ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.
ಮೈಸೂರಿನಲ್ಲಿ ಈದ್‌ಮಿಲಾದ್, ಗಣೇಶೋತ್ಸವ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಹಿಂದೂ-ಮುಸ್ಲಿಂ ಸಮುದಾಯ ದವರು ಭಾವೈಕ್ಯತೆ ಮೆರೆದು ಇತರರಿಗೂ ಮಾದರಿಯಾಗಿದ್ದಾರೆ. ನಗರದ ಸುಣ್ಣದಕೇರಿ ಬಡಾವಣೆಯಲ್ಲಿ ಶ್ರೀ ವಿನಾಯಕ ಯುವಕರ ಬಳಗ ವತಿಯಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಗಿದ್ದ ಸ್ಥಳಕ್ಕೆ ಆಗಮಿಸಿದ ಮುಸ್ಲಿಂ ಸಮುದಾಯದ ಮುಖಂಡರು ಈದ್‌ಮಿಲಾದ್ ಪ್ರಯುಕ್ತ ಶುಭಾಶಯ ವಿನಿಮಯ ಮಾಡಿ ಕೊಂಡರು. ಈದ್‌ಮಿಲಾದ್ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಬಾಂಧವರು ನೇರವಾಗಿ ಗಣೇಶ ಪ್ರತಿ ಷ್ಠಾಪನೆ ಸ್ಥಳಕ್ಕೆ ಆಗಮಿಸಿ ಶುಭಾಶಯ ಹೇಳಿದರು. ಶಾಲಾ ಮಕ್ಕಳಿಗೆ ಹೋಳಿಗೆ ಕೊಟ್ಟು ಪುಸ್ತಕಗಳನ್ನು ವಿತರಿಸಿದರು. ಹೊರಗಿನ ವಿಚಾರಕ್ಕೆ ಸ್ಪದ ಕೊಡದೆ ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಕೂಡಿ ಬಾಳೋಣ ಎನ್ನುವ ಶಪಥ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್‌ಬಾಬು, ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತವೆ, ಪ್ರತಿವರ್ಷವೂ ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳು ಸಮೀಪದಲ್ಲೇ ಬರುವುದರಿಂದ ಉಭಯ ಸಮಾಜದವರು ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿ ಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳಬೇಕು ಎಂದರು. ಹಬ್ಬಗಳು ಎಲ್ಲರನ್ನೂ ಒಂದು ಗೂಡಿಸುವಂತೆ ನಡೆಯುತ್ತದೆ. ಆದರೆ, ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಗೊಂದಲ ಮೂಡಿಸ ಬಾರದು. ದೇವನೊಬ್ಬ ನಾಮ ಹಲವು ಎನ್ನುವಂತೆ ನಾವೆಲ್ಲರೂ ಮನುಷ್ಯರು ಎಂಬುದನ್ನು ಅರಿಯಬೇಕು ಎಂದರು. ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಶ್ರೀ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಮಂಜುನಾಥ್, ಕಿಶೋರ್ ಕುಮಾರ್, ಜಿ. ರಾಘವೇಂದ್ರ, ಬ್ಯಾಂಕ್ ಸಿದ್ದರಾಜು, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷ ಹಿನಕಲ್ ಉದಯ್, ಕಿರಣ್, ಚಕ್ರಪಾಣಿ, ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷ, ಗುಲ್ಚನ್ ಪಾಷ, ಇರ್ಫಾನ್, ಸೈಯಾದ್, ಇಮ್ರಾನ್ ಪಾಷ, ಮಹಮ್ಮದ್, ಶಫಿಉಲ್ಲಾ ಖಾನ್ ಹಾಜರಿದ್ದರು.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…