ್ರಪಾಣಿ

ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ 

ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ ತಂಗುದಾಣವಾಗಿ (ಪಾರ್ಕಿಂಗ್) ಮಾರ್ಪಟ್ಟಿದ್ದು, ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ನಗರದ ಎಳನೀರು ಮಾರುಕಟ್ಟೆ, ತಾಲ್ಲೂಕು ಕಚೇರಿ ಮುಂಭಾಗ, ನ್ಯಾಯಾಲಯದ ಮುಂಭಾಗ, ಶಿವಪುರದಿಂದ ಗೆಜ್ಜಲಗೆರೆಯವರೆಗೆ ಬಹುತೇಕ ಕಡೆಗಳಲ್ಲಿ ಕಾರು, ಬೈಕು, ಲಾರಿ, ಜೆಸಿಬಿ ಸೇರಿದಂತೆ ವಿವಿಧ ವಾಹನಗಳನ್ನು ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಲಾಗುತ್ತಿದೆ.

ಇದು ಸರ್ವಿಸ್ ರಸ್ತೆಯೋ? ಅಥವಾ ವಾಹನಗಳನ್ನು ನಿಲ್ಲಿಸಲು ಮಾಡಿರುವ ವ್ಯವಸ್ಥಿತವಾದ ಪಾರ್ಕಿಗ್ ತಾಣವೋ ಎಂಬ ಗೊಂದಲ ವಾಹನ ಸವಾರರು ಮತ್ತು ಸಾರ್ವಜನಿಕರನ್ನು ಕಾಡುತ್ತಿದೆ. ಪಟ್ಟಣದ ನ್ಯಾಯಾಲಯದ ಆವರಣದ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಸರತಿ ಸಾಲಿನಲ್ಲಿ ಕಾರು, ಬೈಕ್‌ಗಳನ್ನು ನಿಲ್ಲಿಸಲಾಗಿರುತ್ತದೆ. ಇದರಿಂದಲೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಇದರ ಜೊತೆಗೆ ಗ್ಯಾರೇಜ್ ಕೆಲಸ ಮಾಡುವವರು ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ರಿಪೇರಿ ಮಾಡುತ್ತಿರುತ್ತಾರೆ.

ಕೆಟ್ಟಿರುವ ವಾಹನಗಳನ್ನು ನಿಲ್ಲಿಸುವುದು ಹಾಗೂ ಇದರ ಜೊತೆಗೆ ಇತರ ಕೆಲಸಗಳನ್ನು ಮಾಡುತ್ತಿರುವುದು ಕಂಡು ಬರುತ್ತಿದೆ. ಟಿಬಿ ವೃತ್ತದಲ್ಲಿಯೂ ಇದೇ ಸಮಸ್ಯೆ ಇದೆ. ಏಷ್ಯಾ ಖಂಡದಲ್ಲೇ ಅತಿ ದೊಡ್ಡದಾದ ಎಳನೀರು ಮಾರುಕಟ್ಟೆ ಎಂಬ ಖ್ಯಾತಿ ಇರುವ ಮಾರುಕಟ್ಟೆಗೆ ಎಳನೀರು ತುಂಬಿಕೊಂಡು ಬರುವ ವಾಹನಗಳನ್ನು ವರ್ತಕರು ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿಕೊಂಡಿರುತ್ತಾರೆ. ಈ ಕಾರಣಕ್ಕಾಗಿ ಸರ್ವಿಸ್ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲು ಹರಸಾಹಸ ಪಡಬೇಕಾಗಿದೆ.

ಸದಾಕಾಲ ಇಲ್ಲಿ ನೆರಳು ಇರುವುದರಿಂದ ವಾಹನಗಳನ್ನು ನಿಲ್ಲಿಸುವ ಪರಿಪಾಠ ಹೆಚ್ಚಾಗಿದ್ದು, ಕೆಲ ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗುತ್ತದೆ. ಇಲ್ಲಿಗೆ ಒಬ್ಬ ಸಂಚಾರ ಪೊಲೀಸ್ ಪೇದೆಯನ್ನು ನೇಮಿಸದಿರುವುದು ವಿಪರ್ಯಾಸದ ಸಂಗತಿ.

