Andolana originals

ಮಂಜಿನ ನಗರಿಯಲ್ಲಿ ಇಂದಿನಿಂದ ಹಾಕಿ ಹಬ್ಬ

ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಮುದ್ದಂಡ ಕುಟುಂಬ ಸಿದ್ಧತೆ,  25ನೇ ವರ್ಷದ ಕಪ್‌ಗಾಗಿ 366 ತಂಡಗಳ ಸೆಣಸಾಟ

-ನವೀನ್ ಡಿಸೋಜ

ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಹಬ್ಬದ ಸಂಭ್ರದಲ್ಲಿದ್ದು, 25ನೇ ವರ್ಷದ ಪಂದ್ಯಾವಳಿಗೆ 396ತಂಡಗಳು ನೋಂದಾಯಿಸಿಕೊಂಡಿವೆ. ಶುಕ್ರವಾರದಿಂದ ಮಡಿಕೇರಿಯಲ್ಲಿ ಮುದ್ದಂಡ ಕಪ್ ಹಾಕಿ ಪಂದ್ಯಾವಳಿ ಆರಂಭವಾಗಲಿದ್ದು, ಹಾಕಿ ಕ್ರೀಡಾ
ರಸದೌತಣವನ್ನು ಕಣ್ತುಂಬಿಕೊಳ್ಳಲು ಕ್ರೀಡಾ ಪ್ರೇಮಿಗಳು ಕಾತರರಾಗಿದ್ದಾರೆ.

ಮಡಿಕೇರಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಹಾಕಿ ಉತ್ಸವ ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 9.45 ಗಂಟೆಗೆ ನಗರದ
ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಕೊಡವ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ನಂತರ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಪಂದ್ಯಾಟ ವೀಕ್ಷಣೆಗೆ ಸುಸಜ್ಜಿತ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 25,000 ಮಂದಿ ಕುಳಿತು ಪಂದ್ಯಾಟ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 35 ಪುಡ್ ಸ್ಟಾಲ್‌ಗಳು ಇರಲಿದ್ದು, ಮೈದಾನದಲ್ಲೇ ಕ್ರೀಡಾ ಪ್ರೇಮಿಗಳಿಗೆ ಅಗತ್ಯ ತಿಂಡಿ ತಿನಿಸುಗಳು ದೊರೆಯಲಿದೆ.

ಪಂದ್ಯಾವಳಿ ವೀಕ್ಷಣೆಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಸಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸೂಕ್ತವಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಅವರ ಅನುದಾನದಲ್ಲಿ 1,500 ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ದಿಲೀಪ್ ನಾಚಪ್ಪ ಹಾಗೂ
ಯಲದಾಳು ಮನೋಜ್ ಬೋಪಯ್ಯ ಅವರ ಜಾಗದಲ್ಲಿ 1,000 ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ರಸ್ತೆ ಬದಿ ಹೊರತುಪಡಿಸಿ
ಸುಮಾರು 2,500 ವಾಹನಗಳಿಗೆ ಪಾರ್ಕಿಂಗ್  ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಳ್ಳಿ ಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಈಗಾಗಲೇ 40 ತಂಡಗಳು ನೋಂದಾಯಿಸಿ ಕೊಂಡಿವೆ. ನೋಂದಣಿಯ ಕೊನೆಯ ದಿನಾಂಕ ಏ.10 ಆಗಿರುವುದರಿಂದ ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳಲಿವೆ. ಮೂರನೇ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ.

