Andolana originals

ಶೀಘ್ರ ಜಿಲ್ಲೆಯಲ್ಲಿ ಗೃಹ ಆರೋಗ್ಯ ’ ಸ್ಕೀಂ ಜಾರಿ

ಕೆ.ಬಿ.ರಮೇಶ ನಾಯಕ

ಸಾರ್ವಜನಿಕರ ಮನೆ ಬಾಗಿಲಿಗೆ ಆರೋಗ  ಸೇವೆ ನೀಡುವ ಸಲುವಾಗಿ ವ್ಯವಸ್ಥೆ 

*  ಮನೆ ಬಾಗಿಲಿಗೆ ರಕ್ತದೊತ್ತಡ,  ಮಧುಮೇಹ ಔಷಧ

*  ಜಿಲ್ಲೆಯಲ್ಲಿ ೧.೬೬ ಲಕ್ಷ ಜನರಲ್ಲಿ ರಕ್ತದೊತ್ತಡ ಸಮಸ್ಯೆ

*  ೧.೦೬ ಲಕ್ಷ ಜನರಲ್ಲಿ ಮಧುಮೇಹ ತೊಂದರೆ

ಮೈಸೂರು: ಇತ್ತೀಚೆಗೆ ಸಾಕಷ್ಟು ಜನರನ್ನು ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿವೆ. ಹಲವಾರು ಜನರು ಪ್ರತಿನಿತ್ಯ ನಿಗದಿತವಾಗಿ ಔಷಧ ಸೇವಿಸದೆ ತೊಂದರೆಯನ್ನು ಮೈಮೇಲೆ ಎಳೆದುಕೊಳ್ಳುತ್ತಿ ದ್ದಾರೆ. ಈ ಸಮಸ್ಯೆ ಮನಗಂಡು ರಾಜ್ಯ ಸರ್ಕಾರ ಇದೀಗ ರೋಗಿಗಳ ಮನೆ ಬಾಗಿಲಿಗೇ ಔಷಧ ಪೂರೈಕೆ ಮಾಡಲು ನಿರ್ಧರಿಸಿದ್ದು,  ರೋಗಿಗಳ ಮನೆಗಳಿಗೆ ತೆರಳಿ ಔಷಧವನ್ನು ವಿತರಿಸುವ ‘ಗೃಹ ಆರೋಗ್ಯ’ ಯೋಜನೆಯನ್ನು ಜಿಲ್ಲೆಯಲ್ಲಿ ಶೀಘ್ರದಲ್ಲೇ  ಜಾರಿಗೊಳಿಸುವ ಚಿಂತನೆಯಲ್ಲಿದೆ.

ಜಿಲ್ಲೆಯಲ್ಲಿ ಈಗಾಗಲೇ ಯಾವ ಮನೆಯಲ್ಲಿ ಎಷ್ಟು ಜನರು ರಕ್ತ ದೊತ್ತಡ ಹಾಗೂ ಮಧುಮೇಹ ಸಮಸ್ಯೆಗೆ ಗುರಿಯಾಗಿದ್ದಾರೆ ಎಂಬ ಅಂಕಿ ಅಂಶವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯು ಸಂಗ್ರಹಿಸಿದೆ. ಇದರ ಆಧಾರದ ಮೇಲೆ ಇನ್ನು ಮುಂದೆ ಮನೆ ಮನೆಗೆ ಔಷಧ ಪೂರೈಕೆಯಾಗಲಿದೆ. ಜನರ ಆರೋಗ್ಯ ಕಾಪಾಡುವಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ.

ರೋಗಿಗಳ ಮಾಹಿತಿ: ಜಿಲೆ ಯಲ್ಲಿ ೧.೬೬ ಲಕ್ಷ ಜನರು ರಕ್ತದೊತ್ತ ಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಾಗೆಯೇ ೧.೦೬ ಲಕ್ಷ  ಜನರಲ್ಲಿ ಮಧುಮೇಹ ಕಾಯಿಲೆ ಕಾಣಿಸಿಕೊಂಡಿದೆ.  ಆರೋಗ್ಯ ಇಲಾಖೆ ನಡೆಸಿದ ತಪಾಸಣೆ ಸಂದರ್ಭ ರಕ್ತದೊತ್ತ ಡ ಹಾಗೂ ಮಧುಮೇಹ ಕಾಣಿಸಿಕೊಂಡ ರೋಗಿಗಳಿಗೆ ರೋಗದ ಕುರಿತು ಮಾಹಿತಿ ನೀಡಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಔಷಧ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸಲಾಗಿದೆ. ಇದರ ಪರಿಣಾಮ ಸಾಕಷ್ಟು ಜನರು ಔಷಧ ಪಡೆದು ರೋಗವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳು ಔಷಧ ಪಡೆಯುತ್ತಿದ್ದು, ಮುಂದಿನ ದಿನ ಗಳಲ್ಲಿ ರೋಗಿಗಳ ಮನೆ ಬಾಗಿಲಿಗೆ ಔಷಧ ಪೂರೈಕೆಯಾಗಲಿದೆ.

