Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೆ ಅಂಬಾವಿಲಾಸ ಅರಮನೆಯನ್ನು ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇದೀಗ ಅರಮನೆ ಮಂಡಳಿ ಟಿಕೆಟ್ ದರ ಏರಿಕೆಯ ಶಾಕ್ ನೀಡಿದೆ.

ಇದರಿಂದಾಗಿ ವಿಶ್ವ ವಿಖ್ಯಾತ ಮೈಸೂರು ಅರ ಮನೆಗೆ ದೇಶ- ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳಲಿದ್ದು, ಕುಟುಂಬ ಸಮೇತ ಅರಮನೆ ವೀಕ್ಷಣೆಯು ಈಗ ದುಬಾರಿಯಾಗಲಿದೆ. ವಯಸ್ಕರಿಗೆ ಇದ್ದ ಟಿಕೆಟ್ ದರವನ್ನು ೧೦೦ ರೂ. ನಿಂದ ೧೨೦ ರೂ. ಗೆ ಏರಿಕೆ ಮಾಡಲಾಗಿದೆ. ವಿದೇಶಿ ಪ್ರವಾಸಿಗರ ಟಿಕೆಟ್ ದರವನ್ನು ೩೦೦ ರೂ. ನಿಂದ ಒಂದು ಸಾವಿರ ರೂ. ಗಳಿಗೆ ಏರಿಸ ಲಾಗಿದೆ. ೧೦ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ೫೦ರೂ. ನಿಂದ ೭೦ ರೂ. ಗೆ ಹೆಚ್ಚಿಸಲಾಗಿದೆ.

ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರ ೫೦ ರೂ. ಹಾಗೂ ವಿದೇಶಿ ಪ್ರವಾಸಿಗರಿಗೆ ೧೦೦೦ ರೂ. ಅನುಮೋದಿತ ಪರಿಷ್ಕತ ಶುಲ್ಕವನ್ನು ನಿಗದಿ ಮಾಡಲಾಗಿದೆ, ಧ್ವನಿ ಮತ್ತು ಬೆಳಕು ವೀಕ್ಷಣೆಗೆ ೭೦ ರೂ. ನಿಗದಿಪಡಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿಎಸ್‌ ಸುಬ್ರಹ್ಮಣ್ಯ ತಿಳಿಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳಿಗೆ ಶುಲ್ಕವನ್ನು ಕೈಬಿಟ್ಟು ಪ್ರವಾಸಿಗರಿಗೆ ಉಚಿತಗೊಳಿಸಿ, ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

Tags:
error: Content is protected !!