ಅಧಿಕಾರಿಗಳ ಜಾಣಕುರುಡು: 

ವಾಹನ ನಿಲುಗಡೆಗೆ ನೀತಿ ನಿಯಮ ಪಾಲಿಸದ ಕಾರಣ ಸುಗಮ ಸಂಚಾರಕ್ಕೆ ತೊಂದರೆಯಾಗುವುದು ಸಹಜ. ಸಾರ್ವಜನಿಕರು ಸರ್ವಿಸ್ ರಸ್ತೆಯಲ್ಲಿ ಸಂಚರಿಸಲು ಕಷ್ಟವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಪೊಲೀಸರು ನಿತ್ಯ ನೋಡುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಏಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಪೊಲೀಸರು ಸರ್ವಿಸ್ ರಸ್ತೆಯಲ್ಲಿ ವಾಹನ ನಿಲ್ಲಿಸದಂತೆ ಕ್ರಮ ಕೈಗೊಂಡು, ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಿದೆ.

” ಮದ್ದೂರು ವ್ಯಾಪ್ತಿಯ ಬಹುತೇಕ ಕಡೆಗಳಲ್ಲಿರುವ ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸುಗಮ ಸಂಚಾ ರಕ್ಕೆ ತೊಂದರೆ ಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ವಾಹನ ಸವಾರರಿಗೆ ಅನುಕೂಲ ಕಲ್ಪಿಸಿ ಕೊಡಬೇಕು.”

-ಚೆನ್ನಪ್ಪ, ನಿವೃತ್ತ ಶಿಕ್ಷಕ

ಎಲ್ಲೆಂದರಲ್ಲಿ ನಿಲ್ಲುವ ಬಸ್‌ಗಳು!:  ಪಟ್ಟಣದ ಹೊಸಕೊಲ್ಲಿ ಸರ್ಕಲ್ ಬಳಿಯ ಸರ್ವಿಸ್ ರಸ್ತೆ, ಬಸ್ ನಿಲ್ದಾಣದ ಮುಂದಿರುವ ಸರ್ವಿಸ್ ರಸ್ತೆ ಮತ್ತು ಪ್ರವಾಸಿ ಮಂದಿರದ ಬಳಿ ಇರುವ ಸರ್ವಿಸ್ ರಸ್ತೆ ಬಳಿ, ತಾಲ್ಲೂಕು ಕಚೇರಿ, ನ್ಯಾಯಾಲಯದ ಮುಂಭಾಗ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಎಲ್ಲೆಂದರಲ್ಲಿ ನಿಲ್ಲಿಸಿ ಜನರನ್ನು ಹತ್ತಿಸಿಕೊಳ್ಳುವುದು, ಇಳಿಸುವುದು ಪರಿಪಾಠವಾಗಿದೆ. ಜನರು ಕೈ ತೋರಿದ ಕಡೆ ಏಕಾಏಕಿ ವಾಹನಗಳನ್ನು ನಿಲ್ಲಿಸುವುದರಿಂದ ಹಲವು ಬಾರಿ ಹಿಂದಿನಿಂದ ಬರುತ್ತಿರುವ ವಾಹನಗಳು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಖಾಸಗಿ ಬಸ್,ಆಟೋ,ಟೆಂಪೋಗಳವರ ಬೇಜವಾಬ್ದಾರಿಯೂ ಇದಕ್ಕೆ ಕಾರಣವಾಗಿದೆ. ಸಂಚಾರಿ ಪೊಲೀಸರು ಈ ಬಗ್ಗೆ ಕ್ರಮ ವಹಿಸಬೇಕಿದೆ.

 

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

8 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

8 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

9 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

9 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

9 hours ago