Andolana originals

ಐತಿಹಾಸಿಕ ಕೋಟೆ ಗಣಪತಿ ವಿಸರ್ಜನಾ ಮಹೋತ್ಸವ

ಮೆರವಣಿಗೆಗೆ ರಂಗು ತಂದ ಜಾನಪದ ಕಲಾ ತಂಡಗಳ ಆಕರ್ಷಣೆ 

ನಾಗಮಂಗಲ: ಇತಿಹಾಸ ಪ್ರಸಿದ್ಧ ಪಟ್ಟಣದ ಕೋಟೆ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಗಣಪತಿ ಮೂರ್ತಿ ಮೆರವಣಿಗೆ ಮತ್ತು ಶೋಭಾಯಾತ್ರೆಯಲ್ಲಿ ಸಹಸ್ರಾರು ಜನರ ನಡುವೆ ವಿಜೃಂಭಣೆಯಿಂದ ಶುಕ್ರವಾರ ನೆರವೇರಿತು.

ಆದಿಚುಂಚನಗಿರಿ ಮಠದ ಹಾಸನ ಶಾಖೆಯ ಕಾರ್ಯದರ್ಶಿ ಶ್ರೀ ಶಂಭೂನಾಥ ಸ್ವಾಮೀಜಿ ಬೆಳಿಗ್ಗೆ ೧೦.೩೦ ಗಂಟೆಗೆ ಗಣಪತಿಗೆ ಪೂಜೆ ಸಲ್ಲಿಸುವ ಮೂಲಕ ೭೩ನೇ ಉತ್ಸವಕ್ಕೆ ಚಾಲನೆ ನೀಡಿದರು. ಸತ್ಕೀರ್ತಿನಾಥ ಸ್ವಾಮೀಜಿ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಕೆ.ಸುರೇಶ್‌ಗೌಡ, ಎನ್. ಅಪ್ಪಾಜಿಗೌಡ, ಗುತ್ತಿಗೆದಾರ ಎನ್.ಲಕ್ಷ್ಮೀ ಕಾಂತ್, ನಟ ಸಚಿನ್ ಚಲುವರಾಯಸ್ವಾಮಿ, ಮತ್ತಿತರ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಬೆಳಿಗ್ಗೆಯಿಂದಲೇ ಕೋಟೆ ಗಣಪತಿ ದೇವಸ್ಥಾನದಲ್ಲಿ ಪಂಚ ಅಭಿಷೇಕ, ನಂತರ ಅಲಂಕೃತಗೊಂಡಿದ್ದ ಶ್ರೀ ಕೋಟೆ ಗಣಪತಿ ಮೂರ್ತಿಯನ್ನು ಅಲಂಕೃತ ಪುಷ್ಪಮಂಟಪೋ ತ್ಸವದಲ್ಲಿರಿಸಿ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಉತ್ಸವ ಪ್ರಾರಂಭವಾಗುತ್ತಿದ್ದಂತೆ ಸಾವಿರಾರು ಜನರಿಂದ ಕರತಾಡನ, ಜಯಘೋಷಗಳು ಮೊಳಗಿದವು. ಮೆರವಣಿಗೆಯಲ್ಲಿ ಮಂಗಳವಾದ್ಯ, ನಾದಸ್ವರ, ಹತ್ತಾರು ಜಾನಪದ ಕಲಾ ತಂಡಗಳು ಭಾಗಿಯಾಗಿದ್ದವು.

ಜಾನಪದ ತಂಡಗಳು ಪ್ರದರ್ಶಿಸಿದ ವಿವಿಧ ಶೈಲಿಯ ಜಾನಪದ ನೃತ್ಯಗಳು ಜನರನ್ನು ಆಕರ್ಷಿಸಿದವು. ಮೆರವಣಿಗೆ ಪಟ್ಟಣದ ಕೆಎಸ್ ಆರ್‌ಟಿಸಿ ರಸ್ತೆಗೆ ಆಗಮಿಸುತ್ತಿದ್ದಂತೆ, ಸಾವಿರಾರು ಜನರು, ವಿದ್ಯಾರ್ಥಿಗಳು ಮೆರವಣಿಗೆ ಮೂಲಕ ಸಾಗಿ ಮೆರುಗು ನೀಡಿದರು. ಡಿಜೆ ಶಬ್ದಕ್ಕೆ ಸಾವಿರಾರು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.

ಮರಿಯಪ್ಪ ವೃತ್ತದಲ್ಲಿ ನಿರ್ಮಿಸಿರುವ ಬೃಹತ್ ಹನುಮಾನ್ ಹೆಬ್ಬಾಗಿಲನ್ನು ಪ್ರವೇಶ ಮಾಡಿ ಮೆರವಣಿಗೆ ಹೊರಬರುತ್ತಿದ್ದಂತೆ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ನಂತರ\ ಚಾಮರಾಜ ಜೇವರ್ಗಿ ರಸ್ತೆಯ ಮೂಲಕ ಸಾಗಿದ ಮೆರವಣಿಗೆಯು ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತಕ್ಕೆ ಆಗಮಿಸಿತು. ಅಲ್ಲಿ ಸಾವಿರಾರು ಭಕ್ತರು ಉತ್ಸವ ವೀಕ್ಷಣೆ ಮಾಡಿದರು. ಹತ್ತಾರು ಜೆಸಿಬಿಗಳ ಮೂಲಕ ಬಗೆಬಗೆಯ ಹೂಗಳ ಸುರಿಮಳೆಗೈಯ್ಯಲಾಯಿತು. ನಂತರ ತಿರುವು ಪಡೆದ ಉತ್ಸವ ಮತ್ತೆ ಜೇವರ್ಗಿ- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳಿ ಪಟ್ಟಣದ ಮಂಡ್ಯ ವೃತ್ತಕ್ಕೆ ಆಗಮಿಸಿತು.