ಸೆಮಿಫೈನಲ್ ಸಂದರ್ಭದಲ್ಲಿ ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ಲಾಲ್ ರಿಮ್  ಸಿಯಾಮಿ ಆಗಮಿಸಿ ಹಾಕಿ ಕ್ರೀಡೆಯ ಕುರಿತು ಮಾಹಿತಿ ನೀಡಲಿದ್ದಾರೆ. ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹಾಗೂ ಒಲಿಂಪಿಯನ್  ಮನ್‌ಪ್ರೀತ್‌ಸಿಂಗ್ ಕೂಡ ಪಂದ್ಯಾವಳಿಯ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಮಿಫೈನಲ್ ಪಂದ್ಯಾವಳಿಗೆ ಹಿರಿಯ ರಾಜಕಾರಣಿ ಅಜಯ್ ಮಕೆನ್ ಆಗಮಿಸುವ ಭರವಸೆ ನೀಡಿದ್ದಾರೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

ಯಾರ ಮುಡಿಗೆ ಮುದ್ದಂಡ ಕಪ್‌?

ಕೊಡವ ಕೌಟುಂಬಿಕ ಹಾಕಿ ಉತ್ಸವದಲ್ಲಿ ಪಳಂಗಂಡ 5, ಕೂತಂಡ 4, ಕಲಿಯಂಡ 3, ಕುಲ್ಲೇಟೀರ 3, ನೆಲ್ಲಮಕ್ಕಡ 3, ಚೇದಂಡ 3, ಅಂಜಪರವಂಡ 2, ಮಂಡೇಪಂಡ ಹಾಗೂ ಕುಪ್ಪಂಡ ತಂಡಗಳು ತಲಾ 1 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪಳಂಗಂಡ ತಂಡ ಹ್ಯಾಟ್ರಿಕ್ ಗೆಲುವು ಸಾಧಿಸಿಯೂ ಗಮನ ಸೆಳೆದಿದೆ. ಪಳಂಗಂಡ 3, ಕೂತಂಡ 3, ಕಲಿಯಂಡ 2, ಕುಲ್ಲೇಟೀರ 1, ನೆಲ್ಲಮಕ್ಕಡ 4, ಚೇದಂಡ 1, ಅಂಜಪರವಂಡ 3 ಬಾರಿ ರನ್ನರ್ ಅಫ್ ಆಗಿಯೂ ಗಮನ ಸೆಳೆದಿವೆ. ಹೀಗಾಗಿ ಈ ಬಾರಿ ಮುದ್ದಂಡ ಕಪ್ ಯಾವ ಕುಟುಂಬಕ್ಕೆ ಒಲಿಯಲಿದೆ ಎಂಬುದು ಕುತೂಹಲವಾಗಿದೆ.

ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಬೆಳ್ಳಿ ಹಬ್ಬದ ಪ್ರಯುಕ್ತ ವಿಭಿನ್ನ ಕಾರ್ಯಕ್ರಮಗಳನ್ನು
ಆಯೋಜಿಸಲಾಗಿದೆ. ಈ ಬಾರಿ ಕೊಡವ ಕುಟುಂಬಗಳ ದಾಖಲೆಯ 396 ತಂಡಗಳು ನೋಂದಾಯಿಸಿಕೊಂಡಿವೆ. ಪಂದ್ಯಾವಳಿಯ ಯಶಸ್ಸಿಗೆ ಸರ್ಕಾರದ ಸಂಪೂರ್ಣ ಸಹಕಾರವಿದೆ. ಜಿಲ್ಲೆಯ ಶಾಸಕದ್ವಯರು ಹಾಗೂ ಸಂಸದರು ಮೊದಲ ದಿನದಿಂದಲೂ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಎಲ್ಲರ ಸಹಕಾರವನ್ನು ಪಡೆಯಲಾಗಿದ್ದು, ಹಾಕಿ ಉತ್ಸವ ಯಶಸ್ವಿಯಾಗಿ ನಡೆಯಲಿದೆ.

-ಮುದ್ದಂಡ ರಶಿನ್ ಸುಬ್ಬಯ್ಯ, ಅಧ್ಯಕ್ಷರು, ಮುದ್ದಂಡ ಹಾಕಿ ಉತ್ಸವ

 

 

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

27 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

37 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

49 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

55 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

1 hour ago