ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೆ ಅಂಬಾವಿಲಾಸ ಅರಮನೆಯನ್ನು ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇದೀಗ ಅರಮನೆ ಮಂಡಳಿ ಟಿಕೆಟ್ ದರ ಏರಿಕೆಯ ಶಾಕ್ ನೀಡಿದೆ.
ಇದರಿಂದಾಗಿ ವಿಶ್ವ ವಿಖ್ಯಾತ ಮೈಸೂರು ಅರ ಮನೆಗೆ ದೇಶ- ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳಲಿದ್ದು, ಕುಟುಂಬ ಸಮೇತ ಅರಮನೆ ವೀಕ್ಷಣೆಯು ಈಗ ದುಬಾರಿಯಾಗಲಿದೆ. ವಯಸ್ಕರಿಗೆ ಇದ್ದ ಟಿಕೆಟ್ ದರವನ್ನು ೧೦೦ ರೂ. ನಿಂದ ೧೨೦ ರೂ. ಗೆ ಏರಿಕೆ ಮಾಡಲಾಗಿದೆ. ವಿದೇಶಿ ಪ್ರವಾಸಿಗರ ಟಿಕೆಟ್ ದರವನ್ನು ೩೦೦ ರೂ. ನಿಂದ ಒಂದು ಸಾವಿರ ರೂ. ಗಳಿಗೆ ಏರಿಸ ಲಾಗಿದೆ. ೧೦ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ೫೦ರೂ. ನಿಂದ ೭೦ ರೂ. ಗೆ ಹೆಚ್ಚಿಸಲಾಗಿದೆ.
ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರ ೫೦ ರೂ. ಹಾಗೂ ವಿದೇಶಿ ಪ್ರವಾಸಿಗರಿಗೆ ೧೦೦೦ ರೂ. ಅನುಮೋದಿತ ಪರಿಷ್ಕತ ಶುಲ್ಕವನ್ನು ನಿಗದಿ ಮಾಡಲಾಗಿದೆ, ಧ್ವನಿ ಮತ್ತು ಬೆಳಕು ವೀಕ್ಷಣೆಗೆ ೭೦ ರೂ. ನಿಗದಿಪಡಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿಎಸ್ ಸುಬ್ರಹ್ಮಣ್ಯ ತಿಳಿಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳಿಗೆ ಶುಲ್ಕವನ್ನು ಕೈಬಿಟ್ಟು ಪ್ರವಾಸಿಗರಿಗೆ ಉಚಿತಗೊಳಿಸಿ, ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…