ಮಂಡ್ಯ ವೃತ್ತಕ್ಕೆ ಗಣಪತಿ ಉತ್ಸವ ಆಗಮಿಸುತ್ತಿದ್ದಂತೆ ಅಲ್ಲಿ ನೆರೆದಿದ್ದ ೧೦ ಸಾವಿರಕ್ಕೂ ಹೆಚ್ಚು ಮಂದಿಯ ಹರ್ಷೋದ್ಗಾರ ಮುಗಿಲು ಮುಟ್ಟಿತು. ಯುವಕರು ತಮಟೆ, ಡಿಜೆ ಶಬ್ದಕ್ಕೆ ಕುಣಿದು ಕುಪ್ಪಳಿಸಿದರು. ಶ್ರೀ ಕೋಟೆ ವಿದ್ಯಾಗಣಪತಿ ಸೇವಾ ಸಮಿತಿಯ ಜತೆಗೆ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ದುರ್ಗಾವಾಹಿನಿ ಸಂಘಟನೆಯ ಸಹಭಾಗಿತ್ವದಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯಿತು.

ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ಅಽಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ನಾಗಮಂಗಲ ಡಿವೈಎಸ್‌ಪಿ ಚಲುವರಾಜು, ಸಿಪಿಐ ನಿರಂಜನ್, ತಹಸಿಲ್ದಾರ್ ಜಿ.ಆದರ್ಶ, ನಾಗಮಂಗಲ ಇನ್‌ಸ್ಪೆಕ್ಟರ್ ಶಿವಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ರಾಜೇಂದ್ರ, ಬೆಳ್ಳೂರು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ರವಿಕುಮಾರ್, ಬಿಂಡಿಗನ ವಿಲೆ ಇನ್‌ಸ್ಪೆಕ್ಟರ್ ಮಾರುತಿ, ಹಲವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

” ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಿದ್ದರು. ಉತ್ಸವದ ಬಂದೋಬಸ್ತ್‌ಗಾಗಿ ಎಎಸ್‌ಪಿ, ಡಿವೈಎಸ್‌ಪಿ, ಸಿಪಿಐಗಳು, ೮೦೦ಕ್ಕೂ ಹೆಚ್ಚು ಪೊಲೀಸ್ ಮತ್ತು ಗೃಹರಕ್ಷಕದಳದ ಸಿಬ್ಬಂದಿ, ೫ ಕೆಎಸ್‌ಆರ್‌ಪಿ ತುಕಡಿ, ೧೦ ಡಿಆರ್ ತುಕಡಿಗಳನ್ನು ನಿಯೋಜಿಸಲಾಗಿತ್ತು. ಆಯಾಕಟ್ಟಿನ ಸ್ಥಳಗಳು, ಮಹಡಿಯ ಮೇಲ್ಭಾಗದಲ್ಲಿ ಪೊಲೀಸರ ಕಣ್ಗಾವಲು ಹಾಕಲಾಗಿತ್ತು. ಕಾರ್ಯಕ್ರಮದುದ್ದಕ್ಕೂ ಡ್ರೋನ್‌ಗಳು ಹಾರಾಡಿ ಕಾರ್ಯಕ್ರಮವನ್ನು ಚಿತ್ರೀಕರಿಸಿದವು. ಹಲವು ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಕಟ್ಟೆಚ್ಚರ ವಹಿಸಲಾಗಿತ್ತು.”

ಜಾನಪದ ಕಲಾತಂಡಗಳ ಆಕರ್ಷಣೆ:  ಸಾಮಾಜಿಕ ಸಂದೇಶ ಸಾರುವ ಟ್ಯಾಬ್ಲೋಗಳು,ಡಿಜೆ ಸೇರಿದಂತೆ ಕೇರಳದ ಸುಪ್ರಸಿದ್ಧ ಗೊಂಬೆ ನೃತ್ಯ, ವೀರಭದ್ರ ಕುಣಿತ, ತಮಟೆ ಚಮತ್ಕಾರ, ನಾಸಿಕ್‌ಡೋಲ್, ಚಿಟ್‌ಮೇಳ, ಆದಿಚುಂಚನಗರಿ ಕಲಾ ತಂಡದ ವೀರಗಾಸೆ ನೃತ್ಯ, ಮನುಷ್ಯ ಎಲುಬು ನೃತ್ಯ, ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರುಗು ನೀಡಿದವು.

ಆಂದೋಲನ ಡೆಸ್ಕ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

2 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

2 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

2 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

2 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

2 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

2 hours ago