Andolana originals

ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಮುಖಂಡರು

ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.

ಮೈಸೂರಿನಲ್ಲಿ ಈದ್‌ಮಿಲಾದ್, ಗಣೇಶೋತ್ಸವ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಹಿಂದೂ-ಮುಸ್ಲಿಂ ಸಮುದಾಯ ದವರು ಭಾವೈಕ್ಯತೆ ಮೆರೆದು ಇತರರಿಗೂ ಮಾದರಿಯಾಗಿದ್ದಾರೆ. ನಗರದ ಸುಣ್ಣದಕೇರಿ ಬಡಾವಣೆಯಲ್ಲಿ ಶ್ರೀ ವಿನಾಯಕ ಯುವಕರ ಬಳಗ ವತಿಯಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಗಿದ್ದ ಸ್ಥಳಕ್ಕೆ ಆಗಮಿಸಿದ ಮುಸ್ಲಿಂ ಸಮುದಾಯದ ಮುಖಂಡರು ಈದ್‌ಮಿಲಾದ್ ಪ್ರಯುಕ್ತ ಶುಭಾಶಯ ವಿನಿಮಯ ಮಾಡಿ ಕೊಂಡರು. ಈದ್‌ಮಿಲಾದ್ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಬಾಂಧವರು ನೇರವಾಗಿ ಗಣೇಶ ಪ್ರತಿ ಷ್ಠಾಪನೆ ಸ್ಥಳಕ್ಕೆ ಆಗಮಿಸಿ ಶುಭಾಶಯ ಹೇಳಿದರು. ಶಾಲಾ ಮಕ್ಕಳಿಗೆ ಹೋಳಿಗೆ ಕೊಟ್ಟು ಪುಸ್ತಕಗಳನ್ನು ವಿತರಿಸಿದರು. ಹೊರಗಿನ ವಿಚಾರಕ್ಕೆ ಸ್ಪದ ಕೊಡದೆ ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಕೂಡಿ ಬಾಳೋಣ ಎನ್ನುವ ಶಪಥ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್‌ಬಾಬು, ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತವೆ, ಪ್ರತಿವರ್ಷವೂ ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳು ಸಮೀಪದಲ್ಲೇ ಬರುವುದರಿಂದ ಉಭಯ ಸಮಾಜದವರು ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿ ಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳಬೇಕು ಎಂದರು. ಹಬ್ಬಗಳು ಎಲ್ಲರನ್ನೂ ಒಂದು ಗೂಡಿಸುವಂತೆ ನಡೆಯುತ್ತದೆ. ಆದರೆ, ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಗೊಂದಲ ಮೂಡಿಸ ಬಾರದು. ದೇವನೊಬ್ಬ ನಾಮ ಹಲವು ಎನ್ನುವಂತೆ ನಾವೆಲ್ಲರೂ ಮನುಷ್ಯರು ಎಂಬುದನ್ನು ಅರಿಯಬೇಕು ಎಂದರು. ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಶ್ರೀ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಮಂಜುನಾಥ್, ಕಿಶೋರ್ ಕುಮಾರ್, ಜಿ. ರಾಘವೇಂದ್ರ, ಬ್ಯಾಂಕ್ ಸಿದ್ದರಾಜು, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷ ಹಿನಕಲ್ ಉದಯ್, ಕಿರಣ್, ಚಕ್ರಪಾಣಿ, ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷ, ಗುಲ್ಚನ್ ಪಾಷ, ಇರ್ಫಾನ್, ಸೈಯಾದ್, ಇಮ್ರಾನ್ ಪಾಷ, ಮಹಮ್ಮದ್, ಶಫಿಉಲ್ಲಾ ಖಾನ್ ಹಾಜರಿದ್ದರು.

 

andolana

Recent Posts

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

7 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

13 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

14 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

14 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

17 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

21 hours ago