ಮಧುಮೇಹ ನಿಯಂತ್ರಣ: ಆರೋಗ್ಯ ಇಲಾಖೆಯ ಪರಿಶ್ರಮದ ಫಲವಾಗಿ ಜಿಲ್ಲೆಯಲ್ಲಿ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆ ಇರುವವರ ಪ್ರಮಾಣ ಕ್ರಮವಾಗಿ ಶೇ.೬೫.೨೯ ಮತ್ತು ೭೬.೬೩ ರಷ್ಟು ನಿಯಂತ್ರಣದಲ್ಲಿ ಇದೆ.  ರೋಗಿಗಳಿಗೆ ಔಷಧವನ್ನು ಪ್ರತಿ ಮಂಗಳವಾರ ಮತ್ತು ಶುಕ್ರವಾರ ನೀಡಲಾಗುವುದು. ೫ ಸಾವಿರ ರೋಗಿಗಳಿಗೆ ಒಬ್ಬರು ಸ್ಟಾಫ್ ನರ್ಸ್, ೧ ಸಾವಿರ ರೋಗಿಗಳಿಗೆ ಒಬ್ಬರು ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಒಂದು ಬಾರಿ ಒಂದು ಮನೆಗೆ ಭೇಟಿ ನೀಡಿದರೆ ೧ ತಿಂಗಳಿಗೆ ಆಗುವಷ್ಟು ಔಷಧ ವಿತರಿಸಲಾಗುವುದು.

ಈ ಹಿಂದೆ ಸಾಂಕ್ರಾಮಿಕ ರೋಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜೀವ ಕಳೆದುಕೊಳ್ಳುತ್ತಿದ ರು. ಆದರೆ, ಇತ್ತೀಚಿನ ವರ್ಷಗಳಲ್ಲಿ ಬದಲಾದ ಜೀವನ ಶೈಲಿಯಿಂದ ಜನರಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿವೆ. ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ ಹಾಗೂ ಮಧುಮೇಹವನ್ನು ಸಾಕಷ್ಟು ಜನರು ಉದಾಸೀನವಾಗಿ ಪರಿಗಣಿಸಿ ಔಷಧ ಪಡೆಯಲು ಆಸಕ್ತಿ ತೋರಿಸುವುದಿಲ್ಲ. ಈ ಎರಡೂ ಸಮಸ್ಯೆಗಳು ಮುಂದಿನ ಹಂತದಲ್ಲಿ ಹಲವಾರು ಕಾಯಿಲೆಗಳಿಗೆ ಕಾರಣವಾಗಿ ಜನರು ತಮ್ಮ ಅಮೂಲ್ಯ ಜೀವವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಗೃಹ ಆರೋಗ್ಯವನ್ನು ಪ್ರಾಯೋಗಿಕವಾಗಿ ೨೦೨೪ರ ಅಕ್ಟೋಬರ್ ತಿಂಗಳಿನಲ್ಲಿ ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಯಿತು. ಅಲ್ಲಿ ಯೋಜನೆಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಇದೀಗ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಸ್ತರಿಸಲು ಘೋಷಣೆ ಮಾಡಿದೆ.  ಸದ್ಯದಲ್ಲಿಯೇ ಮೈಸೂರು ಜಿಲ್ಲೆಯ ಜನರಿಗೂ ಈ ಯೋಜನೆಯ ಪ್ರಯೋಜನ ಮನೆ ಬಾಗಿಲಿನಲ್ಲಿಯೇ ದೊರೆಯಲಿದೆ. ಇದಕ್ಕೆ ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಿ, ಸಾಕಷ್ಟು ಪ್ರಮಾಣದಲ್ಲಿ ಔಷಧವನ್ನು ದಾಸ್ತಾನು ಇರಿಸಲಾಗಿದೆ.  ಯೋಜನೆಯಡಿ ಪ್ರತಿ ಮನೆಗೂ ತೆರಳಿ ೩೦ ವರ್ಷ ಮೇಲ್ಪಟ್ಟ ಎಲ್ಲರಿಗೂ ತಪಾಸಣೆ ಮಾಡಲಾಗುತ್ತದೆ.

ಮಧುಮೇಹ ಮತ್ತು ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಿಗೆ ಮಾತ್ರೆಗಳನ್ನೂ ನೀಡಲಾಗುತ್ತದೆ.  ಈ ಔಷಧವನ್ನು ಪ್ರತಿ ತಿಂಗಳು ಪರಿಶೀಲಿಸಿ ಮುಂದುವರಿಕೆಗೆ ಅಗತ್ಯವಿರುವ ಮಾತ್ರೆಗಳನ್ನು ಒದಗಿಸಲಾಗುತ್ತದೆ.

” ಜಿಲ್ಲೆಯಲ್ಲಿ ರಕ್ತದೊತ್ತಡ ಹಾಗೂ ಮಧುಮೇಹಿಗಳ ಮನೆ ಬಾಗಿಲಿಗೆ ಔಷಧ ಪೂರೈಕೆ ಮಾಡುವ ‘ಗೃಹ ಆರೋಗ್ಯ’  ಯೋಜನೆಯನ್ನು ಸದ್ಯದಲ್ಲಿಯೇ ಜಾರಿಗೊಳಿಸಲಾಗುವುದು. ಯೋಜನೆ ಜಾರಿಗೆ ಬೇಕಾದ ಅಂಕಿ ಅಂಶಗಳನ್ನು ಈಗಾಗಲೇ ಸಿದ್ಧಪಡಿಸಿಕೊಳ್ಳಲಾಗಿದೆ. ಒಂದು ಬಾರಿ ಯೋಜನೆ ಜಾರಿಗೆ ಬಂದ ನಂತರ ರೋಗಿಗಳು ಮನೆಗೆ ಔಷಧ ನಿರಂತರವಾಗಿ ಪೂರೈಕೆಯಾಗಲಿದೆ.”

-ಡಾ.ಡಿ.ಜಿ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ,  ಆರೋಗ್ಯ ಇಲಾಖೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

1 min ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

4 mins ago

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

36 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

1 hour ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

1 hour ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

4 hours ago